Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 75:5 - ಕನ್ನಡ ಸಮಕಾಲಿಕ ಅನುವಾದ

5 ನಿಮ್ಮ ಕೊಂಬನ್ನು ಪರಲೋಕದ ಕಡೆಗೆ ಎತ್ತಬೇಡಿರಿ. ಹಟಮಾರಿತನದಿಂದ ಮಾತನಾಡಬೇಡಿರಿ,” ಎಂದು ನೀವು ಹೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕೊಂಬುಗಳನ್ನು ಮೇಲೆತ್ತಬೇಡಿರಿ; ಸೊಕ್ಕಿನಿಂದ ಮಾತನಾಡಬೇಡಿರಿ” ಎಂದು ಹೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕಾಣಿಸಿಕೊಳ್ಳದಿರಲಿ ನಿಮ್ಮ ಕೋರೆಕೊಂಬುಗಳು I ಮಾತೆತ್ತದಿರಲಿ ನಿಮ್ಮಗಳ ಕೊಬ್ಬಿದಾ ಕಂಠಗಳು” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕೊಂಬುಗಳನ್ನು ಮೇಲೆತ್ತಬೇಡಿರಿ; ಸೊಕ್ಕಿನ ಕುತ್ತಿಗೆಯಿಂದ ಮಾತಾಡಬೇಡಿರಿ ಎಂದು ಹೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 75:5
7 ತಿಳಿವುಗಳ ಹೋಲಿಕೆ  

“ಹಟಮಾರಿಗಳೇ! ಹೃದಯದಲ್ಲಿಯೂ ಕಿವಿಯಲ್ಲಿಯೂ ಸುನ್ನತಿ ಹೊಂದದವರೇ, ನೀವು ಸಹ ನಿಮ್ಮ ಪಿತೃಗಳಂತೆಯೇ ಯಾವಾಗಲೂ ಪವಿತ್ರಾತ್ಮ ದೇವರನ್ನು ಎದುರಿಸುತ್ತೀರಿ!


ಅವರು ಕಠಿಣ ಹೃದಯದವರು ಮತ್ತು ಹಠಮಾರಿ ಆಗಿದ್ದಾರೆ. ನಾನು ನಿನ್ನನ್ನು ಅವರ ಬಳಿಗೆ ಕಳುಹಿಸುತ್ತೇನೆ. ನೀನು ಅವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ,’ ಎಂದು ಹೇಳಬೇಕು.


ಏಕೆಂದರೆ ನೀನು ಹಟಗಾರ. ನಿನ್ನ ಕತ್ತಿನ ನರಗಳು ಕಬ್ಬಿಣ, ನಿನ್ನ ಹಣೆ ಕಂಚಿನದು ಎಂದು ನಾನು ತಿಳಿದುಕೊಂಡಿದ್ದೇನೆ.


ಆದ್ದರಿಂದ ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಕಠಿಣಪಡಿಸಿಕೊಳ್ಳಬೇಡಿರಿ. ಯೆಹೋವ ದೇವರಿಗೆ ಅಧೀನರಾಗಿ ಅವರು ಯುಗಯುಗಕ್ಕೂ ಪ್ರತಿಷ್ಠೆ ಮಾಡಿದ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಯೆಹೋವ ದೇವರನ್ನು ಸೇವಿಸಿರಿ. ಆಗ ದೇವರು ತಮ್ಮ ಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವರು.


ಏಕೆಂದರೆ ನಿಮ್ಮ ದ್ರೋಹವನ್ನೂ, ನಿಮ್ಮ ಹಟಮಾರಿತನವನ್ನೂ ನಾನು ಬಲ್ಲೆನು. ಈ ಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರುವಾಗಲೇ ಯೆಹೋವ ದೇವರಿಗೆ ದ್ರೋಹ ಮಾಡಿದವರಾದಿರಿ. ನಾನು ಸತ್ತಮೇಲೆ ಇನ್ನೇನಾಗುವುದು?


ಇದಲ್ಲದೆ ಯೆಹೋವ ದೇವರು ಮೋಶೆಗೆ, “ನಾನು ಈ ಜನರನ್ನು ನೋಡಿದ್ದೇನೆ. ಇವರು ಹಟಮಾರಿ ಜನರೇ,


ದೇವರು ತಮ್ಮ ಶಕ್ತಿಯಿಂದ ಎಂದೆಂದಿಗೂ ಆಳುವವರಾಗಿದ್ದಾರೆ. ದೇವರ ಕಣ್ಣುಗಳು ಜನಾಂಗಗಳನ್ನು ದೃಷ್ಟಿಸುತ್ತವೆ; ದೇವರಿಗೆ ವಿರೋಧವಾಗಿ ದಂಗೆಕೋರರು ಏಳದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು