Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 74:2 - ಕನ್ನಡ ಸಮಕಾಲಿಕ ಅನುವಾದ

2 ಪೂರ್ವಕಾಲದಲ್ಲಿ ನೀವು ಕೊಂಡುಕೊಂಡ ನಿಮ್ಮ ಜನರನ್ನೂ ನೀವು ವಿಮೋಚಿಸಿದ ನಿಮ್ಮ ಬಾಧ್ಯತೆಯನ್ನೂ ನೀವು ವಾಸಮಾಡಿದ ಚೀಯೋನ್ ಪರ್ವತವನ್ನೂ ಜ್ಞಾಪಕಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀನು ಹಿಂದಿನ ಕಾಲದಲ್ಲಿ ಸ್ವಕುಲವಾಗಿರಬೇಕೆಂದು ಬಿಡುಗಡೆ ಮಾಡಿ ಸಂಪಾದಿಸಿಕೊಂಡ ನಿನ್ನ ಸಭಾಮಂಡಲಿಯನ್ನು ಜ್ಞಾಪಿಸಿಕೋ; ನಿನ್ನ ವಾಸಸ್ಥಾನವಾಗಿದ್ದ ಚೀಯೋನ್ ಪರ್ವತವನ್ನು ಮರೆಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನೆನಸಿಕೊ ಆದಿಯಲೆ ನೀ ಸಂಪಾದಿಸಿಕೊಂಡ ಸಭೆಯನು I ಸ್ಮರಿಸಿಕೊ ಸೊತ್ತಾಗಿ ನೀ ರಕ್ಷಿಸಿಕೊಂಡ ಗೋತ್ರವನು I ಜ್ಞಾಪಿಸಿಕೊ ನಿನ್ನ ಸದನವಾಗಿದ್ದ ಸಿಯೋನ್ ಶಿಖರವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ಹಿಂದಿನ ಕಾಲದಲ್ಲಿ ಸ್ವಕುಲವಾಗಿರಬೇಕೆಂದು ಬಿಡಿಸಿ ಸಂಪಾದಿಸಿಕೊಂಡ ನಿನ್ನ ಮಂಡಲಿಯನ್ನು ಜ್ಞಾಪಿಸಿಕೋ; ನಿನ್ನ ವಾಸಸ್ಥಾನವಾಗಿದ್ದ ಚೀಯೋನ್‍ಗಿರಿಯನ್ನು ಮರೆಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಬಹುಕಾಲದ ಹಿಂದೆ ನೀನು ಕೊಂಡುಕೊಂಡ ನಿನ್ನ ಜನರನ್ನು ಜ್ಞಾಪಿಸಿಕೊ. ನೀನು ನಮ್ಮನ್ನು ರಕ್ಷಿಸಿದೆ. ನಾವು ನಿನ್ನವರೇ. ನೀನು ವಾಸಿಸಿದ ಚೀಯೋನ್ ಪರ್ವತವನ್ನು ಜ್ಞಾಪಿಸಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 74:2
27 ತಿಳಿವುಗಳ ಹೋಲಿಕೆ  

ಯಾಕೋಬ್ಯರ ಪಾಲಾಗಿರುವವರು ಇವುಗಳ ಹಾಗಲ್ಲ. ಏಕೆಂದರೆ ಅವರು ಎಲ್ಲವನ್ನು ರೂಪಿಸಿದವರೇ, ಇಸ್ರಾಯೇಲ್ ಅವರ ಸ್ವಾಸ್ತ್ಯವಾದ ವಂಶ. ಅವರ ಹೆಸರು ಸೇನಾಧೀಶ್ವರ ಯೆಹೋವ ದೇವರೇ.


ಏಕೆಂದರೆ ಯೆಹೋವ ದೇವರ ಪಾಲು ಅವರ ಜನರೇ ಆಗಿರುತ್ತಾರೆ. ಯಾಕೋಬ್ಯರೇ ದೇವರ ಸೊತ್ತಿನ ಪಾಲು.


ಭಯವೂ ಹೆದರಿಕೆಯೂ ಅವರಿಗಾಗುವುದು; ನಿಮ್ಮ ಜನರು ದಾಟಿ ಹೋಗುವವರೆಗೆ ಯೆಹೋವ ದೇವರೇ, ನೀವು ಕೊಂಡುಕೊಂಡ ಜನರು ದಾಟಿಹೋಗುವವರೆಗೆ ನಿಮ್ಮ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗಿರುವರು.


ನೀವು ವಿಮೋಚಿಸಿದ ಜನರನ್ನು ನೀವು ನಿಮ್ಮ ಪ್ರೀತಿಯಿಂದ ನಡೆಸಿದ್ದೀರಿ. ನೀವು ಅವರನ್ನು ನಿಮ್ಮ ಬಲದಿಂದ ನಿಮ್ಮ ಪರಿಶುದ್ಧ ನಿವಾಸಕ್ಕೆ ನಡೆಸಿದ್ದೀರಿ.


ಯೆಹೋವ ದೇವರು ಯಾಕೋಬನನ್ನು ತಮಗೋಸ್ಕರ ಆಯ್ದುಕೊಂಡರು, ಇಸ್ರಾಯೇಲನ್ನು ತಮ್ಮ ಶ್ರೇಷ್ಠ ಸಂಪತ್ತಾಗಿಯೂ ಆಯ್ದುಕೊಂಡಿದ್ದಾರೆ.


ನಿಮ್ಮನ್ನಾದರೋ ಯೆಹೋವ ದೇವರು ತಮಗೆ ಸ್ವಕೀಯ ಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ, ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಈಜಿಪ್ಟ್ ದೇಶದಿಂದ ಹೊರತಂದರು.


ಅವರು ಹೊಸಹಾಡನ್ನು ಹಾಡುತ್ತಾ, “ನೀವು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ನೀವು ವಧಿತರಾಗಿ, ನಿಮ್ಮ ರಕ್ತದಿಂದ ಸಕಲ ಕುಲ, ಭಾಷೆ, ಪ್ರಜೆ, ರಾಷ್ಟ್ರಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿರುವಿರಿ.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ದೇವರು ತಮ್ಮ ರಕ್ತದಿಂದ ಕೊಂಡುಕೊಂಡ ಸಭೆಗೆ ನೀವು ಕುರುಬರಾಗಿರುವುದಕ್ಕಾಗಿ ಪವಿತ್ರಾತ್ಮರು ನಿಮ್ಮನ್ನೇ ಮಂದೆಯಲ್ಲಿ ಮೇಲ್ವಿಚಾರಕರನ್ನಾಗಿ ಇಟ್ಟಿರುವುದರಿಂದ, ನಿಮ್ಮ ವಿಷಯದಲ್ಲಿಯೂ ಇಡೀ ಮಂದೆಯ ವಿಷಯದಲ್ಲಿಯೂ ಎಚ್ಚರವಾಗಿರಿ.


ಯಾಕೋಬ್ಯರ ಪಾಲಾಗಿರುವವರು ಇವುಗಳ ಹಾಗಲ್ಲ; ಏಕೆಂದರೆ ಅವರು ಎಲ್ಲವನ್ನು ರೂಪಿಸಿದವರೇ, ಇಸ್ರಾಯೇಲ್ ಅವರ ಸ್ವಾಸ್ತ್ಯವಾದ ವಂಶ. ಅವರ ಹೆಸರು ಸೇನಾಧೀಶ್ವರ ಯೆಹೋವ ದೇವರೇ.


ಯೆಹೋವ ದೇವರೇ, ಏಕೆ ನಮ್ಮನ್ನು ನಿಮ್ಮ ಮಾರ್ಗಗಳಿಂದ ತಪ್ಪಿಹೋಗುವಂತೆ ಅನುಮತಿಸಿದ್ದೀರಿ? ಏಕೆ ನಮ್ಮ ಹೃದಯವನ್ನು ನಿಮಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀರಿ? ನಿಮ್ಮ ಸೇವಕರಿಗೋಸ್ಕರವೂ, ನಿಮ್ಮ ಬಾಧ್ಯರಾಗಿರುವ ಗೋತ್ರಗಳ ನಿಮಿತ್ತ ನೀವು ಹಿಂದಿರುಗಿರಿ.


ಅವರಿಗೆ ಬಂದ ಎಲ್ಲಾ ಇಕ್ಕಟ್ಟಿನಲ್ಲಿ ಆತನಿಗೆ ಇಕ್ಕಟ್ಟಾಯಿತು. ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು. ತನ್ನ ಪ್ರೀತಿಯಲ್ಲಿಯೂ, ತನ್ನ ಕನಿಕರದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು. ಪೂರ್ವಕಾಲದ ದಿವಸಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.


ಆಗ ಅವರು, ಪರಿಶುದ್ಧ ಜನರೂ, ಯೆಹೋವ ದೇವರು ವಿಮೋಚಿಸಿದವರೂ ಎಂದು ಎನಿಸಿಕೊಳ್ಳುವರು ನಿನಗೆ ಹುಡುಕಿದ ಹಾಗೂ ಕೈ ಬಿಡದ ಪಟ್ಟಣ, ಎಂದು ಹೆಸರು ಬರುವುದು.


ಆದಕಾರಣ ಯೆಹೋವ ದೇವರು ವಿಮೋಚಿಸಿದವರು, ಹಿಂದಿರುಗಿಕೊಂಡು ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು, ಉತ್ಸಾಹ ಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು. ದುಃಖವೂ, ನಿಟ್ಟುಸಿರೂ ಓಡಿಹೋಗುವುವು.


ಆಗ ಯೆಹೋವ ದೇವರು ತಮ್ಮ ಜನರ ಮೇಲೆ ಬಹು ಬೇಸರಗೊಂಡರು. ದೇವರು ತಮ್ಮ ವಾರಸುದಾರರಾದ ಇಸ್ರಾಯೇಲರ ಮೇಲೆ ಅಸಂತೋಷಗೊಂಡು,


ಯಾಕೋಬನ ಮತ್ತು ಯೋಸೇಫನ ಸಂತತಿಯವರಾದ ನಿಮ್ಮ ಜನರನ್ನು ನಿಮ್ಮ ಬಲವಾದ ತೋಳಿನಿಂದ ವಿಮೋಚಿಸಿದ್ದೀರಿ.


ಉನ್ನತ ಬೆಟ್ಟಗಳೇ, ಏಕೆ ಕುಣಿಯುತ್ತೀರಿ? ದೇವರು ನಿವಾಸಕ್ಕಾಗಿ ಅಪೇಕ್ಷಿಸುವ ಬೆಟ್ಟವು ಇದೇ ಹೌದು, ಯೆಹೋವ ದೇವರು ಅದರಲ್ಲಿ ಸದಾಕಾಲವೂ ವಾಸಿಸುವರು.


ಯೆಹೋವ ದೇವರು ಯಾರ ದೇವರಾಗಿದ್ದಾರೋ, ಅಂಥ ಭಾಗ್ಯವಂತರು. ದೇವರು ತಮಗಾಗಿ ಆಯ್ದುಕೊಂಡ ಜನರೂ ಭಾಗ್ಯವಂತರು.


ಚೀಯೋನಿನಲ್ಲಿ ವಾಸಿಸುವ ಯೆಹೋವ ದೇವರಿಗೆ ಸ್ತುತಿಹಾಡಿರಿ; ಅವರ ಕ್ರಿಯೆಗಳನ್ನು ರಾಷ್ಟ್ರಗಳಲ್ಲಿ ಸಾರಿ ಹೇಳಿರಿ.


ಆದರೂ ನೀವು ನಿಮ್ಮ ದೊಡ್ಡ ಶಕ್ತಿಯಿಂದಲೂ, ನಿಮ್ಮ ಚಾಚಿದ ಕೈಯಿಂದಲೂ ಹೊರಗೆ ಬರಮಾಡಿದ ನಿಮ್ಮ ಜನವೂ ನಿಮ್ಮ ಸೊತ್ತೂ ಇವರೇ,” ಎಂದು ಹೇಳಿದೆನು.


ನಾನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿ, “ಸಾರ್ವಭೌಮ ಯೆಹೋವ ದೇವರೇ, ನೀವು ನಿಮ್ಮ ಮಹಿಮೆಯಿಂದ ವಿಮೋಚಿಸಿ, ಬಲವಾದ ಕೈಯಿಂದ ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದ ನಿಮ್ಮ ಜನರನ್ನು ನಾಶಮಾಡಬೇಡಿ.


ಅವರು ಪ್ರಾಣಹತ್ಯೆ ಮಾಡುವವರನ್ನು ಮುಯ್ಯಿತೀರಿಸಲು ಜ್ಞಾಪಕಮಾಡಿಕೊಳ್ಳುವರು; ಬಾಧೆಗೆ ಒಳಗಾಗಿರುವ ದೀನರ ಕೂಗನ್ನು ಅವರು ಅಲಕ್ಷ್ಯಮಾಡುವುದಿಲ್ಲ.


ಯೆಹೋವ ದೇವರು ತಮ್ಮ ಜನರನ್ನು ತಿರಸ್ಕರಿಸುವುದಿಲ್ಲ. ದೇವರು ತಮ್ಮ ಬಾಧ್ಯತೆಯಾಗಿರುವವರನ್ನು ಎಂದೂ ಮರೆಯುವುದಿಲ್ಲ.


ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ. ಅವರು ಹಗಲಿರುಳು ಮೌನವಾಗಿರುವುದೇ ಇಲ್ಲ. ಯೆಹೋವ ದೇವರಿಗೆ ಜ್ಞಾಪಕಪಡಿಸುವವರೇ, ನೀವೂ ಸುಮ್ಮನಿರಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು