Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:25 - ಕನ್ನಡ ಸಮಕಾಲಿಕ ಅನುವಾದ

25 ಅವರ ವಾಸಸ್ಥಾನವು ಹಾಳಾಗಲಿ; ಅವರ ಗುಡಾರಗಳಲ್ಲಿ ನಿವಾಸಿಯು ಇಲ್ಲದೆ ಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವರ ಪಾಳೆಯವು ಹಾಳುಬೀಳಲಿ; ಅವರ ನಿವಾಸಗಳು ಜನಶೂನ್ಯವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅವರ ಪಾಳೆಯ ಹಾಳು ಬೀಳಲಿ I ಅವರ ಗುಡಾರ ಬಿಕೋ ಎನಿಸಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವರ ಪಾಳೆಯವು ಹಾಳುಬೀಳಲಿ; ಅವರ ನಿವಾಸಗಳು ಜನಶೂನ್ಯವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅವರ ಮನೆಗಳು ಬರಿದಾಗಲಿ; ಅವುಗಳಲ್ಲಿ ಯಾರೂ ವಾಸಿಸದಂತಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:25
8 ತಿಳಿವುಗಳ ಹೋಲಿಕೆ  

ಕೀರ್ತನೆಗಳ ಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: “ ‘ಅವನ ವಾಸಸ್ಥಾನವು ಹಾಳಾಗಲಿ, ಅದರಲ್ಲಿ ಯಾರೂ ವಾಸಿಸದಿರಲಿ,’ ಮತ್ತು, “ ‘ಅವನ ಹುದ್ದೆಯನ್ನು ಇನ್ನೊಬ್ಬನು ತೆಗೆದುಕೊಳ್ಳಲಿ,’


ನೋಡಿರಿ, ನಿಮ್ಮ ದೇವಾಲಯವು ನಿಮಗೆ ಬರಿದಾಗಿ ಹಾಳುಬೀಳುವುದು.


ನೋಡಿರಿ, ನಿಮ್ಮ ದೇವಾಲಯವು ನಿಮಗೆ ಬರಿದಾಗಿ ಹಾಳುಬೀಳುವುದು. ಏಕೆಂದರೆ, ‘ಕರ್ತದೇವರ ಹೆಸರಿನಲ್ಲಿ ಬರುವವರು ಧನ್ಯರು,’ ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ಕಾಣುವುದೇ ಇಲ್ಲ, ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.


ಆಗ ನಾನು, “ಯೆಹೋವ ದೇವರೇ, ಇದು ಎಷ್ಟರವರೆಗೆ?” ಎಂದೆನು. ಅದಕ್ಕೆ ಅವರು ಹೀಗೆ ಉತ್ತರಕೊಟ್ಟರು, “ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯನಿಲ್ಲದೆ, ಹೊಲಗಳು ಸಂಪೂರ್ಣವಾಗಿ ಹಾಳಾಗುವವರೆಗೂ,


ನನ್ನ ಪ್ರಿಯನ ದ್ರಾಕ್ಷಿತೋಟದ ವಿಷಯವಾದ ಹಾಡನ್ನು ನನ್ನ ಪ್ರಾಣ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದ ಬಳಿಯಲ್ಲಿ ನನ್ನ ಅತಿ ಪ್ರಿಯನಿಗೆ ದ್ರಾಕ್ಷಿ ತೋಟವಿದೆ.


ಇದಲ್ಲದೆ ಉನ್ನತವಾಗಿರುವ ಈ ಆಲಯದ ಮಾರ್ಗವಾಗಿ ಹೋಗುವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು, ‘ಯೆಹೋವ ದೇವರು ಈ ದೇಶಕ್ಕೂ, ಈ ಆಲಯಕ್ಕೂ ಹೀಗೆ ಏಕೆ ಮಾಡಿದರು?’ ಎಂದು ಕೇಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು