ಕೀರ್ತನೆಗಳು 7:10 - ಕನ್ನಡ ಸಮಕಾಲಿಕ ಅನುವಾದ10 ಮಹೋನ್ನತರಾದ ದೇವರು ನನ್ನ ಗುರಾಣಿಯಾಗಿದ್ದಾರೆ, ಅವರು ಯಥಾರ್ಥ ಹೃದಯವುಳ್ಳವರನ್ನು ರಕ್ಷಿಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನನ್ನನ್ನು ರಕ್ಷಿಸುವ ಗುರಾಣಿಯು ದೇವರೇ; ಆತನು ಯಥಾರ್ಥರನ್ನು ಕಾಪಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನನಗೆ ರಕ್ಷೆ ನೀಡುವ ಗುರಾಣಿ, ದೇವನೇ I ನೇರಮನಸ್ಕರಿಗೆ ಸಂರಕ್ಷಣೆ ಆತನೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನನ್ನನ್ನು ರಕ್ಷಿಸುವ ಗುರಾಣಿಯು ದೇವರೇ; ಆತನು ಯಥಾರ್ಥರನ್ನು ಕಾಪಾಡುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನನ್ನ ಗುರಾಣಿಯು ದೇವರೇ. ಆತನು ಯಥಾರ್ಥವಂತರನ್ನು ರಕ್ಷಿಸುವನು. ಅಧ್ಯಾಯವನ್ನು ನೋಡಿ |
“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.