Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 71:6 - ಕನ್ನಡ ಸಮಕಾಲಿಕ ಅನುವಾದ

6 ಹುಟ್ಟಿನಿಂದ ನೀವೇ ನನ್ನ ಭರವಸೆ. ತಾಯಿಯ ಗರ್ಭದಿಂದ ನೀವೇ ನನ್ನನ್ನು ಹೊರಗೆ ತಂದಿದ್ದೀರಿ. ನಾನು ಯಾವಾಗಲೂ ನಿಮ್ಮನ್ನು ಸ್ತುತಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ಹುಟ್ಟಿದಂದಿನಿಂದ ನಿನ್ನನ್ನೇ ಅವಲಂಬಿಸಿಕೊಂಡಿದ್ದೇನೆ. ತಾಯಿ ಹೆತ್ತಂದಿನಿಂದ ನನ್ನ ಉದ್ಧಾರಕನು ನೀನೇ. ನಾನು ಯಾವಾಗಲೂ ಹಿಗ್ಗುತ್ತಿರುವುದು ನಿನ್ನಲ್ಲಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಹುಟ್ಟಿನಿಂದಲೆ ನಾ ನಿನಗಂಟಿಕೊಂಡಿರುವೆನಯ್ಯಾ I ಗರ್ಭದಿಂದಲೆ ನೀ ಎನ್ನನು ಕರೆದುತಂದೆಯಯ್ಯಾ I ನಿರಂತರವೂ ನಿನ್ನನು ಕೊಂಡಾಡುತ್ತಿರುವೆನಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ಹುಟ್ಟಿದಂದಿನಿಂದ ನಿನ್ನನ್ನೇ ಆತುಕೊಂಡಿದ್ದೇನೆ; ತಾಯಿ ಹೆತ್ತಂದಿನಿಂದ ನನ್ನ ಉದ್ಧಾರಕನು ನೀನೇ. ನಾನು ಯಾವಾಗಲೂ ಹಿಗ್ಗುತ್ತಿರುವದು ನಿನ್ನಲ್ಲಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ಹುಟ್ಟಿದಂದಿನಿಂದಲೂ ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ. ನಾನು ಜನಿಸಿದಂದಿನಿಂದಲೂ ನೀನೇ ನನಗೆ ಆಧಾರವಾಗಿರುವೆ. ನಾನು ನಿನ್ನನ್ನು ಕೊಂಡಾಡುತ್ತಲೇ ಇರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 71:6
16 ತಿಳಿವುಗಳ ಹೋಲಿಕೆ  

“ನಾನು ನಿನ್ನನ್ನು ತಾಯಿಯ ಗರ್ಭದಲ್ಲಿ ನಿರ್ಮಿಸುವುದಕ್ಕಿಂತ ಮುಂಚೆಯೇ ನಿನ್ನನ್ನು ತಿಳಿದಿದ್ದೆನು. ನೀನು ಹುಟ್ಟುವುದಕ್ಕಿಂತ ಮುಂಚೆ ನಿನ್ನನ್ನು ಪ್ರತಿಷ್ಠಿಸಿದ್ದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯಾಗಿ ನೇಮಿಸಿದ್ದೇನೆ.”


ಆದರೆ ದೇವರು ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ, ತಮ್ಮ ಕೃಪೆಯ ಮೂಲಕ ನನ್ನನ್ನು ಕರೆದು,


ಈಗ ಯೆಹೋವ ದೇವರು ಹೀಗೆ ಹೇಳುತ್ತಾರೆ, ಯಾಕೋಬ್ಯರನ್ನು ತನ್ನ ಬಳಿಗೆ ಕರೆತರುವಂತೆಯೂ, ಇಸ್ರಾಯೇಲರನ್ನು ತನ್ನೊಂದಿಗೆ ಸೇರಿಸಿಕೊಳ್ಳುವಂತೆಯೂ ದೇವರು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಯೆಹೋವ ದೇವರ ದೃಷ್ಟಿಯಲ್ಲಿ ಮಾನ್ಯನಾಗಿರುವೆನು. ನನ್ನ ದೇವರೇ ನನಗೆ ಬಲವು.


ದ್ವೀಪಗಳೇ, ನನ್ನ ಮಾತನ್ನು ಕೇಳಿರಿ. ದೂರದ ರಾಷ್ಟ್ರಗಳೇ, ಕಿವಿಗೊಡಿರಿ! ನನ್ನ ಜನನದ ಮುಂಚೆಯೇ ಯೆಹೋವ ದೇವರು ನನ್ನನ್ನು ಕರೆದರು. ತಾಯಿಯ ಉದರದಲ್ಲಿದ್ದಾಗಲೇ ನನಗೆ ಹೆಸರಿಟ್ಟರು.


ನಾನು ಎಲ್ಲಾ ಕಾಲಗಳಲ್ಲಿ ಯೆಹೋವ ದೇವರನ್ನು ಸ್ತುತಿಸುವೆನು; ಅವರ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು.


ಈಗಲೂ ನನಗೆ, ‘ನನ್ನ ತಂದೆಯೇ, ನನ್ನ ಯೌವನದ ಸ್ನೇಹಿತನು ನೀನೇ,’ ಎಂದು ನೀನು ಕರೆಯುತ್ತಿರುವೆ.


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ; ಹಂಬಲಿಸಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.


ಆದರೆ ನಾನು ಎಂದೆಂದೂ ನಿಮ್ಮನ್ನು ನಿರೀಕ್ಷಿಸುತ್ತಾ, ನಿಮ್ಮನ್ನು ಇನ್ನೂ ಹೆಚ್ಚೆಚ್ಚಾಗಿ ಸ್ತುತಿಸುವೆನು.


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ತಂದೆಯಾದ ದೇವರಿಗೆ, ಯಾವಾಗಲೂ ಎಲ್ಲಾ ಕಾರ್ಯಗಳಿಗೋಸ್ಕರ ಕೃತಜ್ಞತೆಯನ್ನು ಸಲ್ಲಿಸಿರಿ.


ನನ್ನಿಂದ ದೂರವಾಗಿರಬೇಡಿರಿ, ಏಕೆಂದರೆ ಇಕ್ಕಟ್ಟು ಸಮೀಪವಾಗಿದೆ, ಸಹಾಯಕರು ನನಗೆ ಯಾರೂ ಇಲ್ಲ.


ಯೆಹೋವ ದೇವರನ್ನು ತನ್ನ ಭರವಸೆಯಾಗಿ ಮಾಡಿಕೊಂಡು ಅಹಂಕಾರಿಗಳನ್ನು ಗೌರವಿಸದೆಯೂ ಇಲ್ಲವೆ ಸುಳ್ಳಿನ ಕಡೆಗೆ ತಿರುಗಿಕೊಳ್ಳದೆಯೂ ಇರುವ ಮನುಷ್ಯನು ಧನ್ಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು