ಕೀರ್ತನೆಗಳು 78:10 - ಕನ್ನಡ ಸಮಕಾಲಿಕ ಅನುವಾದ10 ಅವರು ದೇವರ ಒಡಂಬಡಿಕೆಯನ್ನು ಕೈಗೊಳ್ಳಲಿಲ್ಲ. ದೇವರ ನಿಯಮದಲ್ಲಿ ನಡೆಯಲೊಲ್ಲದೆ ಇದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವರು ದೇವರ ನಿಬಂಧನೆಯನ್ನು ಪಾಲಿಸಲಿಲ್ಲ, ಆತನ ಧರ್ಮಶಾಸ್ತ್ರವನ್ನು ಅನುಸರಿಸಲು ಮನಸ್ಸು ಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಪಾಲಿಸಲಿಲ್ಲ ಅವರು ದೇವರ ನಿಬಂಧನೆಯನು I ಅನುಸರಿಸಲಿಲ್ಲ ಆತನ ಧರ್ಮಶಾಸ್ತ್ರವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವರು ದೇವರ ನಿಬಂಧನೆಯನ್ನು ಪಾಲಿಸದೆ ಆತನ ಧರ್ಮಶಾಸ್ತ್ರವನ್ನು ಅನುಸರಿಸಲೊಲ್ಲದೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ದೇವರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಅವರು ಪಾಲಿಸಲಿಲ್ಲ. ಅವರು ಆತನ ಉಪದೇಶಗಳಿಗೆ ವಿಧೇಯರಾಗಲಿಲ್ಲ. ಅಧ್ಯಾಯವನ್ನು ನೋಡಿ |
ಅವರು ನಿಮ್ಮ ಸ್ವರವನ್ನು ಕೇಳದೆಯೂ, ನೀವು ಅವರ ನಡುವೆ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕಮಾಡದೆ ಹೋದರು. ಅವರು ತಮ್ಮ ಹೃದಯವನ್ನು ಕಠಿಣ ಮಾಡಿಕೊಂಡು, ನಿಮಗೆ ಎದುರುಬಿದ್ದು, ತಮ್ಮ ದಾಸತ್ವಕ್ಕೆ ತಿರುಗಿ ಹೋಗುವಹಾಗೆ ನಾಯಕನನ್ನು ನೇಮಿಸಿಕೊಂಡರು. ಆದರೆ ನೀವು ಮನ್ನಿಸುವ ದೇವರಾಗಿಯೂ, ಕೃಪಾಪೂರ್ಣರೂ, ಅನುಕಂಪವುಳ್ಳವರೂ, ದೀರ್ಘಶಾಂತರೂ, ಪ್ರೀತಿಯಲ್ಲಿ ಸಮೃದ್ಧರೂ ಆಗಿರುವುದರಿಂದ ಅವರನ್ನು ಕೈಬಿಡಲಿಲ್ಲ.
“ ‘ಆದರೆ ಮಕ್ಕಳು ನನಗೆ ವಿರೋಧವಾಗಿ ತಿರುಗಿಬಿದ್ದರು. ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ, ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ಮತ್ತು ನನ್ನ ನ್ಯಾಯಗಳನ್ನು ಜಾಗರೂಕತೆಯಿಂದ ಪಾಲಿಸಿ ನಡೆಯಲಿಲ್ಲ. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಪಡಿಸಿದಿರಿ. ಆಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ, ನನ್ನ ಕೋಪವನ್ನು ಮರುಭೂಮಿಯಲ್ಲಿ ಅವರ ಮೇಲೆ ತೀರಿಸಿ ಬಿಡುವೆನೆಂದೂ ಹೇಳಿದೆನು.