Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 77:17 - ಕನ್ನಡ ಸಮಕಾಲಿಕ ಅನುವಾದ

17 ಮೋಡಗಳು ನೀರನ್ನು ಸುರಿಸಿದವು. ಆಕಾಶಗಳು ಗುಡುಗಿನಿಂದ ಶಬ್ದಮಾಡಿದವು. ನಿಮ್ಮ ಬಾಣಗಳು ಹಿಂದೆಯೂ ಮುಂದೆಯೂ ಹಾರಿ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮೇಘಮಂಡಲವು ಮಳೆಗರೆಯಿತು; ಆಕಾಶವು ಗರ್ಜಿಸಿತು; ನಿನ್ನ ಬಾಣಗಳು ಎಲ್ಲಾ ಕಡೆಯೂ ಹಾರಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಮಳೆಗರಿಯಿತಾ ಮೇಘಮಂಡಲವು I ಭೋರ್ಗರೆಯಿತಾಗ ಅಂತರಿಕ್ಷವು I ಮಿಂಚಿದವು ಎಲ್ಲೆಡೆ ನಿನ್ನಂಬುಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮೇಘಮಂಡಲವು ಮಳೆಗರೆಯಿತು; ಅಂತರಿಕ್ಷವು ಗರ್ಜಿಸಿತು; ನಿನ್ನ ಬಾಣಗಳು ಎಲ್ಲಾ ಕಡೆಯೂ ಹಾರಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ದಟ್ಟವಾದ ಕಪ್ಪುಮೋಡಗಳು ಮಳೆಗರೆದವು. ಜನರಿಗೆ ಮೇಘಮಂಡಲದಿಂದ ಗುಡುಗು ಕೇಳಿಸಿತು. ನಿನ್ನ ಮಿಂಚಿನ ಬಾಣಗಳು ಆ ಮೋಡಗಳಲ್ಲಿ ಹಾರಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 77:17
9 ತಿಳಿವುಗಳ ಹೋಲಿಕೆ  

ಅವರು ತಮ್ಮ ಬಾಣಗಳನ್ನು ಎಸೆದು ವೈರಿಗಳನ್ನು ಚದರಿಸಿದರು; ಸಿಡಿಲಿನಿಂದ ವೈರಿಗಳನ್ನೆಲ್ಲ ಅಟ್ಟಿಸಿಬಿಟ್ಟರು.


ನಿನ್ನ ಹಾರುವ ಬಾಣಗಳ ಬೆಳಗಿಗೂ, ನಿನ್ನ ಮಿಂಚುವ ಈಟಿಯ ಹೊಳಪಿಗೂ ಸೂರ್ಯ ಚಂದ್ರರು ಆಕಾಶದಲ್ಲಿ ಸ್ಥಿರವಾಗಿದ್ದಾರೆ.


ಮಿಂಚಿನಿಂದ ವೈರಿಗಳನ್ನು ಚದರಿಸಿರಿ. ನಿಮ್ಮ ಬಾಣಗಳನ್ನು ಎಸೆದು, ಅವರನ್ನು ದಂಡಿಸಿರಿ.


ಪೂರ್ವದ ಆಕಾಶಗಳಲ್ಲಿ ಸವಾರಿ ಮಾಡುವ ದೇವರಿಗೆ ಹಾಡಿರಿ. ದೇವರ ಸ್ವರವು ಗುಡುಗಿನಂತೆ ಇರುವುದು.


ಅವರು ತಮ್ಮ ಬಾಣಗಳನ್ನು ಎಸೆದು ವೈರಿಗಳನ್ನು ಚದರಿಸಿದರು, ಸಿಡಿಲಿನಿಂದ ವೈರಿಗಳನ್ನೆಲ್ಲ ಅಟ್ಟಿಸಿಬಿಟ್ಟರು.


“ಯೆಹೋವ ದೇವರೇ, ನೀವು ಸೇಯೀರಿನಿಂದ ಹೊರಟು, ಎದೋಮಿನ ಹೊಲದಿಂದ ಮುನ್ನಡೆಯುವಾಗ, ಭೂಮಿ ನಡುಗಿತು. ಆಕಾಶವು ಸಹ ಸುರಿಸಿತು. ಮೇಘಗಳು ಸಹ ನೀರು ಸುರಿಸಿದವು.


ಸಮುದ್ರವು ನೋಡಿ ಓಡಿಹೋಯಿತು; ಯೊರ್ದನ್ ನದಿ ಹಿಂದಿರುಗಿತು.


ಬೆಟ್ಟಗಳು ನಿನ್ನನ್ನು ಕಂಡು ನಡುಗಿದವು; ಜಲಪ್ರವಾಹವು ಹಾದುಹೋಯಿತು; ಸಾಗರವು ಗರ್ಜಿಸಿ; ತನ್ನ ತೆರೆಗಳನ್ನು ಮೇಲಕ್ಕೆ ಎತ್ತುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು