ಕೀರ್ತನೆಗಳು 74:21 - ಕನ್ನಡ ಸಮಕಾಲಿಕ ಅನುವಾದ21 ಕುಗ್ಗಿದವನು ಅವಮಾನದಿಂದ ಹಿಂದಿರುಗದಿರಲಿ. ದೀನನೂ, ಬಡವನೂ ನಿಮ್ಮ ಹೆಸರನ್ನು ಸ್ತುತಿಸಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಕುಗ್ಗಿದವರು ಆಶಾಭಂಗದಿಂದ ಹಿಂದಿರುಗದಿರಲಿ; ದುಃಖಿತರೂ, ಬಡವರೂ ನಿನ್ನ ನಾಮವನ್ನು ಕೀರ್ತಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಕುಗ್ಗಿದವರು ಹಿಂದಿರುಗದಿರಲಿ ಅವಮಾನದಿಂದ I ಬಡವರು ಕೀರ್ತಿಸಲಿ ನಿನ್ನ ನಾಮವನು ಭಕ್ತಿಯಿಂದ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಕುಗ್ಗಿದವರು ಆಶಾಭಂಗದಿಂದ ಹಿಂದಿರುಗದಿರಲಿ; ದುಃಖಿತರೂ ಬಡವರೂ ನಿನ್ನ ನಾಮವನ್ನು ಕೀರ್ತಿಸಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ದೇವರೇ, ನಿನ್ನ ಜನರಿಗೆ ಅವಮಾನವಾಗಿದೆ. ಅವರಿಗೆ ಕೇಡಾಗಲು ಬಿಡಬೇಡ. ನಿನ್ನ ಬಡಜನರೂ ನಿಸ್ಸಹಾಯಕರೂ ನಿನ್ನನ್ನು ಕೊಂಡಾಡಲಿ. ಅಧ್ಯಾಯವನ್ನು ನೋಡಿ |
ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, “ ‘ “ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, ಏಕೆಂದರೆ ಯೆಹೋವ ದೇವರು ಒಳ್ಳೆಯವರು. ಆತನ ಪ್ರೀತಿ ಶಾಶ್ವತವಾಗಿರುತ್ತದೆ.” ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.