Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:13 - ಕನ್ನಡ ಸಮಕಾಲಿಕ ಅನುವಾದ

13 ದೇವರು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದರು. ನೀರನ್ನು ಗೋಡೆಯಾಗಿ ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನು ಸಮುದ್ರವನ್ನು ವಿಭಾಗಿಸಿ, ಅದರ ನೀರನ್ನು ರಾಶಿಯಾಗಿ ನಿಲ್ಲುವಂತೆ ಮಾಡಿ, ಅವರನ್ನು ದಾಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ದಾಟಿಸಿದನವರನು ಸಮುದ್ರವನೆ ಭೇದಿಸಿ I ಅದರತುಳ ನೀರನು ರಾಶಿಯಾಗಿ ನಿಲ್ಲಿಸಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆತನು ಸಮುದ್ರವನ್ನು ಭೇದಿಸಿ ಅದರ ನೀರನ್ನು ರಾಶಿಯಂತೆ ನಿಲ್ಲಿಸಿ ಅವರನ್ನು ದಾಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದೇವರು ಕೆಂಪು ಸಮುದ್ರವನ್ನು ಇಬ್ಭಾಗಮಾಡಿ ಅವರನ್ನು ದಾಟಿಸಿದನು. ಅವರ ಎರಡು ಕಡೆಗಳಲ್ಲಿ ನೀರು ಬಲವಾದ ಗೋಡೆಯಂತೆ ನಿಂತುಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:13
15 ತಿಳಿವುಗಳ ಹೋಲಿಕೆ  

ಆಗ ಮೋಶೆಯು ಸಮುದ್ರದ ಮೇಲೆ ತನ್ನ ಬಲಗೈಯನ್ನು ಚಾಚಲಾಗಿ, ಯೆಹೋವ ದೇವರು ರಾತ್ರಿಯೆಲ್ಲಾ ಬಲವಾದ ಪೂರ್ವದಿಕ್ಕಿನ ಗಾಳಿಯಿಂದ ಸಮುದ್ರವನ್ನು ಹಿಂದಕ್ಕೆ ಹೋಗುವಂತೆ ಸಮುದ್ರವನ್ನು ಸರಿಸಿ, ಒಣ ನೆಲ ಕಾಣಿಸುವಂತೆ ಮಾಡಿದರು. ಆಗ ನೀರು ವಿಭಾಗವಾಯಿತು.


ನೀವು ಬೀಸಿದ ಬಿರುಸಾದ ಗಾಳಿಯಿಂದ ನೀರು ಒಟ್ಟುಗೂಡಿದವು. ಪ್ರವಾಹಗಳು ರಾಶಿಯಂತೆ ನಿಂತವು. ಜಲರಾಶಿಗಳು ಸಮುದ್ರದ ಮಧ್ಯದಲ್ಲಿ ಗಟ್ಟಿಯಾದವು.


ದೇವರು ಸಮುದ್ರವನ್ನು ಒಣ ಭೂಮಿಯನ್ನಾಗಿ ಮಾಡಿದರು. ಜನರು ಕಾಲಿನಿಂದ ನದಿಯನ್ನು ದಾಟಿದರು. ಬನ್ನಿರಿ, ದೇವರಲ್ಲಿ ಆನಂದಿಸೋಣ.


ಮೇಲಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಸಮೀಪವಾಗಿದ್ದ ಆದಾಮ್ ಪಟ್ಟಣಕ್ಕೆ ಬಂದು ರಾಶಿಯಾಗಿ ನಿಂತುಕೊಂಡಿತು. ಕೆಳಗಿನ ನೀರು ಅರಾಬಾ ಎಂಬ ಲವಣ ಸಮುದ್ರಕ್ಕೆ ಹರಿದುಹೋಯಿತು. ಆಗ ಜನರು ಯೆರಿಕೋವಿನ ಎದುರಾಗಿ ನದಿ ದಾಟಿದರು.


ನೀನು ನಿನ್ನ ಕುದುರೆಗಳ ಸಂಗಡ ಸಮುದ್ರದಲ್ಲಿಯೂ, ಮಹಾಜಲಗಳ ಸಮೂಹದಲ್ಲಿಯೂ ನಡೆದು ಹೋದೆ.


ಅಡವಿಯಲ್ಲಿ ಕುದುರೆಯಂತೆ ಅಗಾಧಗಳಲ್ಲಿ ಅವರನ್ನು ಎಡವದ ಹಾಗೆ ನಡೆಸಿದವನು ಎಲ್ಲಿ?”


ನನ್ನ ಸೊಂಟ ಬಹು ಬೇನೆಯಿಂದ ತುಂಬಿದೆ. ನನ್ನ ದೇಹದಲ್ಲಿ ಕ್ಷೇಮವೇ ಇಲ್ಲ.


ಹೀಗೆ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ನಡೆದುಹೋದರು. ನೀರು ಅವರಿಗೆ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಾಗಿ ನಿಂತಿತ್ತು.


ಆದರೆ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿದ್ದ ಒಣಗಿದ ನೆಲದ ಮೇಲೆ ನಡೆದುಹೋದರು. ನೀರು ಅವರಿಗೆ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತಿತ್ತು.


ಸಮಸ್ತ ಭೂಮಿಗೂ ಒಡೆಯರಾಗಿರುವ ಯೆಹೋವ ದೇವರ ಮಂಜೂಷವನ್ನು ಹೊರುವ ಯಾಜಕರ ಪಾದಗಳು ಯೊರ್ದನ್ ನದಿಯ ನೀರಲ್ಲಿ ಇಡುತ್ತಲೇ, ಮೇಲಿನಿಂದ ಹರಿದು ಬರುವ ನೀರು ಮುಂದೆ ಹರಿಯದೆ ಅಲ್ಲಿಯೇ ರಾಶಿಯಾಗಿ ನಿಲ್ಲುವುದು,” ಎಂದು ಹೇಳಿದನು.


ಮೋಶೆಯ ಬಲಗೈಯ ಮುಖಾಂತರ ತನ್ನ ಬಲವಾದ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡೆಸಿದವನೂ, ತನಗೆ ನಿತ್ಯವಾದ ಹೆಸರನ್ನು ಉಂಟುಮಾಡುವ ಹಾಗೆ ಅವರ ಮುಂದೆ ಜನರಾಶಿಯನ್ನೂ ಇಬ್ಬಾಗಿಸಿದವನು ಎಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು