Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:33 - ಕನ್ನಡ ಸಮಕಾಲಿಕ ಅನುವಾದ

33 ಪೂರ್ವದ ಆಕಾಶಗಳಲ್ಲಿ ಸವಾರಿ ಮಾಡುವ ದೇವರಿಗೆ ಹಾಡಿರಿ. ದೇವರ ಸ್ವರವು ಗುಡುಗಿನಂತೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅನಾದಿಕಾಲದಿಂದಿರುವ ಮಹೋನ್ನತಾಕಾಶದಲ್ಲಿ ವಾಹನಾರೂಢನಾಗಿ ಇರುವಾತನನ್ನು ಸ್ತುತಿಸಿರಿ. ಕೇಳಿರಿ; ಆತನ ಗರ್ಜನೆಯು ಮಹಾಘೋರವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಆದಿಮೊದಲು ಮೇಘಾರೂಢನಾಗಿರುವನು I ಕೊಂಡಾಡಿರಿ, ಗುಡುಗಿನಂತೆ ಗರ್ಜಿಸುವಾತನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅನಾದಿಕಾಲದಿಂದಿರುವ ಮಹೋನ್ನತಾಕಾಶದಲ್ಲಿ ವಾಹನಾರೂಢನಾಗಿರುವಾತನನ್ನು ಸ್ತುತಿಸಿರಿ. ಕೇಳಿರಿ; ಆತನ ಗರ್ಜನೆಯು ಮಹಾಘೋರವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ದೇವರಿಗೆ ಗಾಯನ ಮಾಡಿರಿ! ಅನಾದಿಕಾಲದಿಂದಿರುವ ಆತನು ಮಹೋನ್ನತವಾದ ಆಕಾಶದಲ್ಲಿ ರಥಾಶ್ವರೂಢನಾಗಿ ಸವಾರಿ ಮಾಡುವನು. ಆತನ ಗರ್ಜನೆಗೆ ಕಿವಿಗೊಡಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:33
18 ತಿಳಿವುಗಳ ಹೋಲಿಕೆ  

ದೇವರು ನೀರಿನ ಮೇಲೆ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾರೆ. ಮೋಡಗಳನ್ನು ತಮ್ಮ ರಥವಾಗಿ ಮಾಡುತ್ತಾರೆ. ಗಾಳಿಯ ರೆಕ್ಕೆಗಳ ಮೇಲೆ ಸವಾರಿ ಮಾಡುತ್ತಾರೆ.


ಅವರು ಕೆರೂಬಿಯ ಮೇಲೆ ಕೂತು ಹಾರಿದರು, ಗಾಳಿಯ ರೆಕ್ಕೆಗಳ ಮೇಲೆ ಕಾಣಿಸಿಕೊಂಡರು.


ದೇವರಿಗೆ ಹಾಡಿರಿ, ದೇವರ ಹೆಸರಿಗೆ ಸ್ತುತಿಗಳನ್ನು ಹಾಡಿರಿ. ಮೇಘಾರೂಢರಾಗಿರುವ ದೇವರನ್ನು ಕೊಂಡಾಡಿರಿ. ಅವರ ಹೆಸರು ಯೆಹೋವ ದೇವರು, ಅವರ ಮುಂದೆ ಉಲ್ಲಾಸಪಡಿರಿ.


ದೇವರೇ, ನಿಮ್ಮ ಸಿಂಹಾಸನವು ಪೂರ್ವಕಾಲದಿಂದ ಸ್ಥಿರವಾಗಿದೆ. ಯುಗಯುಗದಿಂದ ನೀವು ಇದ್ದೀರಿ.


“ಆದರೆ ದೇವರು ನಿಜವಾಗಿ ಭೂಮಿಯ ಮೇಲೆ ವಾಸವಾಗಿರುವರೋ? ಇಗೋ, ಆಕಾಶವೂ ಉನ್ನತೋನ್ನತ ಆಕಾಶವೂ ನಿಮಗೆ ಸಾಲದು. ಹಾಗಾದರೆ, ನಾನು ಕಟ್ಟಿಸಿದ ಈ ಆಲಯವು ನಿಮಗೆ ಸಾಲುವುದು ಹೇಗೆ?


ಆಗ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ ಮಿಂಚುಗಳೂ ಸಪ್ಪಳಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆಲಿಕಲ್ಲಿನ ಮಳೆಯೂ ಉಂಟಾದವು.


ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.”


ಆಗ ಅವರಿಗೆ, “ಇಲ್ಲಿ ಮೇಲಕ್ಕೆ ಬನ್ನಿರಿ,” ಎಂದು ಮಹಾಧ್ವನಿಯು ಕೇಳಿಸಿತು. ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು. ಅವರ ಶತ್ರುಗಳು ಅವರನ್ನು ನೋಡುತ್ತಾ ಇದ್ದರು.


ಕೆರೂಬಿಗಳ ರೆಕ್ಕೆಗಳ ಶಬ್ದವು ಸರ್ವಶಕ್ತ ದೇವರು ಮಾತನಾಡುವ ಹಾಗೆ ಹೊರಗಣ ಅಂಗಳದವರೆಗೂ ಕೇಳಿಬಂತು.


ಆದಿಯಲ್ಲಿ ನೀವು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀರಿ; ಆಕಾಶಗಳು ನಿಮ್ಮ ಕೈಕೆಲಸಗಳಾಗಿವೆ.


ರಾಷ್ಟ್ರಗಳು ಕೋಲಾಹಲದಲ್ಲಿವೆ ರಾಜ್ಯಗಳು ಬೀಳುತ್ತವೆ. ದೇವರು ತಮ್ಮ ಧ್ವನಿಯನ್ನೆತ್ತಲು ಭೂಮಿಯು ಕರಗುತ್ತದೆ.


ಆಕಾಶವೂ ಉನ್ನತಾಕಾಶವೂ ಭೂಮಿಯೂ ಅದರಲ್ಲಿರುವಂಥಾದ್ದೆಲ್ಲವೂ ನಿಮ್ಮ ದೇವರಾಗಿರುವ ಯೆಹೋವ ದೇವರವುಗಳೇ.


“ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. ದೇವರು ನಿನ್ನ ಸಹಾಯಕ್ಕೆ ಆಕಾಶವನ್ನೇರಿ ಮೇಘಾರೂಢನಾಗಿ ತಮ್ಮ ಘನತೆಯಲ್ಲಿ ಬರುತ್ತಾರೆ.


ಸಮಸ್ತ ದೇಶಗಳೇ, ದೇವರಿಗೆ ಉತ್ಸಾಹಧ್ವನಿ ಮಾಡಿರಿ.


ದೇವರ ಹೆಸರಿನ ಮಹಿಮೆಯನ್ನು ಕೊಂಡಾಡಿರಿ. ದೇವರ ಸ್ತೋತ್ರವನ್ನು ಘನವುಳ್ಳದ್ದಾಗಿ ಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು