Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 77:20 - ಕನ್ನಡ ಸಮಕಾಲಿಕ ಅನುವಾದ

20 ಮೋಶೆ ಆರೋನರ ಕೈಯಿಂದ ನಿಮ್ಮ ಜನರನ್ನು ಮಂದೆಯ ಹಾಗೆ ನಡೆಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕುರುಬನು ಕುರಿಹಿಂಡನ್ನು ಹೇಗೋ, ಹಾಗೆಯೇ ನೀನು ಮೋಶೆ ಮತ್ತು ಆರೋನರ ಮುಖಾಂತರ, ನಿನ್ನ ಪ್ರಜೆಯನ್ನು ಮುನ್ನಡೆಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕುರುಬನು ತನ್ನ ಕುರಿಮಂದೆಯನು ಕರೆದೊಯ್ಯುವಂತೆ I ಮೋಶೆ, ಆರೋನರಿಂದ ನಿನ್ನ ಪ್ರಜೆಗಳನು ನಡೆಸಿದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಕುರುಬನು ಕುರಿಹಿಂಡನ್ನು ಹೇಗೋ ಹಾಗೆ ನೀನು ಮೋಶೆ ಆರೋನರ ಮುಖಾಂತರ ನಿನ್ನ ಪ್ರಜೆಯನ್ನು ಕರೆದೊಯ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಕುರುಬನು ಕುರಿಹಿಂಡನ್ನು ಕರೆದೊಯ್ಯುವಂತೆ ನಿನ್ನ ಜನರನ್ನು ಕರೆದೊಯ್ಯಲು ಮೋಶೆಯನ್ನೂ ಆರೋನನನ್ನೂ ಉಪಯೋಗಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 77:20
11 ತಿಳಿವುಗಳ ಹೋಲಿಕೆ  

ಇದಲ್ಲದೆ ಅವರು ಹಗಲೂ ರಾತ್ರಿಯೂ ಪ್ರಯಾಣ ಮಾಡುವ ಹಾಗೆ ಯೆಹೋವ ದೇವರು ಹಗಲಲ್ಲಿ ಅವರಿಗೆ ದಾರಿ ತೋರಿಸುವುದಕ್ಕೆ ಮೇಘದ ಸ್ತಂಭದಲ್ಲಿಯೂ ರಾತ್ರಿಯಲ್ಲಿ ಅವರಿಗೆ ಬೆಳಕು ಕೊಡುವುದಕ್ಕೆ ಅಗ್ನಿಯ ಸ್ತಂಭದಲ್ಲಿಯೂ ಅವರ ಮುಂದೆ ಹೋದರು.


ಆದರೆ ದೇವರು ಮಂದೆಯ ಹಾಗೆ ತಮ್ಮ ಜನರನ್ನು ಹೊರತಂದು, ಕುರಿಗಳನ್ನು ನಡೆಸುವಂತೆ ಮರುಭೂಮಿಯಲ್ಲಿ ಅವರನ್ನು ನಡೆಸಿದರು.


ಆಗ ಇಸ್ರಾಯೇಲ್ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.


ಮಂದೆಯಂತೆ ಯೋಸೇಫ್ಯರನ್ನು ನಡೆಸುವ ಇಸ್ರಾಯೇಲರ ಕುರುಬ ಆಗಿರುವ ದೇವರೇ, ಕಿವಿಗೊಡಿರಿ. ಕೆರೂಬಿಗಳ ಮಧ್ಯದಲ್ಲಿ ಆಸೀನವಾಗಿರುವ ದೇವರೇ ಪ್ರಕಾಶಿಸಿರಿ.


ಪ್ರವಾದಿಯಿಂದ ಯೆಹೋವ ದೇವರು ಇಸ್ರಾಯೇಲರನ್ನು ಈಜಿಪ್ಟಿನೊಳಗಿಂದ ಬರಮಾಡಿ, ಆ ಪ್ರವಾದಿಯಿಂದಲೇ ಆತನು ಅವರನ್ನು ಕಾಪಾಡಿದರು.


ಆ ಮೇಘವು ಎರಡು ದಿವಸಗಳಾದರೂ, ಒಂದು ತಿಂಗಳಾದರೂ, ಒಂದು ವರ್ಷವಾದರೂ ಗುಡಾರದ ಮೇಲೆ ನೆಲೆಸಿ ತಡಮಾಡಿದರೆ ಇಸ್ರಾಯೇಲರು ಪ್ರಯಾಣ ಮಾಡದೆ ಅಲ್ಲೇ ಇಳಿದುಕೊಳ್ಳುತ್ತಿದ್ದರು. ಅದು ಮೇಲೆ ಎದ್ದಾಗ ಮಾತ್ರ ಅವರು ಪ್ರಯಾಣ ಮಾಡುತ್ತಿದ್ದರು.


ನೀವು ಈ ಸ್ಥಳಕ್ಕೆ ಸೇರುವ ತನಕ ಯೆಹೋವ ದೇವರು ಮರುಭೂಮಿಯಲ್ಲಿ ನಿಮಗೆ ಮಾಡಿದ ಉಪಕಾರಗಳನ್ನೂ;


ಯೆಹೋವ ದೇವರು ಇಂತೆನ್ನುತ್ತಾರೆ: ಸಮುದ್ರದ ಮುಖಾಂತರವಾಗಿ ಮಾರ್ಗಮಾಡಿದವನೂ; ಬಲವಾದ ನೀರಿನಲ್ಲಿ ದಾರಿ ಮಾಡಿದವನೂ;


ನೀನು ನಿನ್ನ ಕುದುರೆಗಳ ಸಂಗಡ ಸಮುದ್ರದಲ್ಲಿಯೂ, ಮಹಾಜಲಗಳ ಸಮೂಹದಲ್ಲಿಯೂ ನಡೆದು ಹೋದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು