Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 76:6 - ಕನ್ನಡ ಸಮಕಾಲಿಕ ಅನುವಾದ

6 ಯಾಕೋಬನ ದೇವರೇ, ನಿಮ್ಮ ಗದರಿಕೆಯಿಂದ ರಥವೂ ಕುದುರೆಯೂ ಚಲನೆಯಿಲ್ಲದೆ ಬಿದ್ದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯಾಕೋಬ ವಂಶದವರ ದೇವರೇ, ನಿನ್ನ ಗದರಿಕೆಯಿಂದ ರಥಬಲವೂ, ಅಶ್ವಬಲವೂ ಮೈಮರೆತು ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿನ್ನ ಒಂದು ಗದರಿಕೆಗೆ, ಯಕೋಬನ ದೇವನೆ I ರಥಾಶ್ವಬಲಗಳೆಲ್ಲಾ ಬಿದ್ದಿವೆ ಬಿಮ್ಮನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯಾಕೋಬವಂಶದವರ ದೇವರೇ, ನಿನ್ನ ಗದರಿಕೆಯಿಂದ ರಥಬಲವೂ ಅಶ್ವಬಲವೂ ಮೈಮರೆತು ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯಾಕೋಬನ ದೇವರು ಆ ಸೈನಿಕರನ್ನು ಗದರಿಸಲು ರಥಾಶ್ವಗಳ ಸೇನೆಯು ಮೂರ್ಛೆಗೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 76:6
20 ತಿಳಿವುಗಳ ಹೋಲಿಕೆ  

ಆಗ ಮೋಶೆ ಮತ್ತು ಇಸ್ರಾಯೇಲರು ಯೆಹೋವ ದೇವರಿಗೆ ಈ ಹಾಡನ್ನು ಹಾಡಿದರು: “ನಾನು ಯೆಹೋವ ದೇವರಿಗೆ ಹಾಡುತ್ತೇನೆ. ಏಕೆಂದರೆ ಅವರು ಪ್ರಭಾವದಿಂದ ಜಯಶಾಲಿಯಾದರು. ಕುದುರೆಗಳನ್ನೂ ರಾಹುತರನ್ನೂ ಸಮುದ್ರದಲ್ಲಿ ದಬ್ಬಿದ್ದಾರೆ.


ಮಿರ್ಯಾಮಳು ಅವರಿಗೆ ಹೀಗೆ ಹಾಡಿದಳು: “ಯೆಹೋವ ದೇವರಿಗೆ ನೀವು ಹಾಡಿರಿ, ಅವರು ಮಹೋನ್ನತದಲ್ಲಿದ್ದಾರೆ; ಕುದುರೆಯನ್ನೂ ಸವಾರರನ್ನೂ ಸಮುದ್ರದಲ್ಲಿ ಮುಣುಗಿಸಿಬಿಟ್ಟರು.”


ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ ರಾಹುತ ಶೂರ ಸಕಲ ವಿಧವಾದ ಸೈನಿಕ ಇವರನ್ನು ಬೇಕಾದಷ್ಟು ಭಕ್ಷಿಸುವಿರಿ,’ ಇದು ಸಾರ್ವಭೌಮ ಯೆಹೋವ ದೇವರ ನುಡಿ.


ನಿಮ್ಮ ದ್ರಾಕ್ಷಿಬಳ್ಳಿ ಕಡಿದು ಬೆಂಕಿಯಿಂದ ಸುಡಲಾಗಿದೆ. ನೀವು ಖಂಡಿಸಲು ನಿಮ್ಮ ಜನರು ಬಾಧಿತರಾಗಿ ಹೋಗುವರು.


ಆ ದಿನದಲ್ಲಿ, ನಾನು ಅವರ ಕುದುರೆಗಳಿಗೆಲ್ಲಾ ತಬ್ಬಿಬ್ಬನ್ನು ಉಂಟುಮಾಡುವೆನು, ಅದರ ರಾಹುತರನ್ನು ಭ್ರಮೆಗೊಳಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. ಯೆಹೂದ ವಂಶವನ್ನು ಕಟಾಕ್ಷಿಸಿ ಜನಾಂಗಗಳ ಕುದುರೆಗಳನ್ನೆಲ್ಲಾ ಕುರುಡು ಮಾಡುವೆನು.


ಅಸ್ಸೀರಿಯದ ಅರಸನೇ, ನಿನ್ನ ಕುರುಬರು ತೂಕಡಿಸುತ್ತಾರೆ. ನಿನ್ನ ಪ್ರಧಾನರು ವಿಶ್ರಾಂತಿಗೈಯುತ್ತಿದ್ದಾರೆ. ಕೂಡಿಸುವವರು ಯಾರೂ ಇಲ್ಲದಂತೆ ನಿನ್ನ ಜನರೆಲ್ಲರೂ ಬೆಟ್ಟಗಳಲ್ಲಿ ಚದರಿಹೋಗಿದ್ದಾರೆ.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ರಥಗಳನ್ನು ಹೊಗೆಯಾಗಲು ಸುಡುತ್ತೇನೆ. ಖಡ್ಗವು ನಿನ್ನ ಎಳೆಯ ಸಿಂಹಗಳನ್ನು ನುಂಗಿಬಿಡುವುದು. ನಿನಗೆ ಸಿಕ್ಕಿದ ಬೇಟೆಯನ್ನು ಭೂಮಿಯ ಮೇಲಿನಿಂದ ತೆಗೆದುಬಿಡುತ್ತೇನೆ. ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸದು.”


ಅವರ ರೌದ್ರದ ಎದುರಿಗೆ ಯಾರು ನಿಲ್ಲುವರು? ಅವರ ರೋಷಾಗ್ನಿಯಲ್ಲಿ ಯಾರು ನಿಂತುಕೊಳ್ಳುವರು? ಅವರ ಕೋಪಾಗ್ನಿ ಬೆಂಕಿಯ ಹಾಗೆ ಸುರಿಸಲಾಗಿದೆ; ಬಂಡೆಗಳು ಆತನ ಮುಂದೆ ಕೆಡವಲಾಗಿವೆ.


ಇದಲ್ಲದೆ ನಾನು ಅವಳ ಪ್ರಧಾನರನ್ನೂ, ಅವಳ ಜ್ಞಾನಿಗಳನ್ನೂ, ಅವಳ ಅಧಿಪತಿಗಳನ್ನೂ, ಅವಳ ಅಧಿಕಾರಿಗಳನ್ನೂ, ಅವಳ ಪರಾಕ್ರಮಶಾಲಿಗಳನ್ನೂ ಮತ್ತರಾಗಿ ಮಾಡುತ್ತೇನೆ. ಅವರು ನಿತ್ಯ ನಿದ್ರೆ ಮಾಡುವರು, ಎಚ್ಚರವಾಗುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಎಂಬ ಹೆಸರುಳ್ಳ ರಾಜಾಧಿರಾಜರು ಸಾರುತ್ತಾರೆ.


ಅವರು ಉರಿಗೊಂಡಿರುವಾಗ, ನಾನು ಅವರಿಗೆ ಔತಣವನ್ನು ಸಿದ್ಧಪಡಿಸಿ, ಅವರು ಅದರಿಂದ ಸಂಭ್ರಮಪಟ್ಟು, ಎಂದಿಗೂ ಎಚ್ಚರಗೊಳ್ಳದೆ, ದೀರ್ಘ ನಿದ್ರೆ ಮಾಡುವಂತೆ ತಲೆಗೇರುವತನಕ ಕುಡಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಆಗ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.


ನಿಮ್ಮ ಗದರಿಕೆಯಿಂದ ಜಲರಾಶಿ ಓಡಿ ಹೋದವು; ನಿಮ್ಮ ಗುಡುಗಿನ ಶಬ್ದದಿಂದ ಅವು ಓಡಿ ಹೋದವು.


ಯೆಹೋವ ದೇವರೇ, ನಿಮ್ಮ ಗದರಿಕೆಯಿಂದಲೂ, ನಿಮ್ಮ ಮೂಗಿನ ಶ್ವಾಸದ ಗಾಳಿಯಿಂದಲೂ ಸಮುದ್ರದ ತಳವು ಕಾಣಿಸಿದವು, ಭೂಲೋಕದ ಅಸ್ತಿವಾರಗಳು ಬಯಲಾದವು.


ಆಗ ಅರಾಮ್ಯರು ಇಸ್ರಾಯೇಲರ ಎದುರಿನಿಂದ ಓಡಿದರು. ದಾವೀದನು ಅರಾಮ್ಯರಲ್ಲಿ ಏಳು ನೂರು ರಥಗಳನ್ನೂ ಹಾಳು ಮಾಡಿ, ನಲವತ್ತು ಸಾವಿರ ಕಾಲಾಳುಗಳನ್ನೂ ಕೊಂದು, ಅವರ ಸೇನಾಧಿಪತಿಯಾದ ಶೋಬಕನನ್ನು ಹೊಡೆದನು; ಅವನು ಅಲ್ಲಿಯೇ ಮರಣಹೊಂದಿದನು.


ದಾವೀದನು ಸೌಲನ ತಲೆದಿಂಬಿನ ಬಳಿಯಲ್ಲಿದ್ದ ಈಟಿಯನ್ನೂ, ನೀರಿನ ತಂಬಿಗೆಯನ್ನೂ ತೆಗೆದುಕೊಂಡನು. ಅವರು ಹೊರಟು ಹೋದರು. ಒಬ್ಬರಾದರೂ ನೋಡಲಿಲ್ಲ ಇಲ್ಲವೆ ತಿಳಿದುಕೊಳ್ಳಲಿಲ್ಲ, ಅರಿತಿದ್ದಿಲ್ಲ, ಯಾರೂ ಎಚ್ಚೆತ್ತಿರಲಿಲ್ಲ. ಏಕೆಂದರೆ ಯೆಹೋವ ದೇವರಿಂದ ಗಾಢನಿದ್ರೆಯು ಅವರ ಮೇಲೆ ಇಳಿದ ಕಾರಣ ಅವರೆಲ್ಲರು ಗಾಢ ನಿದ್ರೆಯಲ್ಲಿದ್ದರು.


ನೀವು ನಿಮ್ಮ ಶ್ವಾಸ ಊದಿದಾಗ ಸಮುದ್ರವು ಅವರನ್ನು ನುಂಗಿಕೊಂಡಿತು. ಅವರು ಸೀಸದಂತೆ ಮಹಾಸಾಗರದಲ್ಲಿ ಮುಳುಗಿ ಹೋದರು.


ಅದೇ ರಾತ್ರಿಯಲ್ಲಿ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.


ಆಗ ಯೆಹೋವ ದೇವರು ತಮ್ಮ ದೂತನನ್ನು ಕಳುಹಿಸಿದರು. ಅವನು ಅಸ್ಸೀರಿಯದ ಅರಸನ ದಂಡಿನಲ್ಲಿರುವ ಸಮಸ್ತ ಪರಾಕ್ರಮಶಾಲಿಗಳನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ನಿರ್ಮೂಲ ಮಾಡಿದನು. ಹೀಗೆ ಇವನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿದನು. ಅವನು ತನ್ನ ದೇವರ ಆಲಯದಲ್ಲಿ ಪ್ರವೇಶಿಸಿದಾಗ, ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಖಡ್ಗದಿಂದ ಕೊಂದುಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು