Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 73:28 - ಕನ್ನಡ ಸಮಕಾಲಿಕ ಅನುವಾದ

28 ನನಗಾದರೋ ದೇವರ ಸಮೀಪಕ್ಕೆ ಬರುವುದೇ ಒಳ್ಳೆಯದು. ನಿಮ್ಮ ಕ್ರಿಯೆಗಳನ್ನೆಲ್ಲಾ ಸಾರುವುದಕ್ಕೆ ಸಾರ್ವಭೌಮ ಯೆಹೋವ ದೇವರಲ್ಲಿ ನನ್ನ ಭರವಸೆಯನ್ನು ಇಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನನಗಾದರೋ ದೇವರ ಸಾನ್ನಿಧ್ಯವೇ ಭಾಗ್ಯವು. ಕರ್ತನೇ, ಯೆಹೋವನೇ, ನಾನು ನಿನ್ನನ್ನು ಆಶ್ರಯಿಸಿಕೊಂಡವನಾಗಿ ನಿನ್ನ ಮಹತ್ಕಾರ್ಯಗಳನ್ನು ಪ್ರಕಟಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನಿನ್ನ ಸಾನ್ನಿಧ್ಯ ಸ್ವಾಮಿದೇವಾ, ನನಗೆಂಥ ಸೌಭಾಗ್ಯ I ನಿನ್ನ ಸತ್ಕಾರ್ಯಗಳ ಸಾರಲೆಂದೆ ನಿನ್ನನಾಶ್ರಯಿಸಿಕೊಂಡೆನಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನನಗಾದರೋ ದೇವರ ಸಾನ್ನಿಧ್ಯವೇ ಭಾಗ್ಯವು. ಕರ್ತನೇ, ಯೆಹೋವನೇ, ನಾನು ನಿನ್ನನ್ನು ಆಶ್ರಯಿಸಿಕೊಂಡವನಾಗಿ ನಿನ್ನ ಮಹತ್ಕಾರ್ಯಗಳನ್ನು ಪ್ರಕಟಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನನಗಾದರೋ ದೇವರ ಸಮೀಪದಲ್ಲಿರುವುದೇ ಭಾಗ್ಯವಾಗಿದೆ. ನನ್ನ ಒಡೆಯನಾದ ಯೆಹೋವನನ್ನು ನನ್ನ ಆಶ್ರಯಸ್ಥಾನವನ್ನಾಗಿ ಮಾಡಿಕೊಂಡಿರುವೆ. ದೇವರೇ, ನಿನ್ನ ಎಲ್ಲಾ ಕಾರ್ಯಗಳ ಕುರಿತಾಗಿ ಹೇಳಲು ಬಂದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 73:28
17 ತಿಳಿವುಗಳ ಹೋಲಿಕೆ  

ನನ್ನ ದೇವರಾದ ಯೆಹೋವ ದೇವರೇ, ನೀವು ಮಾಡಿದ ನಿಮ್ಮ ಅದ್ಭುತಕಾರ್ಯಗಳು ಎಷ್ಟೋ! ನಮ್ಮ ಕಡೆ ನಿಮಗಿರುವ ಯೋಜನೆಗಳೂ ಬಹಳ, ನಿಮಗೆ ಸರಿಸಾಟಿ ಯಾರೂ ಇಲ್ಲ. ನಿಮ್ಮ ಕೃತ್ಯಗಳನ್ನು ನಾನು ತಿಳಿಸಿ ಹೇಳಬೇಕಾದರೆ, ಅವು ಎಣಿಸಲು ಅಸಾಧ್ಯ.


ದೇವರ ಸಮೀಪಕ್ಕೆ ಬನ್ನಿರಿ. ಆಗ ನಿಮ್ಮ ಸಮೀಪಕ್ಕೆ ದೇವರು ಬರುವರು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ. ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.


ನೀವು ಆಯ್ದುಕೊಂಡು ನಿಮ್ಮ ಬಳಿಗೆ ಬರಮಾಡಿಕೊಳ್ಳುವವನು ಧನ್ಯನು. ಏಕೆಂದರೆ ನಿಮ್ಮ ಅಂಗಳಗಳಲ್ಲಿ ಅವನು ವಾಸವಾಗಿರುವನು. ನಿಮ್ಮ ಪರಿಶುದ್ಧ ಮಂದಿರವಾದ ನಿಮ್ಮ ಆಲಯದ ಒಳ್ಳೆಯ ಸಂಗತಿಗಳಿಂದ ನಮಗೆ ತೃಪ್ತಿಯಾಗಲಿ.


ಕ್ರಿಸ್ತ ಯೇಸುವು ನೀತಿವಂತರಾಗಿದ್ದರೂ ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವುದಕ್ಕಾಗಿ, ಒಂದೇ ಸಾರಿ ಪಾಪಗಳಿಗೋಸ್ಕರ ಬಾಧೆಪಟ್ಟು ಶರೀರದಲ್ಲಿ ಮರಣಹೊಂದಿದರು. ಆದರೆ ಆತ್ಮದಲ್ಲಿ ಬದುಕುವವರಾದರು.


ನಾನು ಸಾಯದೆ ಬದುಕಿರುವೆನು, ಯೆಹೋವ ದೇವರು ಮಾಡಿದ್ದನ್ನು ಸಾರುವೆನು.


ನನ್ನ ನಾಲಿಗೆಯು ಸಹ ದಿನವೆಲ್ಲಾ ನಿಮ್ಮ ನೀತಿಯನ್ನು ಮಾತನಾಡುವುದು, ಏಕೆಂದರೆ ನನಗೆ ಕೇಡು ಬಗೆಯುವವರು ನಾಚಿಕೊಂಡು ತಲೆ ತಗ್ಗಿಸಿದ್ದಾರೆ.


ಏಕೆಂದರೆ ನಿಮ್ಮ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು ಬೇರೆ ಸಹಸ್ರ ದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಬಾಗಿಲು ಕಾಯುವವನಾಗಿರುವುದೇ ಲೇಸು.


ನನ್ನ ಮನವೇ, ನೀನು ವಿಶ್ರಾಂತಿಯಿಂದಿರು; ಏಕೆಂದರೆ ಯೆಹೋವ ದೇವರು ನಿನಗೆ ಉಪಕಾರಿಯಾಗಿದ್ದಾರೆ.


ಧನ್ಯವಾದ ಬಲಿಗಳನ್ನು ಅರ್ಪಿಸಿ, ದೇವರ ಕೆಲಸಗಳನ್ನು ಉತ್ಸಾಹದಿಂದ ಸಾರಲಿ.


ದೇವರೇ, ನನ್ನ ಯೌವನದಿಂದ ನನಗೆ ನೀವು ಕಲಿಸಿದ್ದೀರಿ. ಈವರೆಗೂ ನಿಮ್ಮ ಅದ್ಭುತಕಾರ್ಯಗಳನ್ನು ಘೋಷಿಸುತ್ತಿದ್ದೇನೆ.


ಸಮಸ್ತ ದೇವಭಕ್ತರೇ, ಬಂದು ಕೇಳಿರಿ. ದೇವರು ನನಗೆ ಮಾಡಿದ್ದನ್ನು ನಾನು ನಿಮಗೆ ತಿಳಿಸುವೆನು.


ದುಷ್ಟತ್ವ ನಡೆಸುವವರೇ, ನೀವು ಬಡವರ ಯೋಜನೆಗಳನ್ನು ನಿರಾಶೆಗೊಳಿಸುತ್ತೀರಿ, ಆದರೆ ಯೆಹೋವ ದೇವರೇ ಅವರ ಆಶ್ರಯವಾಗಿದ್ದಾರೆ.


ಸೌಲನು ಜನರಿಗೆ, “ನಾವು ಈ ರಾತ್ರಿಯಲ್ಲಿ ಫಿಲಿಷ್ಟಿಯರನ್ನು ಬೆನ್ನಟ್ಟಿ ಹೋಗಿ, ಉದಯಕಾಲದವರೆಗೆ ಅವರನ್ನು ಸುಲಿದುಕೊಂಡು, ಅವರಲ್ಲಿ ಒಬ್ಬನನ್ನಾದರೂ ಉಳಿಸಬಾರದು,” ಎಂದನು. ಅದಕ್ಕೆ ಜನರು, “ನಿನ್ನ ದೃಷ್ಟಿಗೆ ಒಳ್ಳೆಯದಾಗಿ ತೋರುವುದನ್ನೆಲ್ಲಾ ಮಾಡು,” ಎಂದರು. ಆಗ ಯಾಜಕನು, “ದೇವರ ಸನ್ನಿಧಿಗೆ ಹೋಗೋಣ,” ಎಂದನು.


ನನ್ನ ಬಾಯಿ ದಿನವೆಲ್ಲಾ ನಿಮ್ಮ ನೀತಿಯನ್ನೂ ನಿಮ್ಮ ರಕ್ಷಣೆಯನ್ನೂ ಪ್ರಕಟಿಸುವುದು. ಅವುಗಳನ್ನು ವಿವರಿಸಲು ನನಗೆ ತಿಳಿಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು