Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 71:8 - ಕನ್ನಡ ಸಮಕಾಲಿಕ ಅನುವಾದ

8 ನನ್ನ ಬಾಯಿ ನಿಮ್ಮ ಸ್ತೋತ್ರದಿಂದ ತುಂಬಿರಲಿ. ನಾನು ದಿನವೆಲ್ಲಾ ನಿಮ್ಮ ವೈಭವವನ್ನೇ ಸಾರುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನನ್ನ ಬಾಯಲ್ಲಿ ನಿನ್ನ ಸ್ತೋತ್ರವಲ್ಲದೆ ಮತ್ತೊಂದಿಲ್ಲ; ದಿನವೆಲ್ಲಾ ನಿನ್ನ ಘನತೆಯನ್ನು ವರ್ಣಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಿನ್ನ ಗುಣಗಾನ ನನ್ನ ಬಾಯ್ತುಂಬ I ನಿನ್ನ ಘೋಷಣೆ ನನಗೆ ದಿನವಾದ್ಯಂತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನನ್ನ ಬಾಯಲ್ಲಿ ನಿನ್ನ ಸ್ತೋತ್ರವಲ್ಲದೆ ಮತ್ತೊಂದಿಲ್ಲ; ದಿನವೆಲ್ಲಾ ನಿನ್ನ ಘನತೆಯನ್ನು ವರ್ಣಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದಿನವೆಲ್ಲಾ ನಿನ್ನ ಅದ್ಭುತಕಾರ್ಯಗಳ ಬಗ್ಗೆ ನಿನ್ನನ್ನು ಸ್ತುತಿಸಿ ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 71:8
9 ತಿಳಿವುಗಳ ಹೋಲಿಕೆ  

ಆಗ ನನ್ನ ನಾಲಿಗೆಯು ನಿಮ್ಮ ನೀತಿಯನ್ನೂ ದಿನವೆಲ್ಲಾ ನಿಮ್ಮ ಸ್ತೋತ್ರವನ್ನೂ ವರ್ಣಿಸುವುದು.


ನಾನು ಬದುಕುವವರೆಗೂ ಯೆಹೋವ ದೇವರನ್ನು ಸ್ತುತಿಸುವೆನು; ನಾನು ಇರುವವರೆಗೂ ನನ್ನ ದೇವರನ್ನು ಸ್ತುತಿಸುವೆನು.


ನನ್ನ ಮನವೇ, ಯೆಹೋವ ದೇವರನ್ನು ಸ್ತುತಿಸು. ನನ್ನ ದೇವರಾದ ಯೆಹೋವ ದೇವರೇ, ನೀವು ಬಹಳ ದೊಡ್ಡವರಾಗಿದ್ದೀರಿ; ಘನತೆಯಿಂದಲೂ, ಪ್ರಭಾವದಿಂದಲೂ ಭೂಷಿತನಾಗಿರುವೆ.


ನನ್ನ ನಾಲಿಗೆಯು ಸಹ ದಿನವೆಲ್ಲಾ ನಿಮ್ಮ ನೀತಿಯನ್ನು ಮಾತನಾಡುವುದು, ಏಕೆಂದರೆ ನನಗೆ ಕೇಡು ಬಗೆಯುವವರು ನಾಚಿಕೊಂಡು ತಲೆ ತಗ್ಗಿಸಿದ್ದಾರೆ.


ನನ್ನ ಬಾಯಿ ದಿನವೆಲ್ಲಾ ನಿಮ್ಮ ನೀತಿಯನ್ನೂ ನಿಮ್ಮ ರಕ್ಷಣೆಯನ್ನೂ ಪ್ರಕಟಿಸುವುದು. ಅವುಗಳನ್ನು ವಿವರಿಸಲು ನನಗೆ ತಿಳಿಯದು.


ಮೃಷ್ಟ ಭೋಜನದಿಂದಲೋ ಎಂಬಂತೆ ನಾನು ನಿಮ್ಮಲ್ಲಿ ಸಂತೃಪ್ತನಾಗಿದ್ದೇನೆ. ಉತ್ಸಾಹದ ತುಟಿಗಳಿಂದ ನನ್ನ ಬಾಯಿಯು ನಿಮ್ಮನ್ನು ಸ್ತುತಿಸುವುದು.


ಘನತೆಯೂ, ಪ್ರಭೆಯೂ ಅವರ ಮುಂದೆ ಇವೆ; ಬಲವೂ, ಸೌಂದರ್ಯವೂ ಅವರ ಪರಿಶುದ್ಧ ಸ್ಥಳದಲ್ಲಿ ಇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು