Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 77:15 - ಕನ್ನಡ ಸಮಕಾಲಿಕ ಅನುವಾದ

15 ಯಾಕೋಬನ ಮತ್ತು ಯೋಸೇಫನ ಸಂತತಿಯವರಾದ ನಿಮ್ಮ ಜನರನ್ನು ನಿಮ್ಮ ಬಲವಾದ ತೋಳಿನಿಂದ ವಿಮೋಚಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯಾಕೋಬ ಮತ್ತು ಯೋಸೇಫರ ವಂಶದವರಾದ ನಿನ್ನ ಪ್ರಜೆಯನ್ನು, ಭುಜಬಲದಿಂದ ಬಿಡುಗಡೆಮಾಡಿದಿ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಿನ್ನ ಭುಜಬಲದಿಂದ ಯಕೋಬ, ಜೋಸೆಫ್ ವಂಶಜರನು I ಉದ್ಧಾರ ಮಾಡಿದೆ ನಿನ್ನ ಪ್ರಜೆಗಳಾಗಿಹ ಆ ಜನರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯಾಕೋಬ ಯೋಸೇಫರ ವಂಶೀಯವಾದ ನಿನ್ನ ಪ್ರಜೆಯನ್ನು ಭುಜಬಲದಿಂದ ಬಿಡುಗಡೆ ಮಾಡಿದಿ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನೀನು ನಿನ್ನ ಶಕ್ತಿಯಿಂದ ನಿನ್ನ ಜನರನ್ನು ರಕ್ಷಿಸಿದೆ. ಯಾಕೋಬನ ಮತ್ತು ಯೋಸೇಫನ ಸಂತತಿಯವರನ್ನು ನೀನು ರಕ್ಷಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 77:15
11 ತಿಳಿವುಗಳ ಹೋಲಿಕೆ  

ಆದರೂ ನೀವು ನಿಮ್ಮ ದೊಡ್ಡ ಶಕ್ತಿಯಿಂದಲೂ, ನಿಮ್ಮ ಚಾಚಿದ ಕೈಯಿಂದಲೂ ಹೊರಗೆ ಬರಮಾಡಿದ ನಿಮ್ಮ ಜನವೂ ನಿಮ್ಮ ಸೊತ್ತೂ ಇವರೇ,” ಎಂದು ಹೇಳಿದೆನು.


“ಆದ್ದರಿಂದ ಇಸ್ರಾಯೇಲರಿಗೆ, ‘ನಾನೇ ಯೆಹೋವ ದೇವರು. ನಾನು ನಿಮ್ಮನ್ನು ಈಜಿಪ್ಟಿನ ಬಿಟ್ಟಿಕೆಲಸದಿಂದ ಅವರಿಗೆ ದಾಸತ್ವದಲ್ಲಿರುವುದರಿಂದ, ನಾನು ಚಾಚಿದ ಬಾಹುವಿನಿಂದಲೂ ಬಲವಾದ ನ್ಯಾಯತೀರ್ಪುಗಳಿಂದಲೂ ನಿಮ್ಮನ್ನು ಬಿಡಿಸುವೆನು.


ಅವರಿಗೆ ಬಂದ ಎಲ್ಲಾ ಇಕ್ಕಟ್ಟಿನಲ್ಲಿ ಆತನಿಗೆ ಇಕ್ಕಟ್ಟಾಯಿತು. ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು. ತನ್ನ ಪ್ರೀತಿಯಲ್ಲಿಯೂ, ತನ್ನ ಕನಿಕರದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು. ಪೂರ್ವಕಾಲದ ದಿವಸಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.


ಪೂರ್ವಕಾಲದಲ್ಲಿ ನೀವು ಕೊಂಡುಕೊಂಡ ನಿಮ್ಮ ಜನರನ್ನೂ ನೀವು ವಿಮೋಚಿಸಿದ ನಿಮ್ಮ ಬಾಧ್ಯತೆಯನ್ನೂ ನೀವು ವಾಸಮಾಡಿದ ಚೀಯೋನ್ ಪರ್ವತವನ್ನೂ ಜ್ಞಾಪಕಮಾಡಿಕೊಳ್ಳಿರಿ.


ನಾನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿ, “ಸಾರ್ವಭೌಮ ಯೆಹೋವ ದೇವರೇ, ನೀವು ನಿಮ್ಮ ಮಹಿಮೆಯಿಂದ ವಿಮೋಚಿಸಿ, ಬಲವಾದ ಕೈಯಿಂದ ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದ ನಿಮ್ಮ ಜನರನ್ನು ನಾಶಮಾಡಬೇಡಿ.


ನೀವು ವಿಮೋಚಿಸಿದ ಜನರನ್ನು ನೀವು ನಿಮ್ಮ ಪ್ರೀತಿಯಿಂದ ನಡೆಸಿದ್ದೀರಿ. ನೀವು ಅವರನ್ನು ನಿಮ್ಮ ಬಲದಿಂದ ನಿಮ್ಮ ಪರಿಶುದ್ಧ ನಿವಾಸಕ್ಕೆ ನಡೆಸಿದ್ದೀರಿ.


ಯೆಹೋಶುವನು ಜನರಿಗೆ, “ಇಂದು ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ, ನಾಳೆ ಯೆಹೋವ ದೇವರು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುವರು,” ಎಂದನು.


ಅದ್ಭುತಗಳನ್ನು ಮಾಡುವುದರಲ್ಲಿ ಸರಿಸಾಟಿಯಿಲ್ಲದ ಇಸ್ರಾಯೇಲರ ದೇವರಾಗಿರುವ ಯೆಹೋವ ದೇವರಿಗೆ ಸ್ತೋತ್ರವಾಗಲಿ.


ಹೀಗೆ ದಾನಿಯೇಲನು ದಾರ್ಯಾವೆಷನ ಆಳ್ವಿಕೆಯಲ್ಲಿಯೂ, ಪಾರಸಿಯನಾದ ಕೋರೆಷನ ಆಳ್ವಿಕೆಯಲ್ಲಿಯೂ ಸಮೃದ್ಧವಾಗಿ ಬಾಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು