Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 68:5 - ಕನ್ನಡ ಸಮಕಾಲಿಕ ಅನುವಾದ

5 ದೇವರು ತಮ್ಮ ಪರಿಶುದ್ಧ ಸ್ಥಳದಲ್ಲಿ ದಿಕ್ಕಿಲ್ಲದವರಿಗೆ ತಂದೆ, ವಿಧವೆಯರಿಗೆ ರಕ್ಷಕರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಪರಿಶುದ್ಧ ವಾಸಸ್ಥಾನದಲ್ಲಿರುವ ದೇವರು ದಿಕ್ಕಿಲ್ಲದವರಿಗೆ ತಂದೆಯೂ, ವಿಧವೆಯರಿಗೆ ಸಹಾಯಕನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದಿವ್ಯಧಾಮದಲ್ಲಿಹ ಆ ದೇವ I ತಬ್ಬಲಿಗೆ ತಂದೆ, ವಿಧವೆಗಾಶ್ರಯ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಪರಿಶುದ್ಧ ವಾಸಸ್ಥಾನದಲ್ಲಿರುವ ದೇವರು ದಿಕ್ಕಿಲ್ಲದವರಿಗೆ ತಂದೆಯೂ ವಿಧವೆಯರಿಗೆ ಸಹಾಯಕನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೇವರು ತನ್ನ ಪವಿತ್ರ ಆಲಯದಲ್ಲಿ, ಅನಾಥರಿಗೆ ತಂದೆಯೂ ವಿಧವೆಯರಿಗೆ ಪಾಲಕನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 68:5
26 ತಿಳಿವುಗಳ ಹೋಲಿಕೆ  

ದೇವರೇ, ನೀವಾದರೋ ಬಾಧೆಪಡುವವರ ಕಷ್ಟಗಳನ್ನು ನೋಡಿದ್ದೀರಿ; ಅವರ ಸಂಕಟವನ್ನು ಪರಿಗಣಿಸಿ, ನೀವೇ ನೋಡಿಕೊಳ್ಳಿರಿ. ಗತಿಯಿಲ್ಲದವರು ತಮ್ಮನ್ನು ನಿಮಗೇ ಒಪ್ಪಿಸಿಕೊಡುತ್ತಾರೆ; ನೀವೇ ದಿಕ್ಕಿಲ್ಲದವರಿಗೆ ಸಹಾಯ ಮಾಡುವವರು.


ನಿನ್ನ ದಿಕ್ಕಿಲ್ಲದ ಮಕ್ಕಳನ್ನು ಬಿಡು. ನಾನೇ ರಕ್ಷಿಸುವೆನು. ನಿನ್ನ ವಿಧವೆಯರು ನನ್ನಲ್ಲಿ ನಂಬಿಕೆ ಇಡಲಿ.”


ಅವರು ತಂದೆ ಇಲ್ಲದವರಿಗೂ, ವಿಧವೆಯರಿಗೂ ನ್ಯಾಯ ದೊರಕಿಸುತ್ತಾರೆ. ಪರದೇಶಿಯರನ್ನು ಪ್ರೀತಿಸಿ ಅನ್ನ, ವಸ್ತ್ರ ಕೊಡುತ್ತಾರೆ.


ಅವರು ಕೊಬ್ಬಿದ್ದಾರೆ ಮತ್ತು ನಯವಾಗಿ ಬೆಳೆದಿದ್ದಾರೆ. ಅವರ ಕೆಟ್ಟ ಕೆಲಸಗಳಿಗೆ ಮಿತಿಯಿಲ್ಲ; ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವುದಿಲ್ಲ; ಆದರೂ ಅವರು ಸಫಲವಾಗುತ್ತಾರೆ, ಬಡವರ ನ್ಯಾಯವನ್ನು ತೀರಿಸರು.


ಯೆಹೋವ ದೇವರು ಪರದೇಶಸ್ಥರನ್ನು ಕಾಪಾಡುತ್ತಾರೆ. ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಉದ್ಧರಿಸುತ್ತಾರೆ. ಆದರೆ ದುಷ್ಟರ ಮಾರ್ಗವನ್ನು ಬೇಸರಪಡಿಸುತ್ತಾರೆ.


ನಿನ್ನ ಪ್ರಭುಗಳು ಎದುರುಬೀಳುವವರೂ, ಕಳ್ಳರ ಜೊತೆಗಾರರೂ ಆಗಿದ್ದಾರೆ. ಪ್ರತಿಯೊಬ್ಬನೂ ಲಂಚ ಪ್ರಿಯನೂ, ಬಹುಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ. ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವುದಿಲ್ಲ.


ಏಕೆಂದರೆ ಉನ್ನತನೂ, ಮಹೋನ್ನತನೂ, ನಿತ್ಯವಾಗಿ ವಾಸಿಸುವವನೂ, ಪರಿಶುದ್ಧನು ಎಂಬ ಹೆಸರುಳ್ಳಾತನೂ ಹೇಳುವುದೇನೆಂದರೆ: “ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿಸುವ ನಾನಾದರೂ, ಪಶ್ಚಾತ್ತಾಪ ಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪ ಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ಅರಸನು ಬಡವರ ನ್ಯಾಯ ಸ್ಥಾಪಿಸಲಿ. ಅವನು ಅಗತ್ಯತೆಯಲ್ಲಿರುವವರ ಮಕ್ಕಳನ್ನು ರಕ್ಷಿಸಲಿ. ದಬ್ಬಾಳಿಕೆ ಮಾಡುವವರನ್ನು ದಂಡಿಸಲಿ.


ಅನಾಥರಿಗೂ, ಕುಗ್ಗಿದವರಿಗೂ ನ್ಯಾಯವನ್ನು ನಡಿಸಿಕೊಡಿರಿ. ಹೀಗಾದರೆ ಕೇವಲ ಮಣ್ಣಿನ ಮಾನವರಿಂದ ಅವರಿಗೆ ಇನ್ನೆಂದಿಗೂ ಭಯ ಉಂಟಾಗುವುದಿಲ್ಲ.


ಆದರೆ ನಾನು ನಿಮಗೋಸ್ಕರ ಭವ್ಯವಾದ ಮಂದಿರವನ್ನು ಕಟ್ಟಿಸಿದ್ದೇನೆ, ಅದು ನಿಮಗೆ ಶಾಶ್ವತವಾದ ವಾಸಸ್ಥಳವಾಗಿರಲಿ,” ಎಂದನು.


ಆದ್ದರಿಂದ ನೀವು ದೇವರ ಪ್ರಿಯರಾದ ಮಕ್ಕಳಂತೆ ದೇವರ ಮಾದರಿಯನ್ನು ಅನುಸರಿಸಿ ಬಾಳಿರಿ.


ಯೆಹೋವ ದೇವರು ಹೇಳುವುದೇನೆಂದರೆ: “ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದ ಪೀಠ, ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?


ಅರಸನು ನಿಮ್ಮ ಜನರಿಗೆ ನೀತಿಯಿಂದಲೂ ನಿಮ್ಮ ಬಾಧೆಪಟ್ಟ ಪ್ರಜೆಗೆ ನ್ಯಾಯದಿಂದಲೂ ತೀರ್ಪುಮಾಡಲಿ.


ತಮ್ಮ ನಿವಾಸ ಸ್ಥಳದಿಂದ ಭೂನಿವಾಸಿಗಳೆಲ್ಲರ ಮೇಲೆ ಕಣ್ಣಿಡುತ್ತಾರೆ.


ಆಗ ಯಾಜಕರೂ ಲೇವಿಯರೂ ಎದ್ದು ಜನರನ್ನು ಆಶೀರ್ವದಿಸಿದರು. ದೇವರು ಅವರ ಪ್ರಾರ್ಥನೆಯನ್ನು ಕೇಳಿದರು. ಅವರ ಪ್ರಾರ್ಥನೆಯು ದೇವರ ಪರಿಶುದ್ಧ ನಿವಾಸ ಸ್ಥಾನವಾದ ಪರಲೋಕಕ್ಕೆ ತಲುಪಿತು.


ಅಸ್ಸೀರಿಯ ನಮ್ಮನ್ನು ರಕ್ಷಿಸುವುದಿಲ್ಲ. ನಾವು ಕುದುರೆಗಳ ಮೇಲೆ ಸವಾರಿ ಮಾಡುವುದಿಲ್ಲ. ನಮ್ಮ ಕೈಗಳಿಂದ ಉಂಟು ಮಾಡಿದವುಗಳಿಗೆ, ‘ನೀವು ನಮ್ಮ ದೇವರುಗಳೇ,’ ಎಂದು ನಾವು ಇನ್ನು ಮುಂದೆ ಹೇಳುವುದೇ ಇಲ್ಲ. ಏಕೆಂದರೆ ನಿಮ್ಮಲ್ಲಿ ದಿಕ್ಕಿಲ್ಲದವರಿಗೆ ಅನುಕಂಪ ದೊರೆಯುತ್ತದೆ.”


ಪರಲೋಕದ ನಿಮ್ಮ ಪರಿಶುದ್ಧ ನಿವಾಸದೊಳಗಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿಮ್ಮ ಜನರಾದ ಇಸ್ರಾಯೇಲರನ್ನೂ, ನೀವು ನಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಪ್ರಕಾರ, ನಮಗೆ ಕೊಟ್ಟಂಥ ಹಾಲೂ ಜೇನೂ ಹರಿಯುವ ಈ ದೇಶವನ್ನೂ ಆಶೀರ್ವದಿಸಿರಿ,” ಎಂದು ಹೇಳಬೇಕು.


ಮತ್ತೆ ದೇವರು ಮೋಶೆಗೆ, “ ‘ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,’ ಎಂದು ಇಸ್ರಾಯೇಲರಿಗೆ ಹೇಳಬೇಕು, “ಇದೇ ಯುಗಯುಗಕ್ಕೆ ನನ್ನ ಹೆಸರೂ, ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ಹೆಸರು.


ನೀತಿಯ ಬಾಗಿಲುಗಳನ್ನು ನನಗೆ ತೆರೆಯಿರಿ; ಅವುಗಳೊಳಗೆ ಪ್ರವೇಶಿಸಿ ಯೆಹೋವ ದೇವರಿಗೆ ಧನ್ಯವಾದ ಸಲ್ಲಿಸು.


ಶ್ವಾಸವುಳ್ಳದ್ದೆಲ್ಲಾ ಯೆಹೋವ ದೇವರನ್ನು ಸ್ತುತಿಸಲಿ. ಯೆಹೋವ ದೇವರಿಗೆ ಸ್ತೋತ್ರ!


ಆ ದಿನದಲ್ಲಿ ನೀವು ಹೀಗೆ ಹೇಳುವಿರಿ, “ಯೆಹೋವ ದೇವರನ್ನು ಕೊಂಡಾಡಿರಿ. ಅವರ ಹೆಸರನ್ನೆತ್ತಿ ಜನರ ಮಧ್ಯದಲ್ಲಿ ಅವರ ಕ್ರಿಯೆಗಳನ್ನು ಪ್ರಕಟಿಸಿರಿ. ಅವರ ನಾಮವನ್ನು ಉನ್ನತೋನ್ನತವೆಂದು ಎತ್ತಿ ಹೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು