ಕೀರ್ತನೆಗಳು 68:4 - ಕನ್ನಡ ಸಮಕಾಲಿಕ ಅನುವಾದ4 ದೇವರಿಗೆ ಹಾಡಿರಿ, ದೇವರ ಹೆಸರಿಗೆ ಸ್ತುತಿಗಳನ್ನು ಹಾಡಿರಿ. ಮೇಘಾರೂಢರಾಗಿರುವ ದೇವರನ್ನು ಕೊಂಡಾಡಿರಿ. ಅವರ ಹೆಸರು ಯೆಹೋವ ದೇವರು, ಅವರ ಮುಂದೆ ಉಲ್ಲಾಸಪಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ದೇವರಿಗೆ ಗಾಯನಮಾಡಿರಿ; ಆತನ ನಾಮವನ್ನು ಭಜಿಸಿರಿ; ಅರಣ್ಯದಲ್ಲಿ ಸವಾರಿಮಾಡುತ್ತಾ ಬರುವಾತನಿಗೆ ರಾಜಮಾರ್ಗವನ್ನು ಸಿದ್ಧಮಾಡಿರಿ. ಆತನ ನಾಮಧೇಯ ಯಾಹು; ಆತನ ಸನ್ನಿಧಿಯಲ್ಲಿ ಉಲ್ಲಾಸಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಗಾಯನ ಮಾಡಿರಿ ದೇವನಿಗೆ, ಕೊಂಡಾಡಿರಿ ಆತನ ನಾಮವನು I ಮೇಘಾರೂಢನಾಗಿ ಬರುವವಗೆ ಸಿದ್ಧಮಾಡಿರಿ ರಾಜಮಾರ್ಗವನು I “ಪ್ರಭು” ಆತನ ನಾಮಧೇಯ, ಹರ್ಷದಿ ಸೇರಿರಿ ಆತನ ಸನ್ನಿಧಿಯನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ದೇವರಿಗೆ ಗಾಯನಮಾಡಿರಿ; ಆತನ ನಾಮವನ್ನು ಭಜಿಸಿರಿ; ಅರಣ್ಯದಲ್ಲಿ ಸವಾರಿಮಾಡುತ್ತಾ ಬರುವಾತನಿಗೆ ರಾಜಮಾರ್ಗವನ್ನು ಸಿದ್ಧಮಾಡಿರಿ. ಆತನ ನಾಮಧೇಯ ಯಾಹು; ಆತನ ಸನ್ನಿಧಿಯಲ್ಲಿ ಉಲ್ಲಾಸಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ದೇವರಿಗೆ ಗಾಯನ ಮಾಡಿರಿ; ಆತನ ಹೆಸರನ್ನು ಕೊಂಡಾಡಿರಿ. ಅರಣ್ಯದಲ್ಲಿ ರಥದ ಮೇಲೆ ಸವಾರಿ ಮಾಡುತ್ತಾ ಬರುವಾತನಿಗೆ ಹಾದಿಯನ್ನು ಸಿದ್ಧಗೊಳಿಸಿರಿ. ಆತನ ಹೆಸರು ಯಾಹು. ಆತನ ಹೆಸರನ್ನು ಕೊಂಡಾಡಿರಿ! ಅಧ್ಯಾಯವನ್ನು ನೋಡಿ |