Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 76:10 - ಕನ್ನಡ ಸಮಕಾಲಿಕ ಅನುವಾದ

10 ಮನುಷ್ಯರ ವಿರುದ್ಧ ನಿಮ್ಮ ಕೋಪವು ನಿಮಗೆ ಘನವನ್ನು ತರುವುದು. ಉಳಿದಿರುವವರು ಕೋಪಕ್ಕೆ ತುತ್ತಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನರರ ಕೋಪ, ದೇವಾ ನಿನ್ನ ಘನತೆಗೆ ಸಾಧಕ I ಅಳಿದುಳಿದಾ ಕೋಪ ನಿನ್ನ ನಡುಕಟ್ಟಿಗೆ ಲಾಯಕ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮನುಷ್ಯರ ಕೋಪವೂ ನಿನ್ನ ಘನಕ್ಕೇ ಸಾಧಕವಾಗುವದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದೇವರೇ, ನೀನು ದುಷ್ಟರನ್ನು ದಂಡಿಸುವಾಗ ಜನರು ನಿನ್ನನ್ನು ಕೊಂಡಾಡುವರು; ನಿನ್ನ ಕೋಪವನ್ನು ತೋರಿಸುವಾಗ ಅಳಿದುಳಿದವರು ಬಲಿಷ್ಠರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 76:10
20 ತಿಳಿವುಗಳ ಹೋಲಿಕೆ  

ಏಕೆಂದರೆ, “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಭೂಮಿಯ ಮೇಲೆಲ್ಲಾ ಪ್ರಸಿದ್ಧಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತಸ್ಥಾನಕ್ಕೆ ಏರಿಸಿದೆನು,” ಎಂದು ಪವಿತ್ರ ವೇದದಲ್ಲಿ ದೇವರು ಫರೋಹನಿಗೆ ಹೇಳುತ್ತಾರೆ.


“ಆ ದಿನಗಳನ್ನು ಕಡಿಮೆ ಮಾಡದಿದ್ದರೆ, ಒಬ್ಬನೂ ಉಳಿಯುವಂತಿಲ್ಲ. ಆದರೆ ಆಯ್ಕೆಯಾದವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಲಾಗುವುದು.


ರಾಷ್ಟ್ರಗಳು ಕೋಪಗೊಂಡವು, ನಿಮ್ಮ ರೋಷವು ಈಗ ಬಂದಿದೆ. ಸತ್ತವರು ತೀರ್ಪು ಹೊಂದುವ ಸಮಯ ಬಂದಿದೆ. ನೀವು ನಿಮ್ಮ ಸೇವಕರಾದ ಪ್ರವಾದಿಗಳಿಗೂ ದೇವಜನರಿಗೂ ನಿಮ್ಮ ನಾಮಕ್ಕೆ ಭಯಪಡುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲವನ್ನು ಕೊಟ್ಟು, ಲೋಕ ನಾಶಕರನ್ನು ದಂಡಿಸುವಿರಿ.”


ಸಮುದ್ರಗಳ ಘೋಷವನ್ನೂ, ಅವುಗಳ ತೆರೆಗಳ ಘೋಷವನ್ನೂ, ಪ್ರಜೆಗಳ ಕೋಲಾಹಲವನ್ನೂ ಶಮನಗೊಳಿಸುವವರು ನೀವೇ.


ರಾಷ್ಟ್ರಗಳು ಕೋಲಾಹಲದಲ್ಲಿವೆ ರಾಜ್ಯಗಳು ಬೀಳುತ್ತವೆ. ದೇವರು ತಮ್ಮ ಧ್ವನಿಯನ್ನೆತ್ತಲು ಭೂಮಿಯು ಕರಗುತ್ತದೆ.


ಎಲ್ಲಾ ದೇವರುಗಳಿಗಿಂತ ಯೆಹೋವ ದೇವರೇ ದೊಡ್ಡವರೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಏಕೆಂದರೆ ಈಜಿಪ್ಟಿನವರು ಗರ್ವಪಟ್ಟಿದ್ದರಿಂದ ಯೆಹೋವ ದೇವರು ಅವರನ್ನು ತಗ್ಗಿಸಿದರು,” ಎಂದನು.


ನೀವು ನನಗೆ ವಿರೋಧವಾಗಿ ಕೇಡನ್ನು ಕಲ್ಪಿಸಿದ್ದೀರಿ, ಆದರೆ ದೇವರು ಒಳ್ಳೆಯದಕ್ಕಾಗಿಯೇ ಸಂಕಲ್ಪಿಸಿದರು. ಈಗ ಬಹುಜನರ ಪ್ರಾಣ ಉಳಿಯುವಂತೆ ನಡೆಯುತ್ತಿದೆ.


ಅವು ದಾಟದ ಹಾಗೆಯೂ, ಭೂಮಿಯನ್ನು ಮುಚ್ಚುವುದಕ್ಕೆ ತಿರುಗಿ ಬಾರದ ಹಾಗೆಯೂ ನೀವು ಮೇರೆಯನ್ನು ಇಟ್ಟಿದ್ದೀರಿ.


ಯೆಹೋವ ದೇವರ ವಾಕ್ಯಗಳು ದೋಷವಿಲ್ಲದ್ದು. ಅವು ಮಣ್ಣಿನ ಕುಲುಮೆಯಲ್ಲಿ ಶುದ್ಧೀಕರಿಸಿದ ಬೆಳ್ಳಿಯಂತೆಯೂ ಏಳು ಸಾರಿ ಪುಟಕ್ಕೆ ಹಾಕಿದ ಬಂಗಾರದಂತೆಯೂ ಇವೆ.


ದೇವರೇ, ಬನ್ನಿರಿ ಭೂಮಿಗೆ ನ್ಯಾಯತೀರಿಸಿರಿ. ಏಕೆಂದರೆ ಜನಾಂಗಗಳೆಲ್ಲಾ ನಿಮಗೇ ಸೇರಿರುತ್ತವೆ.


ಆದರೆ ಭೂಮಿಯ ಬಡವರಿಗೆ ನೀತಿಯಿಂದ ನ್ಯಾಯತೀರಿಸುವರು. ಭೂಲೋಕದ ದೀನರಿಗೆ ನ್ಯಾಯವಾಗಿ ತೀರ್ಪುಮಾಡುವರು, ಭೂಮಿಯನ್ನು ತಮ್ಮ ಬಾಯಿಯ ಕೋಲಿನಿಂದ ಹೊಡೆಯುವರು. ತಮ್ಮ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವರು.


ಪಿಲಾತನು, “ನಾನು ಬರೆದದ್ದು ಬರೆದಾಯಿತು,” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು