ಕೀರ್ತನೆಗಳು 7:5 - ಕನ್ನಡ ಸಮಕಾಲಿಕ ಅನುವಾದ5 ಆಗ ನನ್ನ ವೈರಿಯು ಬೆನ್ನಟ್ಟಿ ನನ್ನನ್ನು ಹಿಡಿದುಕೊಳ್ಳಲಿ. ನನ್ನ ಜೀವವನ್ನು ನೆಲಕ್ಕೆ ಹಾಕಿ ತುಳಿದು ಬಿಡಲಿ ಮತ್ತು ನನ್ನ ಮಾನವನ್ನು ಮಣ್ಣು ಪಾಲಾಗುವಂತೆ ಮಾಡಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನನ್ನ ಮಾನವನ್ನು ಮಣ್ಣುಪಾಲು ಮಾಡಲಿ. ನಾನಂಥವನಲ್ಲ; ನಿಷ್ಕಾರಣ ವೈರಿಯನ್ನು ರಕ್ಷಿಸಿದೆನಲ್ಲ. ಸೆಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಎನ್ನ ಬೆನ್ನಟ್ಟಿ ಬರಲಿ ವೈರಿ, ಕಾಲಿಂದೆನ್ನ ಮೆಟ್ಟಿ ತುಳಿಯಲಿ I ಎನ್ನ ಮಾನವನು ಮಣ್ಣುಪಾಲಾಗಿಸಲಿ, ನನ್ನನು ಸೋಲಿಸಿಬಿಡಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನನ್ನ ಮಾನವನ್ನು ಮಣ್ಣುಪಾಲು ಮಾಡಲಿ. ನಾನಂಥವನಲ್ಲ; ನಿಷ್ಕಾರಣವೈರಿಯನ್ನೂ ರಕ್ಷಿಸಿದೆನಲ್ಲಾ. ಸೆಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಇವುಗಳಲ್ಲಿ ನಾನು ಯಾವುದನ್ನೇ ಮಾಡಿದ್ದರೂ, ಶತ್ರುವು ನನ್ನನ್ನು ಹಿಂದಟ್ಟಿ ಬಂದು ನನ್ನನ್ನು ಹಿಡಿದು ನೆಲಕ್ಕೆ ಕೆಡವಿ ತುಳಿಯಲಿ; ನನ್ನ ಪ್ರಾಣವನ್ನು ಮಣ್ಣುಪಾಲು ಮಾಡಲಿ. ಅಧ್ಯಾಯವನ್ನು ನೋಡಿ |
ಇದಲ್ಲದೆ ನನ್ನ ತಂದೆಯೇ, ಇಲ್ಲಿ ನೋಡು! ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ತುಂಡನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ, ನಿನ್ನ ನಿಲುವಂಗಿಯ ಅಂಚನ್ನು ಮಾತ್ರ ಕತ್ತರಿಸಿಕೊಂಡದ್ದರಿಂದ, ನನ್ನಲ್ಲಿ ಕೆಟ್ಟತನವೂ, ದ್ರೋಹವೂ ಇಲ್ಲವೆಂದು ಇದು ಸೂಚಿಸುತ್ತಿದೆ; ನಾನು ನಿನಗೆ ವಿರೋಧವಾಗಿ ತಪ್ಪುಮಾಡಲಿಲ್ಲವೆಂದು ತಿಳಿದುಕೋ. ಹೀಗಿದ್ದರೂ, ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ.