Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:4 - ಕನ್ನಡ ಸಮಕಾಲಿಕ ಅನುವಾದ

4 ಕಾರಣವಿಲ್ಲದೆ ನನ್ನನ್ನು ದ್ವೇಷಿಸುವವರು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ. ನನ್ನನ್ನು ನಾಶಮಾಡ ಬಯಸುವವರೂ ಕಾರಣವಿಲ್ಲದೆ ನನಗೆ ಶತ್ರುಗಳಾಗಿದ್ದಾರೆ. ನಾನು ಅಪಹರಿಸದಿದ್ದರೂ ದಂಡ ಕೊಡಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿಷ್ಕಾರಣ ದ್ವೇಷಿಗಳು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ; ನಿರಾಕಾರಣವಾಗಿ ನನ್ನನ್ನು ಮುಗಿಸಿಬಿಡಬೇಕೆಂದಿರುವ ವೈರಿಗಳು ಬಲಿಷ್ಠರಾಗಿದ್ದಾರೆ. ನಾನು ಅಪಹರಿಸದಿದ್ದರೂ ನನ್ನಿಂದ ದಂಡ ತೆಗೆದುಕೊಂಡರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ತಲೆ ಕೂದಲಿಗಿಂತ ಮಿಗಿಲಿಹರು ನಿಷ್ಕಾರಣ ದ್ವೇಷಿಗಳು I ಬಲಿಷ್ಟರಿಹರು ನನ್ನ ಕೊಲೆಗಡುಕರು, ನಿರ್ನಿಮಿತ್ತ ಶತ್ರುಗಳು I ಕಳ್ಳನಾನಲ್ಲನಾದರೂ ದಂಡಕೋರುತಿಹರು ವೈರಿಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿಷ್ಕಾರಣದ್ವೇಷಿಗಳು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ; ನಿರ್ನಿವಿುತ್ತವಾಗಿ ನನ್ನನ್ನು ಮುಗಿಸಿಬಿಡಬೇಕೆಂದಿರುವ ವೈರಿಗಳು ಬಲಿಷ್ಠರಾಗಿದ್ದಾರೆ. ನಾನು ಅಪಹರಿಸದಿದ್ದರೂ ನನ್ನಿಂದ ದಂಡತೆಗೆದುಕೊಂಡರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಶತ್ರುಗಳು ನನ್ನ ತಲೆಕೂದಲುಗಳಿಗಿಂತ ಹೆಚ್ಚಾಗಿದ್ದಾರೆ. ಅವರು ನಿಷ್ಕಾರಣವಾಗಿ ನನ್ನನ್ನು ದ್ವೇಷಿಸುತ್ತಾರೆ; ನನ್ನನ್ನು ನಾಶಮಾಡಲು ಬಹು ಪ್ರಯತ್ನ ಮಾಡುತ್ತಿದ್ದಾರೆ. ನನ್ನ ಶತ್ರಗಳು ನನ್ನ ಬಗ್ಗೆ ಸುಳ್ಳು ಹೇಳುವರು. ನಾನು ಕದ್ದಿಲ್ಲದಿದ್ದರೂ ಸುಳ್ಳು ಅಪವಾದ ಹೊರಿಸಿ ನನ್ನಿಂದ ದಂಡ ವಸೂಲಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:4
14 ತಿಳಿವುಗಳ ಹೋಲಿಕೆ  

ಆದರೆ, ‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಮಾಡಿದರು,’ ಎಂದು ಅವರ ನಿಯಮದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.


ನಿಷ್ಕಾರಣವಾಗಿರುವ ನನ್ನ ಶತ್ರುಗಳು ನನ್ನ ಮೇಲೆ ಸುಳ್ಳಾಗಿ ಸಂತೋಷಪಡದೆ ಇರಲಿ; ನನ್ನನ್ನು ಕಾರಣವಿಲ್ಲದೆ ದ್ವೇಷಿಸುವವರು ಕಣ್ಣು ಸನ್ನೆ ಮಾಡದೆ ಇರಲಿ.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


ಲೆಕ್ಕವಿಲ್ಲದಷ್ಟು ಕೇಡುಗಳು ನನ್ನನ್ನು ಸುತ್ತಿಕೊಂಡಿವೆ. ನಾನು ಏನೂ ನೋಡಲಾರದಷ್ಟು ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿವೆ; ನನ್ನ ಪಾಪಗಳು ತಲೆಯ ಕೂದಲುಗಳಿಗಿಂತ ಹೆಚ್ಚಾಗಿವೆ, ಆದ್ದರಿಂದ ನನ್ನ ಹೃದಯವು ಕುಂದಿಹೋಗಿದೆ.


ಕ್ರಿಸ್ತ ಯೇಸುವು ನೀತಿವಂತರಾಗಿದ್ದರೂ ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವುದಕ್ಕಾಗಿ, ಒಂದೇ ಸಾರಿ ಪಾಪಗಳಿಗೋಸ್ಕರ ಬಾಧೆಪಟ್ಟು ಶರೀರದಲ್ಲಿ ಮರಣಹೊಂದಿದರು. ಆದರೆ ಆತ್ಮದಲ್ಲಿ ಬದುಕುವವರಾದರು.


“ಕ್ರಿಸ್ತ ಯೇಸುವು ಯಾವ ಪಾಪವನ್ನೂ ಮಾಡಲಿಲ್ಲ, ಅವರ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.”


ಇಗೋ, ನನ್ನ ಪ್ರಾಣಕ್ಕೆ ಅವರು ಒಳಸಂಚುಮಾಡುತ್ತಾರೆ. ಕ್ರೂರರು ನನಗೆ ವಿರೋಧವಾಗಿ ಕೂಡಿಕೊಳ್ಳುತ್ತಾರೆ. ಯೆಹೋವ ದೇವರೇ, ನನ್ನಲ್ಲಿ ಅಪರಾಧವಿಲ್ಲ, ನಾನು ಯಾವ ತಪ್ಪೂ ಮಾಡಿಲ್ಲ.


ನಾವು ನಮ್ಮ ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಕ್ರಿಸ್ತ ಯೇಸು ಶಿಲುಬೆಯ ಮೇಲೆ, “ನಮ್ಮ ಪಾಪಗಳನ್ನು ತಾವೇ ತಮ್ಮ ದೇಹದಲ್ಲಿ ಹೊತ್ತರು. ಅವರ ಗಾಯಗಳಿಂದ ನಿಮಗೆ ಗುಣವಾಯಿತು.”


ದುಃಖದಿಂದ ನನ್ನ ಕಣ್ಣುಗಳು ಬಲಹೀನವಾಗಿವೆ, ನನ್ನ ಸಕಲ ವೈರಿಗಳಿಂದ ಅವು ಮೊಬ್ಬಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು