Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 74:9 - ಕನ್ನಡ ಸಮಕಾಲಿಕ ಅನುವಾದ

9 ದೇವರಿಂದ ನಮಗೆ ಅದ್ಭುತವಾದ ಸಂಕೇತಗಳು ಕೊಟ್ಟಿರುವುದಿಲ್ಲ. ಪ್ರವಾದಿಗಳು ನಮಗೆ ಉಳಿದಿರುವುದಿಲ್ಲ. ಇದು ಎಷ್ಟು ಕಾಲ ಎಂದು ನಾವ್ಯಾರೂ ತಿಳಿದಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಮ್ಮ ಆರಾಧನಾ ಚಿಹ್ನೆಗಳು ಈಗ ಕಾಣುವುದಿಲ್ಲ. ಮುಂಚೆ ಇದ್ದಂತೆ ನಮಗೆ ಪ್ರವಾದಿಗಳು ಯಾರೂ ಇಲ್ಲ; ಇದು ಎಷ್ಟರವರೆಗೆ ಇರುವುದೆಂದು ಬಲ್ಲವರು ನಮ್ಮಲ್ಲಿ ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆರಾಧನಾ ಚಿಹ್ನೆಗಳಿಲ್ಲ, ಪ್ರವಾದಿಗಳು ನಮಗಿಲ್ಲ I ಈ ಪರಿಸ್ಥಿತಿ ಎಲ್ಲಿಯತನಕ? ಬಲ್ಲವರಾರೂ ಇಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಮ್ಮ ಆರಾಧನಾಚಿಹ್ನೆಗಳು ಈಗ ಕಾಣುವದಿಲ್ಲ. ಮುಂಚೆ ಇದ್ದಂತೆ ನಮಗೆ ಪ್ರವಾದಿಗಳು ಯಾರೂ ಇಲ್ಲ; ಇದು ಎಷ್ಟರವರೆಗೆ ಇರುವದೆಂದು ಬಲ್ಲವರು ನಮ್ಮಲ್ಲಿ ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಮ್ಮ ಯಾವ ಚಿಹ್ನೆಗಳೂ ನಮಗೆ ಕಾಣಲಿಲ್ಲ. ಪ್ರವಾದಿಗಳಲ್ಲಿ ಯಾರೂ ಉಳಿದಿಲ್ಲ. ಯಾರಿಗೂ ದಿಕ್ಕೇ ತೋಚುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 74:9
11 ತಿಳಿವುಗಳ ಹೋಲಿಕೆ  

ದಿನಗಳು ಬರುವುವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ. ಯೆಹೋವ ದೇವರ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮವನ್ನೇ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾನೆ.


ಕೇಡಿನ ಮೇಲೆ ಕೇಡು ಬರುವುದು, ಸುದ್ದಿಯ ಮೇಲೆ ಸುದ್ದಿ ಬರುವುದು, ಅವರು ಪ್ರವಾದಿಯಿಂದ ದರ್ಶನವನ್ನು ಹುಡುಕುವರು. ಆದರೆ ಯಾಜಕರಿಂದ ನಿಯಮ ಬೋಧನೆಯು ಅಡಗಿಹೋಗುವುದು, ಹಿರಿಯರಿಂದ ಸಮಾಲೋಚನೆಯು ಇಲ್ಲವಾಗುವುದು.


ಬಾಲಕನಾದ ಸಮುಯೇಲನು ಏಲಿಯ ಕೈಕೆಳಗಿದ್ದುಕೊಂಡು ಯೆಹೋವ ದೇವರಿಗೆ ಸೇವೆ ಮಾಡಿಕೊಂಡಿದ್ದನು. ಆ ದಿನಗಳಲ್ಲಿ ಯೆಹೋವ ದೇವರ ವಾಕ್ಯವು ವಿರಳವಾಗಿತ್ತು. ಅಲ್ಲಿ ದೇವದರ್ಶನಗಳು ಅಪರೂಪವಾಗಿದ್ದವು.


ದರ್ಶನವಿಲ್ಲದೆ, ನಿಮಗೆ ರಾತ್ರಿಯಾಗುವುದು; ಶಕುನವಿಲ್ಲದೆ ನಿಮಗೆ ಕತ್ತಲಾಗುವುದು. ಪ್ರವಾದಿಗಳಿಗೆ ಸೂರ್ಯ ಮುಳುಗುವುದು. ಅವರ ಮೇಲೆ ಹಗಲು ಕತ್ತಲೆಯಾಗುವುದು.


ಅವಳ ಬಾಗಿಲುಗಳು ನೆಲದೊಳಗೆ ಹೂತುಕೊಂಡಿವೆ. ಆತನು ಆಕೆಯ ಅಗುಳಿಗಳನ್ನು ಮುರಿದು ಹಾಳು ಮಾಡಿದ್ದಾನೆ. ಅವಳ ಅರಸನು ಮತ್ತು ಅವಳ ಪ್ರಭುಗಳು ಇತರ ಜನಾಂಗಗಳ ಮಧ್ಯೆ ಇರುವರು. ಇನ್ನು ದೈವನಿಯಮವು ನಿಂತುಹೋಗಿವೆ. ಆಕೆಯ ಪ್ರವಾದಿಗಳು ಸಹ ಯೆಹೋವ ದೇವರಿಂದ ದರ್ಶನವನ್ನು ಕಂಡುಕೊಳ್ಳುವುದಿಲ್ಲ.


ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವುದು. ಆ ರಕ್ತವನ್ನು ನಾನು ನೋಡುವಾಗ, ನಿಮ್ಮನ್ನು ದಾಟಿಹೋಗುವೆನು. ಈಜಿಪ್ಟ್ ದೇಶವನ್ನು ನಾನು ಸಂಹರಿಸುವ ಸಮಯದಲ್ಲಿ, ನಿಮ್ಮನ್ನು ನಾಶಮಾಡುವ ಯಾವ ಉಪದ್ರವವು ನಿಮ್ಮ ಮೇಲೆ ಬರುವುದಿಲ್ಲ.


ದೇವರು ಸಹ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ತಮ್ಮ ಚಿತ್ತಾನುಸಾರವಾಗಿ ದಯಪಾಲಿಸಿದ ಪವಿತ್ರಾತ್ಮರ ವರದಾನಗಳಿಂದಲೂ ಸಾಕ್ಷಿನೀಡಿ ದೃಢಪಡಿಸಿದ್ದಾರೆ.


ಇದಲ್ಲದೆ ಅವರನ್ನು ಪರಿಶುದ್ಧ ಮಾಡುವ ಯೆಹೋವ ದೇವರು ನಾನೇ ಎಂದು ಅವರು ತಿಳಿಯುವ ಹಾಗೆ ನನಗೂ, ಅವರಿಗೂ ಗುರುತಾಗಿರುವುದಕ್ಕೆ ನನ್ನ ಸಬ್ಬತ್ ದಿನಗಳನ್ನು ನಾನು ಅವರಿಗೆ ಕೊಟ್ಟೆನು.


ಅದಕ್ಕವನು, “ಈಗ ನಿಮ್ಮ ಸಮ್ಮುಖದಲ್ಲಿ ನನಗೆ ದಯೆ ದೊರಕಿದ್ದರೆ, ನನ್ನ ಸಂಗಡ ಮಾತನಾಡುವವರು ನೀವು ಎಂಬುದಕ್ಕೆ ನನಗೆ ಒಂದು ಗುರುತನ್ನು ತೋರಿಸಬೇಕು.


ಆಗ ದರ್ಶಿಗಳು ನಾಚಿಕೆಪಡುವರು, ಶಕುನಗಾರರು ಅವಮಾನಗೊಳ್ಳುವರು. ದೇವರಿಂದ ಉತ್ತರವಿಲ್ಲದ ಕಾರಣ, ಎಲ್ಲರೂ ತಮ್ಮ ತುಟಿಗಳನ್ನು ಮುಚ್ಚಿಕೊಳ್ಳುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು