Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 7:9 - ಕನ್ನಡ ಸಮಕಾಲಿಕ ಅನುವಾದ

9 ದುಷ್ಟರ ಕೆಟ್ಟತನವು ಅಂತ್ಯವಾಗುವಂತೆಯೂ ನೀತಿವಂತರ ಭದ್ರತೆಯು ನಿಶ್ಚಯವಾಗುವಂತೆಯೂ ಮಾಡಿರಿ. ನೀತಿಯುಳ್ಳ ದೇವರೇ, ನೀವು ಹೃದಯವನ್ನೂ ಮನಸ್ಸನ್ನೂ ಪರಿಶೋಧಿಸುವವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮಾನವರ ಹೃನ್ಮನವನರಿತಿಹ ಸತ್ಯಸ್ವರೂಪಿ ದೇವಾ, I ದುರುಳರ ಕೆಡುಕನಳಿಸಯ್ಯಾ, ಸತ್ಯವಂತರನು ನೀ ಉಳಿಸಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮನುಷ್ಯರ ಹೃದಯವನ್ನೂ ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಕೆಟ್ಟವರನ್ನು ದಂಡಿಸು, ಒಳ್ಳೆಯವರಿಗೆ ಸಹಾಯಮಾಡು. ದೇವರೇ ನೀನು ಒಳ್ಳೆಯವನು; ಮನುಷ್ಯರ ಅಂತರಾಳವನ್ನು ನೀನು ಪರಿಶೋಧಿಸಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 7:9
36 ತಿಳಿವುಗಳ ಹೋಲಿಕೆ  

ಆದರೆ ನೀತಿಯಾಗಿ ನ್ಯಾಯತೀರಿಸುವಂಥ ಅಂತರಿಂದ್ರಿಯಗಳನ್ನೂ, ಹೃದಯವನ್ನೂ ಶೋಧಿಸುವಂಥ ಸೇನಾಧೀಶ್ವರ ಯೆಹೋವ ದೇವರೇ, ನೀನು ಅವರಿಗೆ ಕೊಡುವ ಪ್ರತಿದಂಡನೆಯನ್ನು ನಾನು ಕಾಣುವೆನು. ಏಕೆಂದರೆ ನಿನಗೆ ನನ್ನ ವ್ಯಾಜ್ಯವನ್ನು ಒಪ್ಪಿಸಿದ್ದೇನೆ.


“ಯೆಹೋವ ದೇವರಾದ ನಾನೇ ಹೃದಯವನ್ನು ಪರೀಕ್ಷಿಸುತ್ತೇನೆ. ಅಂತರಿಂದ್ರಿಯಗಳನ್ನು ಶೋಧಿಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ, ಅವನ ಕ್ರಿಯೆಗಳ ಫಲದ ಪ್ರಕಾರವೂ ಪ್ರತಿಫಲ ಕೊಡುತ್ತೇನೆ.”


ಓ ಸೇನಾಧೀಶ್ವರ ಯೆಹೋವ ದೇವರೇ, ನೀತಿವಂತರನ್ನು ಪರಿಶೋಧಿಸುವವರೇ, ಅಂತರಿಂದ್ರಿಯಗಳನ್ನೂ, ಹೃದಯವನ್ನೂ ನೋಡುವವರೇ, ನೀವು ಅವರಿಗೆ ಪ್ರತಿದಂಡನೆ ಮಾಡುವುದನ್ನು ನಾನು ನೋಡುವಂತೆ ಮಾಡಿ. ಏಕೆಂದರೆ, ನಿಮಗೆ ನನ್ನ ವ್ಯಾಜ್ಯವನ್ನು ತಿಳಿಯಮಾಡಿದ್ದೇನೆ.


“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.


ಆದರೆ ಯೆಹೋವ ದೇವರು ಸಮುಯೇಲನಿಗೆ, “ನೀನು ಅವನ ರೂಪವನ್ನೂ, ಅವನ ದೇಹದ ಎತ್ತರವನ್ನೂ ದೃಷ್ಟಿಸಬೇಡ. ಏಕೆಂದರೆ ಅವನನ್ನು ನಾನು ತಿರಸ್ಕರಿಸಿದೆನು; ಏಕೆಂದರೆ ಯೆಹೋವ ದೇವರು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ, ಹೃದಯವನ್ನೇ ನೋಡುವರು,” ಎಂದನು.


ಅವಳ ಮಕ್ಕಳನ್ನು ಮರಣಕ್ಕೆ ಒಪ್ಪಿಸುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ತಿಳಿದುಬರುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


ಯೆಹೋವ ದೇವರೇ, ನೀವು ನನ್ನನ್ನು ಪರಿಶೋಧಿಸಿದ್ದೀರಿ; ನನ್ನನ್ನು ತಿಳಿದುಕೊಂಡಿದ್ದೀರಿ.


ದೇವರೇ ಹೃದಯದ ರಹಸ್ಯಗಳನ್ನು ತಿಳಿದಿರುವ ನಿಮಗೆ ಅವೆಲ್ಲವೂ ಮರೆಯಾಗಿರುತ್ತಿರಲಿಲ್ಲ.


ಯೆಹೋವ ದೇವರಲ್ಲಿ ಯಾರು ಹರ್ಷಿಸುತ್ತಾರೋ ಅವರ ಹೆಜ್ಜೆಗಳನ್ನು ಸ್ಥಿರಪಡಿಸುವರು.


ಯೆಹೋವ ದೇವರೇ, ನನ್ನನ್ನು ಶೋಧಿಸಿ, ಪರೀಕ್ಷಿಸಿರಿ; ನನ್ನ ಅಂತರಿಂದ್ರಿಯಗಳನ್ನೂ ನನ್ನ ಹೃದಯವನ್ನೂ ಶೋಧಿಸಿರಿ.


ಯೆಹೋವ ದೇವರು ನೀತಿವಂತನನ್ನು ಪರೀಕ್ಷಿಸುತ್ತಾರೆ, ಆದರೆ ಅವರು ದುಷ್ಟರನ್ನೂ ಹಿಂಸಾತ್ಮಕರನ್ನೂ ವಿರೋಧಿಸುತ್ತಾರೆ.


ದುಷ್ಟನ ಭುಜಬಲವನ್ನು ಮುರಿದುಬಿಡಿರಿ; ಕೆಟ್ಟದ್ದನ್ನು ಮಾಡುವವರಿಗೆ ಅವರ ಕೆಟ್ಟತನಕ್ಕೆ ಲೆಕ್ಕ ಕೇಳಿರಿ; ಇಲ್ಲದಿದ್ದರೆ ನೀವು ಅವನನ್ನು ಲೆಕ್ಕ ಕೇಳುವುದಿಲ್ಲ ಅಂದುಕೊಳ್ಳುವನು.


ನನ್ನ ಸುವಾರ್ತೆಯು ಹೇಳುವಂತೆಯೇ ನಿಮ್ಮನ್ನು ಬಲಪಡಿಸುವ ದೇವರಿಗೆ ಈಗ ಎಲ್ಲಾ ಮಹಿಮೆಯಾಗಲಿ. ಕ್ರಿಸ್ತ ಯೇಸುವಿನ ಕುರಿತಾಗಿರುವ ಈ ಸಂದೇಶವು ಆದಿಯಿಂದಲೂ ಗುಪ್ತವಾಗಿರುವ ರಹಸ್ಯದ ದೇವರ ಯೋಜನೆಯು ಯೆಹೂದ್ಯರಲ್ಲದವರಾದ ನಿಮಗಾಗಿ ಈಗ ಪ್ರಕಟವಾಗಿದೆ.


ನೀವು ನನ್ನ ಹೃದಯವನ್ನು ಶೋಧಿಸಿದರೂ, ನೀವು ರಾತ್ರಿಯಲ್ಲಿ ನನ್ನನ್ನು ಪರೀಕ್ಷಿಸಿ ವಿಚಾರಿಸಿದರೂ, ನಾನು ಕೆಟ್ಟಯೋಜನೆ ಮಾಡಿಕೊಳ್ಳಲಿಲ್ಲವೆಂದು ನೀವು ಕಂಡುಕೊಳ್ಳುವಿರಿ; ನನ್ನ ಬಾಯಿಯೂ ಅತಿಕ್ರಮಿಸುವುದಿಲ್ಲವೆಂದು ನಾನು ತೀರ್ಮಾನಿಸಿಕೊಂಡಿದ್ದೇನೆ.


ಹೆರೋದನು ದೇವರಿಗೆ ಸಲ್ಲಿಸಬೇಕಾದ ಮಹಿಮೆ ಸಲ್ಲಿಸದೇ ಹೋದದ್ದರಿಂದ ಕೂಡಲೇ ಒಬ್ಬ ದೇವದೂತನು ಅವನನ್ನು ಹೊಡೆಯಲು ಅವನು ಹುಳ ಬಿದ್ದು ಸತ್ತುಹೋದನು.


ಓ, ದೇವರೇ, ಅವರ ಹಲ್ಲುಗಳು ಮುರಿದು ಬೀಳಲಿ. ಯೆಹೋವ ದೇವರೇ, ಪ್ರಾಯದ ಸಿಂಹಗಳಂತಿರುವ ಅವರ ಕೋರೆಹಲ್ಲುಗಳು ನಾಶವಾಗಲಿ.


ಅನಾಥರಿಗೂ, ಕುಗ್ಗಿದವರಿಗೂ ನ್ಯಾಯವನ್ನು ನಡಿಸಿಕೊಡಿರಿ. ಹೀಗಾದರೆ ಕೇವಲ ಮಣ್ಣಿನ ಮಾನವರಿಂದ ಅವರಿಗೆ ಇನ್ನೆಂದಿಗೂ ಭಯ ಉಂಟಾಗುವುದಿಲ್ಲ.


ಅವನು ತನ್ನ ರಾಜ ಗುಡಾರಗಳನ್ನು ಸಮುದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು. ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.


ನನ್ನನ್ನು ಜಾರುವ ಗುಂಡಿಯೊಳಗಿಂದ ಎತ್ತಿದರು. ಕೆಸರಿನ ಮಣ್ಣಿನಿಂದ ಎಬ್ಬಿಸಿದರು. ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ, ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದರು.


ಅವರು ತಮ್ಮ ಪರಿಶುದ್ಧರ ಪಾದಗಳನ್ನು ಕಾಯುವರು. ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು. “ತನ್ನ ಶಕ್ತಿಯಿಂದ ಒಬ್ಬನೂ ಜಯಿಸನು.


ಕ್ರಿಸ್ತ ಯೇಸುವಿನ ದಾಸನೂ ಯಾಕೋಬನ ಸಹೋದರನೂ ಆಗಿರುವ ಯೂದನು, ತಂದೆಯಾದ ದೇವರಿಗೆ ಪ್ರಿಯರಾದವವರಿಗೂ ಕ್ರಿಸ್ತ ಯೇಸು ಸುರಕ್ಷತೆಯನ್ನೂ ಅವರ ಕರೆಯುವಿಕೆಯನ್ನೂ ಹೊಂದಿದವರಿಗೆ ಬರೆಯುವ ಪತ್ರ:


ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತಮ್ಮ ನಿತ್ಯ ಪ್ರಭಾವಕ್ಕೆ ಕರೆದ ಕೃಪಾಪೂರ್ಣ ಆಗಿರುವ ದೇವರು ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ತಾವೇ ನಿಮ್ಮನ್ನು ಪರಿಪೂರ್ಣಮಾಡಿ, ಸ್ಥಿರಪಡಿಸಿ, ಬಲಪಡಿಸಿ ನೆಲೆಗೊಳಿಸುವರು.


ನಮಗೆ ಕರ್ತ ಆಗಿರುವ ಯೇಸುವು ತಮ್ಮ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ, ನೀವು ತಂದೆ ದೇವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ಬಲಪಡಿಸಲಿ!


ಅವನು ನನಗೆ, ‘ಅವಳು ನನ್ನ ತಂಗಿ,’ ಎಂದು ಹೇಳಲಿಲ್ಲವೋ? ಅವಳೇ, ‘ಅವನು ನನ್ನ ಅಣ್ಣ,’ ಎಂದು ಹೇಳಿದ್ದಾಳೆ. ಆದ್ದರಿಂದ ನಾನು ಯಥಾರ್ಥವಾದ ಹೃದಯದಿಂದಲೂ ನಿರಪರಾಧದ ಹಸ್ತದಿಂದಲೂ ಇದನ್ನು ಮಾಡಿದ್ದೇನೆ,” ಎಂದನು.


ನೀವೇ ಆ ಅಪರಾಧಿಯನ್ನು ಖಂಡಿಸಿ ಅವನ ತಪ್ಪನ್ನು ಅವನ ತಲೆಯ ಮೇಲೆಯೇ ಹೊರಿಸಿ, ಅವನು ಅಪರಾಧಿಯೆಂದು ತೋರಿಸಿಕೊಡಿರಿ. ನಿರ್ದೋಷಿಯಾಗಿದ್ದರೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡುವ ಹಾಗೆ ಪರಲೋಕದಲ್ಲಿರುವ ನೀವು ಅದನ್ನು ಕೇಳಿ, ನಿಮ್ಮ ಸೇವಕರ ನ್ಯಾಯವನ್ನು ತೀರಿಸಿರಿ.


ಯೆಹೋವ ದೇವರು ಕುಗ್ಗಿದವರಿಗೆ ಆಶ್ರಯವಾಗಿರುವರು, ಇಕ್ಕಟ್ಟಿನ ದಿವಸಗಳಲ್ಲಿ ಭದ್ರಕೋಟೆಯಾಗಿರುವರು.


ಏಕೆಂದರೆ ನಾನು ಯೆಹೋವ ದೇವರ ಮಾರ್ಗಗಳನ್ನು ಕೈಗೊಂಡೆನು; ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ.


ನನ್ನ ದೇವರೇ, ನನ್ನ ಯೆಹೋವ ದೇವರೇ, ನನ್ನ ನ್ಯಾಯವನ್ನು ನಿರ್ಣಯಿಸಿರಿ, ನನ್ನ ವ್ಯಾಜ್ಯದ ಪರವಾಗಿ ಎದ್ದೇಳಿರಿ.


ದೇವರೇ, ನನ್ನನ್ನು ನಿರ್ದೋಷಿ ಎಂದು ನಿರ್ಣಯಿಸಿರಿ, ಭಕ್ತಿಹೀನ ಜನತೆಯ ವಿರೋಧವಾಗಿ ನನ್ನ ನ್ಯಾಯವನ್ನು ವಾದಿಸಿರಿ. ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸಿರಿ.


“ಯೆಹೋವ ದೇವರು ಆಳಿಕೆ ಮಾಡುತ್ತಾರೆ; ಆದ್ದರಿಂದ ಲೋಕವು ಸ್ಥಿರವಾಗಿರುವುದು, ಕದಲುವುದಿಲ್ಲ; ಅವರು ಜನರಿಗೆ ನೀತಿಯಲ್ಲಿ ನ್ಯಾಯತೀರಿಸುತ್ತಾರೆ,” ಎಂದು ಎಲ್ಲಾ ಜನಾಂಗಗಳಲ್ಲಿ ಹೇಳಿರಿ.


ಸಮಸ್ತ ಸೃಷ್ಟಿಯು ಯೆಹೋವ ದೇವರ ಸನ್ನಿಧಿಯಲ್ಲಿ ಹಾಡಲಿ, ಏಕೆಂದರೆ ಅವರು ಲೋಕಕ್ಕೆ ನೀತಿಯಿಂದಲೂ; ಜನರಿಗೆ ತಮ್ಮ ಸತ್ಯದಿಂದಲೂ ನ್ಯಾಯತೀರಿಸಲು ಬರುತ್ತಾರೆ.


ಅವು ಯೆಹೋವ ದೇವರ ಮುಂದೆ ಹಾಡಲಿ, ಏಕೆಂದರೆ ಅವರು ಭೂಮಿಗೆ ನ್ಯಾಯತೀರಿಸಲು ಬರುತ್ತಾರೆ. ಅವರು ಲೋಕಕ್ಕೆ ನೀತಿಗನುಸಾರವಾಗಿಯೂ ಜನರಿಗೆ ನ್ಯಾಯಾನುಸಾರವಾಗಿಯೂ ತೀರ್ಪು ನೀಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು