Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 74:13 - ಕನ್ನಡ ಸಮಕಾಲಿಕ ಅನುವಾದ

13 ನೀವು ನಿಮ್ಮ ಬಲದಿಂದ ಸಮುದ್ರವನ್ನು ವಿಭಾಗಿಸಿದ್ದೀರಿ. ತಿಮಿಂಗಿಲಗಳ ತಲೆಗಳನ್ನು ನೀರಿನಲ್ಲಿ ಬಡಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸ್ವಶಕ್ತಿಯಿಂದ ಸಮುದ್ರವನ್ನು ಭೇದಿಸಿದವನು ನೀನು; ಜಲರಾಶಿಯ ಮೇಲೆ ತಿಮಿಂಗಿಲಗಳ ತಲೆಗಳನ್ನು ಜಜ್ಜಿಬಿಟ್ಟವನು ನೀನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸ್ವಶಕ್ತಿಯಿಂದ ಸಮುದ್ರವನೆ ಭೇದಿಸಿದೆ ನೀನು I ಜಲರಾಶಿಯ ಭುಜಂಗಗಳ ತಲೆ ಜಜ್ಜಿದಾತ ನೀನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸ್ವಶಕ್ತಿಯಿಂದ ಸಮುದ್ರವನ್ನು ಭೇದಿಸಿದವನು ನೀನು; ಜಲರಾಶಿಯ ಮೇಲೆ ತಿವಿುಂಗಿಲಗಳ ತಲೆಗಳನ್ನು ಜಜ್ಜಿಬಿಟ್ಟವನು ನೀನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಮಹಾಶಕ್ತಿಯಿಂದ ಕೆಂಪು ಸಮುದ್ರವನ್ನು ಇಬ್ಭಾಗ ಮಾಡಿದಾತನು ನೀನೇ. ಸಮುದ್ರದಲ್ಲಿ ಮಹಾ ತಿಮಿಂಗಲಗಳ ತಲೆಗಳನ್ನು ಜಜ್ಜಿ ಹಾಕಿದಾತನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 74:13
11 ತಿಳಿವುಗಳ ಹೋಲಿಕೆ  

ಆಗ ಮೋಶೆಯು ಸಮುದ್ರದ ಮೇಲೆ ತನ್ನ ಬಲಗೈಯನ್ನು ಚಾಚಲಾಗಿ, ಯೆಹೋವ ದೇವರು ರಾತ್ರಿಯೆಲ್ಲಾ ಬಲವಾದ ಪೂರ್ವದಿಕ್ಕಿನ ಗಾಳಿಯಿಂದ ಸಮುದ್ರವನ್ನು ಹಿಂದಕ್ಕೆ ಹೋಗುವಂತೆ ಸಮುದ್ರವನ್ನು ಸರಿಸಿ, ಒಣ ನೆಲ ಕಾಣಿಸುವಂತೆ ಮಾಡಿದರು. ಆಗ ನೀರು ವಿಭಾಗವಾಯಿತು.


ದೇವರು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದರು. ನೀರನ್ನು ಗೋಡೆಯಾಗಿ ನಿಲ್ಲಿಸಿದರು.


ನೀನು ಮಾತನಾಡಿ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಈಜಿಪ್ಟಿನ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು ಈ ನೈಲ್ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ.


“ಮನುಷ್ಯಪುತ್ರನೇ, ಈಜಿಪ್ಟಿನ ಅರಸನಾದ ಫರೋಹನ ವಿಷಯವಾಗಿ ಪ್ರಲಾಪವನ್ನೆತ್ತಿ ಅವನಿಗೆ ಹೇಳಬೇಕಾದದ್ದೇನೆಂದರೆ: “ ‘ನೀನು ಜನಾಂಗಗಳಲ್ಲಿ ಸಿಂಹದ ಮರಿಗೆ ಸಮನಾಗಿರುವೆ, ಮತ್ತು ಸಮುದ್ರಗಳಲ್ಲಿರುವ ತಿಮಿಂಗಿಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು ನೀರನ್ನು ನಿನ್ನ ಕಾಲುಗಳಿಂದ ಕಲಕಿ ಹೊಳೆಗಳನ್ನು ತುಳಿದು ಬದಿಮಾಡಿದೆ.


ದೇವರು ಸಮುದ್ರವನ್ನು ಒಣ ಭೂಮಿಯನ್ನಾಗಿ ಮಾಡಿದರು. ಜನರು ಕಾಲಿನಿಂದ ನದಿಯನ್ನು ದಾಟಿದರು. ಬನ್ನಿರಿ, ದೇವರಲ್ಲಿ ಆನಂದಿಸೋಣ.


ನೀವು ಜನರ ಮುಂದೆ ಸಮುದ್ರವನ್ನು ವಿಭಾಗಿಸಿದ್ದರಿಂದ, ಅವರು ಸಮುದ್ರದ ನಡುವೆ ಒಣಭೂಮಿಯಲ್ಲಿ ಹಾದುಹೋದರು. ಆದರೆ ಅವರನ್ನು ಹಿಂದಟ್ಟಿದವರನ್ನು ಅಗಾಧಗಳಲ್ಲಿ ಕಲ್ಲಿನಂತೆ ಮಹಾ ಜಲರಾಶಿಗಳಲ್ಲಿ ಮುಳುಗಿಸಿಬಿಟ್ಟಿರಿ


ನೀರು ತಿರುಗಿಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಹೀಗೆ ಒಬ್ಬರೂ ಉಳಿಯದಂತೆ ಮುಳುಗಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು