ಕೀರ್ತನೆಗಳು 75:8 - ಕನ್ನಡ ಸಮಕಾಲಿಕ ಅನುವಾದ8 ಯೆಹೋವ ದೇವರ ಕೈಯಲ್ಲಿ ಒಂದು ಪಾತ್ರೆಯು ಇದೆ. ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿ ಇದೆ. ಅದನ್ನು ಅವರು ಹೊಯ್ಯುತ್ತಾರೆ. ಅದರ ಮಡ್ಡಿಯನ್ನು ಸಹ ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೋವನ ಕೈಯಲ್ಲಿ ಪಾತ್ರೆ ಇದೆ; ಅದು ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿದೆ. ಅದರಿಂದ ಹೊಯ್ದು ಹಂಚುತ್ತಾನೆ. ಲೋಕದ ದುಷ್ಟರೆಲ್ಲರೂ ಅದರೊಳಗಿನ ಮಡ್ಡಿಯನ್ನು ಸಹ ಕುಡಿದು ಮುಗಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಪ್ರಭುವಿನ ಕರಗಳಲ್ಲಿದೆ ಕೋಪಕೊಡ ಒಂದು I ತುಂಬಿದೆ ಅಮಲುಮಿಶ್ರ ರೌದ್ರರಸದಿಂದದು II ಅದನವನು ಸುರಿಯಲು ಕುಡಿವರು ಜಗದ ದುರುಳರು I ಮಡ್ಡಿಯನು ಕೂಡ ಬಿಡದೆ ಕುಡಿವರೆಲ್ಲರು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯೆಹೋವನ ಕೈಯಲ್ಲಿ ಪಾತ್ರೆಯದೆ; ಅದು ಔಷಧಿವಿುಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿದೆ. ಅದರಿಂದ ಹೊಯ್ದು ಹಂಚುತ್ತಾನೆ. ಲೋಕದ ದುಷ್ಟರೆಲ್ಲರೂ ಅದರೊಳಗಿನ ಮಡ್ಡಿಯನ್ನು ಸಹ ಕುಡಿದು ಮುಗಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೆಹೋವನ ಕೈಯಲ್ಲಿ ಪಾತ್ರೆಯಿದೆ. ಆ ಪಾತ್ರೆಯು ವಿಷ ದ್ರಾಕ್ಷಾರಸದಿಂದ ತುಂಬಿದೆ. ಆತನು ದಂಡನೆಯೆಂಬ ಆ ವಿಷ ದ್ರಾಕ್ಷಾರಸವನ್ನು ಸುರಿಯುವನು; ದುಷ್ಟರು ಕೊನೆಯ ತೊಟ್ಟಿನವರೆಗೂ ಅದನ್ನು ಕುಡಿಯುವರು! ಅಧ್ಯಾಯವನ್ನು ನೋಡಿ |