ಕೀರ್ತನೆಗಳು 77:2 - ಕನ್ನಡ ಸಮಕಾಲಿಕ ಅನುವಾದ2 ನನ್ನ ಇಕ್ಕಟ್ಟಿನ ದಿವಸದಲ್ಲಿ ಯೆಹೋವ ದೇವರನ್ನು ಹುಡುಕಿದೆನು. ನಾನು ರಾತ್ರಿಯೆಲ್ಲಾ ಬೇಸರವಿಲ್ಲದೆ ಕೈಚಾಚಿದೆ. ನನ್ನ ಮನಸ್ಸಿಗೆ ಶಾಂತಿ ಇರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇಕ್ಕಟ್ಟಿನಲ್ಲಿ ಸ್ವಾಮಿಯನ್ನು ಕರೆದೆನು; ಬೇಸರವಿಲ್ಲದೆ ರಾತ್ರಿಯೆಲ್ಲಾ ಕೈಚಾಚಿಕೊಂಡೇ ಇದ್ದೆನು. ನನ್ನ ಮನಸ್ಸು ಶಾಂತಿಯನ್ನು ಹೊಂದಲೊಲ್ಲದೆ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸಂಕಟದ ವೇಳೆಯೊಳು ಸ್ವಾಮಿಯನು ನಾ ಕರೆದೆ I ಇರುಳೆಲ್ಲ ಆಯಾಸವರಿಯದೆ ಕೈಚಾಚಿದೆ I ಎನ್ನ ಮನಸ್ಸಿತ್ತು ದುಃಖಶಮನಗೊಳ್ಳದೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇಕ್ಕಟ್ಟಿನಲ್ಲಿ ಸ್ವಾವಿುಯನ್ನು ಕರೆದೆನು; ಬೇಸರವಿಲ್ಲದೆ ಇರುಳೆಲ್ಲಾ ಕೈಯೊಡ್ಡಿಕೊಂಡೇ ಇದ್ದೆನು. ನನ್ನ ಮನಸ್ಸು ಶಾಂತಿಹೊಂದಲೊಲ್ಲದೆ ಇತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನನ್ನ ಯೆಹೋವನೇ, ಇಕ್ಕಟ್ಟಿನಲ್ಲಿ ನಿನ್ನನ್ನು ಕರೆದೆನು; ರಾತ್ರಿಯೆಲ್ಲಾ ನಿನಗಾಗಿ ಕೈಚಾಚಿಕೊಂಡಿದ್ದೆನು. ಆದರೆ ನನ್ನ ಮನಸ್ಸು ಸಮಾಧಾನಗೊಳ್ಳಲಿಲ್ಲ. ಅಧ್ಯಾಯವನ್ನು ನೋಡಿ |