Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:31 - ಕನ್ನಡ ಸಮಕಾಲಿಕ ಅನುವಾದ

31 ಈಜಿಪ್ಟಿನಿಂದ ರಾಯಭಾರಿಗಳು ಬರುವರು. ಕೂಷ್ ದೇಶದವರು ತಾವಾಗಿಯೇ ಬಂದು ದೇವರಿಗೆ ಅಧೀನವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಐಗುಪ್ತ ದೇಶದಿಂದ ರಾಯಭಾರಿಗಳು ಬರುವರು; ಕೂಷ್ ದೇಶದವರ ಕೈಗಳು ದೇವರಿಗೆ ಕಾಣಿಕೆಗಳನ್ನು ನೀಡಲಿಕ್ಕೆ ಅವಸರಪಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ರಾಯಭಾರಿಗಳಾಗಿ ಬರುವರು ಈಜಿಪ್ಟಿನ ಜನರು I ದೇವರಿಗೆ ಕೈ ಮುಗಿವರು ಇಥಿಯೋಪಿಯದವರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಐಗುಪ್ತ ದೇಶದಿಂದ ರಾಯಭಾರಿಗಳು ಬರುವರು; ಕೂಷ್ ದೇಶದವರ ಕೈಗಳು ದೇವರಿಗೆ ಕಾಣಿಕೆಗಳನ್ನು ನೀಡಲಿಕ್ಕೆ ಅವಸರ ಪಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಅವರು ಈಜಿಪ್ಟಿನಿಂದ ಐಶ್ವರ್ಯವನ್ನು ನಿನಗೆ ತಂದುಕೊಡುವಂತೆ ಮಾಡು. ದೇವರೇ, ಇಥಿಯೋಪಿಯದವರು ತಮ್ಮ ಐಶ್ವರ್ಯವನ್ನು ನಿನಗೆ ತಂದುಕೊಡುವಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:31
11 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಹೇಳುವುದೇನೆಂದರೆ: “ಈಜಿಪ್ಟಿನ ಆದಾಯವೂ, ಇಥಿಯೋಪಿಯದ ವ್ಯಾಪಾರವೂ, ಎತ್ತರದ ಮನುಷ್ಯರಾದ ಶೆಬದವರೂ ನಿಮ್ಮಲ್ಲಿಗೆ ಸೇರಿ, ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು, ನಿಮ್ಮ ಮುಂದೆ ಅಡ್ಡಬಿದ್ದು, ‘ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊಬ್ಬನಿಲ್ಲ; ಬೇರೆ ದೇವರು ಇಲ್ಲವೇ ಇಲ್ಲ.’ ”


ಕೂಷಿನ ನದಿಗಳ ಆಚೆಯಿಂದ ನನ್ನ ಭಕ್ತರೂ ಚದರಿಹೋದ ನನ್ನ ಜನರೂ ನನಗೆ ಕಾಣಿಕೆಗಳನ್ನು ತರುವರು.


ನಾವು ನಮ್ಮ ದೇವರ ಹೆಸರನ್ನು ಮರೆತು ಅನ್ಯ ದೇವರಿಗೆ ನಮ್ಮ ಕೈಗಳನ್ನು ಚಾಚಿದ್ದರೆ,


ನನ್ನ ಕೈಗಳನ್ನು ನಿಮ್ಮ ಕಡೆಗೆ ಚಾಚುತ್ತೇನೆ; ನನ್ನ ಪ್ರಾಣವು ದಾಹಗೊಂಡ ಭೂಮಿಯ ಹಾಗೆ ನಿಮಗಾಗಿ ದಾಹಗೊಂಡಿದೆ.


“ಅವರ ಮಧ್ಯದಲ್ಲಿ ಗುರುತನ್ನಿಟ್ಟು, ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ, ತಾರ್ಷೀಷ್, ಪೂಲ್, ಬಿಲ್ಲು ಪ್ರಯೋಗಿಸುವುದರಲ್ಲಿ ಪ್ರವೀಣರಾದ ಲೂದ್, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ನನ್ನ ಸಮಾಚಾರವನ್ನು ಕೇಳದ ನನ್ನ ಮಹಿಮೆಯನ್ನು ಕಾಣದೆ ಇರುವ ದೂರ ದ್ವೀಪನಿವಾಸಿಗಳಿಗೂ ಕಳುಹಿಸುವೆನು. ಅವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.


ಬಾಧೆಯ ದೆಸೆಯಿಂದ ನನ್ನ ಕಣ್ಣು ಮಂದವಾಗಿ ಹೋಗಿದೆ. ಯೆಹೋವ ದೇವರೇ, ದಿನವೆಲ್ಲಾ ನಿಮ್ಮನ್ನು ಕರೆಯುತ್ತೇನೆ. ನಾನು ನಿಮ್ಮ ಕಡೆಗೆ ನನ್ನ ಕೈಗಳನ್ನು ಚಾಚುತ್ತೇನೆ.


ಆಗ ಸೊಲೊಮೋನನು ಇಸ್ರಾಯೇಲಿನ ಸಮಸ್ತ ಸಮೂಹದವರ ಸಮ್ಮುಖದಲ್ಲಿ ಯೆಹೋವ ದೇವರ ಬಲಿಪೀಠದ ಮುಂದೆ ನಿಂತು, ಆಕಾಶದೆಡೆಗೆ ತನ್ನ ಕೈಗಳನ್ನು ಚಾಚಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು