Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 73:15 - ಕನ್ನಡ ಸಮಕಾಲಿಕ ಅನುವಾದ

15 ನಾನು ಈ ಪ್ರಕಾರ ಬಾಯಿತೆರೆದು ಮಾತಾಡಿದ್ದರೆ, ನಿಮ್ಮ ಪ್ರಜೆಗೆ ದ್ರೋಹಿಯಾಗುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಾನು ಈ ಪ್ರಕಾರ ಬಾಯಿಬಿಡುವುದಕ್ಕೆ ಮನಸ್ಸು ಮಾಡಿಕೊಂಡಿದ್ದರೆ, ನಿನ್ನ ಭಕ್ತಕುಲಕ್ಕೆ ದ್ರೋಹಿಯಾಗುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಾ ಬಾಯ್ದೆರೆದು ನುಡಿದಿದ್ದೆನಾದರೆ ಈ ಪರಿ I ನಿನ್ನ ಭಕ್ತಕುಲಕೆ ನಾ ದ್ರೋಹಿಯೇ ಸರಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಾನು ಈ ಪ್ರಕಾರ ಬಾಯಿಬಿಡುವದಕ್ಕೆ ಮನಸ್ಸು ಮಾಡಿಕೊಂಡಿದ್ದರೆ ನಿನ್ನ ಭಕ್ತಕುಲಕ್ಕೆ ದ್ರೋಹಿಯಾಗುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇವುಗಳ ಬಗ್ಗೆ ನಾನು ಬೇರೆಯವರಿಗೆ ಹೇಳಬೇಕೆಂದಿದ್ದೆ. ಒಂದುವೇಳೆ ಹೇಳಿದ್ದರೆ, ನಿನ್ನ ಜನರಿಗೆ ದ್ರೋಹಿಯಾಗುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 73:15
10 ತಿಳಿವುಗಳ ಹೋಲಿಕೆ  

ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ. ನಿಮ್ಮ ಉಪದೇಶದಿಂದ ಅನೇಕರನ್ನು ಎಡವುವಂತೆ ಮಾಡಿದ್ದೀರಿ. ಲೇವಿಯರೊಂದಿಗಿನ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.


ಮಾಂಸ ತಿನ್ನುವುದಾಗಲಿ, ದ್ರಾಕ್ಷಾರಸವನ್ನು ಕುಡಿಯುವುದಾಗಲಿ ಅಥವಾ ಬೇರೆ ಏನನ್ನೇ ಆಗಲಿ, ಅದು ನಿಮ್ಮ ಸಹೋದರರನ್ನು ಎಡವುವಂತೆ ಮಾಡುವುದಾದರೆ ಅದನ್ನು ಮಾಡದೆ ಇರುವುದೇ ಒಳ್ಳೆಯದು.


ನೀವು ಆಹಾರದಿಂದ ನಿಮ್ಮ ಸಹೋದರರನ್ನು ದುಃಖ ಪಡಿಸುವುದಾದರೆ ನೀವು ಪ್ರೀತಿಯಿಂದ ನಡೆದುಕೊಳ್ಳುವುದಿಲ್ಲ. ನೀವು ತಿನ್ನುವುದರ ಮೂಲಕ ಕ್ರಿಸ್ತನು ಯಾವನಿಗೋಸ್ಕರವಾಗಿ ಸತ್ತರೋ ಅಂಥವರನ್ನು ನಾಶಮಾಡಬೇಡಿರಿ.


ಇಂಥವರೇ ದೇವರನ್ನು ಹುಡುಕುವ ಸಂತತಿಯು; ಯಾಕೋಬನ ದೇವರೇ, ನಿಮ್ಮನ್ನು ಹುಡುಕುವವರು ಇಂಥವರೇ.


ಸಂತಾನವು ದೇವರನ್ನು ಸೇವಿಸುವುದು; ಮುಂದಿನ ಸಂತತಿಗಳಿಗೆ ಯೆಹೋವ ದೇವರ ಬಗ್ಗೆ ಹೇಳಲಾಗುವುದು.


ದೇವರು ನೀತಿವಂತರ ಸಹವಾಸದಲ್ಲಿ ಇರುವುದರಿಂದ, ದುಷ್ಟತ್ವವನ್ನು ನಡೆಸುವವರು ಅತ್ಯಂತ ಭಯಭ್ರಾಂತರಾಗುವರು.


ನನ್ನ ಮಕ್ಕಳೇ, ಹಾಗೆ ಮಾಡಬೇಡಿರಿ. ಏಕೆಂದರೆ ಯೆಹೋವ ದೇವರ ಜನರಲ್ಲಿ ನೀವು ಮಾಡಿರುವ ಕಾರ್ಯಗಳ ವರ್ತಮಾನವು ಹರಡಿದ್ದು ಒಳ್ಳೆಯದಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು