Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:24 - ಕನ್ನಡ ಸಮಕಾಲಿಕ ಅನುವಾದ

24 ಅವರು ಕೋಪಕ್ಕೆ ಗುರಿಯಾಗಲಿ. ಅವರು ಬೇಸರಕ್ಕೆ ತುತ್ತಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಿನ್ನ ರೌದ್ರವನ್ನು ಅವರ ಮೇಲೆ ಸುರಿದುಬಿಡು; ನಿನ್ನ ಕೋಪಾಗ್ನಿಯು ಅವರನ್ನು ದಹಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನಿನ್ನ ರೌದ್ರ ಅವರ ಮೇಲೆರಗಲಿ I ನಿನ್ನ ಕೋಪಾಗ್ನಿ ಅವರನು ದಹಿಸಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಿನ್ನ ರೌದ್ರವನ್ನು ಅವರ ಮೇಲೆ ಸುರಿದುಬಿಡು; ನಿನ್ನ ಕೋಪಾಗ್ನಿಯು ಅವರನ್ನು ಆಹುತಿಗೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಿನ್ನ ಕೋಪವನ್ನೆಲ್ಲಾ ಅವರು ಅನುಭವಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:24
14 ತಿಳಿವುಗಳ ಹೋಲಿಕೆ  

ನಿಮ್ಮನ್ನು ಸ್ವೀಕರಿಸದ ಜನಾಂಗಗಳ ಮೇಲೆಯೂ, ನಿಮ್ಮ ಹೆಸರನ್ನು ಕರೆಯದ ರಾಜ್ಯಗಳ ಮೇಲೆಯೂ ನಿಮ್ಮ ಕೋಪವನ್ನು ಸುರಿಸಿಬಿಡಿರಿ.


ಯೆಹೂದದ ನಾಯಕರು ಮೇರೆಗಳನ್ನು ಸರಿಸುವವರ ಹಾಗೆ ಇದ್ದರು. ಅವರ ಮೇಲೆ, ನೀರಿನ ಪ್ರವಾಹದಂತೆ ನನ್ನ ಕೋಪವನ್ನು ಸುರಿಸುವೆನು.


ಆಗ ದೇವಾಲಯದಿಂದ ಬಂದ ಗಟ್ಟಿಯಾದ ಧ್ವನಿಯು, ಏಳು ದೇವದೂತರಿಗೂ, “ಹೋಗಿರಿ, ಏಳು ಬೋಗುಣಿಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿದುಬಿಡಿರಿ!” ಎಂದು ಹೇಳುವುದನ್ನು ನಾನು ಕೇಳಿದೆನು.


ಏಕೆಂದರೆ ಪವಿತ್ರ ವೇದದಲ್ಲಿ ಬರೆದಿರುವವುಗಳೆಲ್ಲವೂ ನೆರವೇರಲು, ಇವು ದಂಡನೆಯ ದಿವಸಗಳಾಗಿವೆ.


ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿ, ನನ್ನ ವಾಕ್ಯಗಳೂ, ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿಲ್ಲವೋ? “ಆಗ ಅವರು ತಿರುಗಿಕೊಂಡು, ‘ಸೇನಾಧೀಶ್ವರ ಯೆಹೋವ ದೇವರು ನಮಗೆ ಮಾಡುವುದಕ್ಕೆ ಯೋಚಿಸಿದ ಹಾಗೆಯೇ, ನಮ್ಮ ಮಾರ್ಗಗಳ ಪ್ರಕಾರವಾಗಿಯೂ, ನಮ್ಮ ಕ್ರಿಯೆಗಳ ಪ್ರಕಾರವಾಗಿಯೂ ನಮಗೆ ಮಾಡಿದ್ದಾರೆ,’ ಎಂದು ಹೇಳಿದರು.”


ಅವರು ಭಯಪಡುವರು. ನೋವು ಮತ್ತು ಬೇನೆಗಳು ಅವರನ್ನು ಆವರಿಸಿಕೊಳ್ಳುವುವು. ಪ್ರಸವವೇದನೆಯಲ್ಲಿರುವ ಸ್ತ್ರೀಯರಂತೆ ಸಂಕಟಪಡುವರು. ಅವರು ಒಬ್ಬರಿಗೊಬ್ಬರು ಭ್ರಮೆ ಪಡುವರು. ಅವರ ಮುಖಗಳು ಜ್ವಾಲೆಯಂತಿರುವುವು.


ಆ ದಿವಸದಲ್ಲಿ ನಾನು ಅವರ ಮೇಲೆ ಕೋಪಗೊಂಡು ಅವರನ್ನು ಬಿಟ್ಟುಬಿಟ್ಟು, ನನ್ನ ಮುಖವನ್ನು ಅವರಿಗೆ ಮರೆಮಾಡುವೆನು. ವಿರೋಧಿಗಳು ಅವರನ್ನು ನುಂಗಿಬಿಡುವರು. ಬಹಳ ಕೇಡುಗಳೂ, ಇಕ್ಕಟ್ಟುಗಳೂ ಅವರಿಗೆ ಸಂಭವಿಸುವುದು. ಆ ದಿವಸದಲ್ಲಿ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ನಮಗೆ ಕೇಡುಗಳು,’ ಎಂದು ಹೇಳುವರು.


ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳುವರು; ಕಂಪನವು ಮೋವಾಬಿನ ಬಲಿಷ್ಠರನ್ನು ಹಿಡಿಯುವುದು; ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು