Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 72:16 - ಕನ್ನಡ ಸಮಕಾಲಿಕ ಅನುವಾದ

16 ಧಾನ್ಯದ ಸಮೃದ್ಧಿಯು ದೇಶದಲ್ಲಿ ಬೆಟ್ಟಗಳ ತುದಿಯವರೆಗೂ ಇರಲಿ; ಅದರ ಫಲವು ಲೆಬನೋನಿನ ಹಾಗೆ ಸಮೃದ್ಧಿಯಾಗಲಿ; ಪಟ್ಟಣದವರು ಭೂಮಿಯ ಸೊಪ್ಪಿನ ಹಾಗೆ ವೃದ್ಧಿ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದೇಶದಲ್ಲಿ ಬೆಟ್ಟಗಳ ಮೇಲೆಲ್ಲಾ ಬೆಳೆಯು ಸಮೃದ್ಧಿಯಾಗಲಿ; ಪೈರುಗಳ ಶಬ್ದವು ಲೆಬನೋನಿನ ಮರಗಳ ಸಪ್ಪಳದಂತಿರಲಿ. ಹೊಲದಲ್ಲಿ ಕಾಯಿಪಲ್ಯದಂತೆ ಪಟ್ಟಣಗಳಲ್ಲಿ ಜನರು ಹೆಚ್ಚಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸಮೃದ್ಧಿಯಾಗಲಿ ನಾಡಿನ ದವಸಧಾನ್ಯ ನೆಲಮಲೆಗಳ ಮೇಲೆ I ಸೊಂಪಾಗಲಿ ಅದರ ಹಣ್ಣುಹಂಪಲು ಲೆಬನೋನಿನ ಮರಗಳಂತೆ I ಹುಲುಸಾಗಲಿ ನಗರ ನಿವಾಸಿಗಳ ಸಂಖ್ಯೆ ಬಯಲಿನ ಹುಲ್ಲಿನಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ದೇಶದಲ್ಲಿ ಬೆಟ್ಟಗಳ ಮೇಲೆಲ್ಲಾ ಬೆಳೆಯು ಸಮೃದ್ಧಿಯಾಗಲಿ; ಪೈರುಗಳ ಶಬ್ದವು ಲೆಬನೋನಿನ ಮರಗಳ ಸಪ್ಪಳದಂತಿರಲಿ. ಹೊಲದಲ್ಲಿ ಕಾಯಿಪಲ್ಯದಂತೆ ಪಟ್ಟಣಗಳಲ್ಲಿ ಜನರು ಹೆಚ್ಚಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಹೊಲಗಳು ಯಥೇಚ್ಚವಾಗಿ ಧಾನ್ಯಬೆಳೆಯಲಿ. ಬೆಟ್ಟಗಳು ಬೆಳೆಗಳಿಂದ ತುಂಬಿಹೋಗಲಿ. ಹೊಲಗಳು ಲೆಬನೋನಿನಲ್ಲಿರುವ ಹೊಲಗಳಂತೆ ಫಲವತ್ತಾಗಿರಲಿ. ಬಯಲುಗಳು ಹುಲ್ಲಿನಿಂದ ಆವೃತಿಯಾಗಿರುವಂತೆ ಪಟ್ಟಣಗಳು ಜನರಿಂದ ತುಂಬಿಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 72:16
23 ತಿಳಿವುಗಳ ಹೋಲಿಕೆ  

ಇದಾದನಂತರ ಯಾರೂ ಎಣಿಸಲಾಗದಂಥ ಮಹಾ ಜನಸಮೂಹವನ್ನು ಕಂಡೆನು. ಅವರು ಪ್ರತಿ ರಾಷ್ಟ್ರ, ಕುಲ, ಜನ ಮತ್ತು ಭಾಷೆಯವರಾಗಿದ್ದು, ಯಜ್ಞದ ಕುರಿಮರಿ ಆಗಿರುವವರ ಮುಂದೆಯೂ ಸಿಂಹಾಸನದ ಮುಂದೆಯೂ ನಿಂತಿದ್ದರು. ಅವರು ಬಿಳಿ ನಿಲುವಂಗಿಗಳನ್ನು ಧರಿಸಿದ್ದವರಾಗಿ, ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು.


ಆದರೆ ಸಂದೇಶವನ್ನು ಕೇಳಿದವರಲ್ಲಿ ಅನೇಕರು ನಂಬಿದರು. ಅವರ ಸಂಖ್ಯೆ ಸುಮಾರು ಐದು ಸಾವಿರಕ್ಕೇರಿತು.


ಪೇತ್ರನ ಸಂದೇಶವನ್ನು ಸ್ವೀಕರಿಸಿದವರು ದೀಕ್ಷಾಸ್ನಾನ ಪಡೆದರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿದರು.


ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಸೇರಿದ್ದರು. ಅವರ ನಡುವೆ ಪೇತ್ರನು ಎದ್ದು ನಿಂತು, ಹೀಗೆಂದನು:


ಆದರೆ ನನ್ನ ದಾಸ ದಾವೀದನ ಸಂತಾನವನ್ನೂ ನನ್ನ ಪರಿಚಾರಕರಾದ ಲೇವಿಯರನ್ನೂ ಅಸಂಖ್ಯಾತ ನಕ್ಷತ್ರಗಣದಷ್ಟು ಮತ್ತು ಎಣಿಸಲಾಗದ ಸಮುದ್ರತೀರದ ಮರಳಿನಷ್ಟು ಅಧಿಕಗೊಳಿಸುವೆನು.’ ”


ಅದು ಸಮೃದ್ಧಿಯಾಗಿ ಅರಳಿ, ಆನಂದ ಧ್ವನಿ ಎತ್ತಿ ಉಲ್ಲಾಸಿಸುವುದು. ಲೆಬನೋನಿನ ಘನತೆಯು ಮತ್ತು ಕರ್ಮೆಲ್, ಶಾರೋನಿನ ಗೌರವವು ಅದಕ್ಕೆ ಕೊಡಲಾಗುವುದು. ಅವರು ಯೆಹೋವ ದೇವರ ಮಹಿಮೆಯನ್ನು ಮತ್ತು ನಮ್ಮ ದೇವರ ಘನತೆಯನ್ನು ಕಾಣುವರು.


ನೀರಿರುವ ಎಲ್ಲಾ ಕಡೆಗಳಲ್ಲಿ ಬಿತ್ತನೆ ಮಾಡಿ, ದನಕತ್ತೆಗಳನ್ನು ಮೇಯಲು ಬಿಡುವ ನೀವು ಧನ್ಯರೇ ಸರಿ.


ಆದರೆ ದೇವರು ಉನ್ನತಲೋಕದಲ್ಲಿ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು, ಫಲಭರಿತ ಭೂಮಿ ಸಮೃದ್ಧವಾದ ಅರಣ್ಯವಾಗಿ ಮಾರ್ಪಡುವುದು.


ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸುವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವೆನು. ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಹುಲ್ಲುಗಾವಲುಗಳಲ್ಲಿ ಮೇಯುವುವು.


ಆದರೂ ಇನ್ನು ಸ್ವಲ್ಪಕಾಲದಲ್ಲಿ ಲೆಬನೋನ್ ಫಲವುಳ್ಳ ಹೊಲವಾಗಿದ್ದು, ಆ ಫಲವುಳ್ಳ ಹೊಲವು ಅಡವಿಯಾಗಿ ಎಣಿಸಲ್ಪಡುವುದಿಲ್ಲವೋ?


ಯೆಹೋವ ದೇವರು ನೆಟ್ಟ ಮರಗಳಾದ ಲೆಬನೋನಿನ ದೇವದಾರು ವೃಕ್ಷಗಳಿಗೆ ಬೇಕಾದಷ್ಟು ಜಲವಿರುತ್ತದೆ.


ಕೊಯ್ದ ಹುಲ್ಲಿನ ಮೇಲೆ ಬೀಳುವ ಮಳೆಯ ಹಾಗೆಯೂ, ಭೂಮಿಯನ್ನು ನೆನಸುತ್ತಾ ಸುರಿಯುವ ಮಳೆಗಳ ಹಾಗೆಯೂ ಅರಸನು ಇರಲಿ.


ನಿನ್ನ ಆರಂಭವು ಅಲ್ಪವಾಗಿದ್ದರೂ, ನಿನ್ನ ಅಂತ್ಯವು ಬಹಳವಾಗಿ ವೃದ್ಧಿ ಹೊಂದುವುದು.


ನಿನ್ನ ಸಂತತಿಯು ಬಹಳವಾಗಿದೆ ಎಂದೂ, ನಿನ್ನ ಸಂತಾನವು ಭೂಮಿಯ ಹುಲ್ಲಿನಂತಿದೆ ಎಂದೂ ತಿಳಿದುಕೊಳ್ಳುವೆ.


ಯೆಹೂದ ಮತ್ತು ಇಸ್ರಾಯೇಲಿನ ಜನರು ಸಮುದ್ರದ ಮರಳಿನ ಹಾಗೆ ಅಸಂಖ್ಯಾತರಾದರು. ಅವರು ಉಂಡು ಕುಡಿದು ಸುಖದಿಂದ ಇದ್ದರು.


ಅದಕ್ಕೆ ನಾನು, “ನನ್ನ ಒಡೆಯನೆ ನೀನೇ ಬಲ್ಲೆ!” ಎಂದು ಉತ್ತರಿಸಿದೆನು. ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು. ಇವರು ತಮ್ಮ ನಿಲುವಂಗಿಗಳನ್ನು ಕುರಿಮರಿ ಆಗಿರುವವರ ರಕ್ತದಲ್ಲಿ ಅವುಗಳನ್ನು ಬೆಳ್ಳಗೆ ಮಾಡಿಕೊಂಡಿದ್ದಾರೆ!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು