Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:17 - ಕನ್ನಡ ಸಮಕಾಲಿಕ ಅನುವಾದ

17 ಆದರೆ ಜನರು ಇನ್ನೂ ದೇವರಿಗೆ ವಿರೋಧವಾಗಿ ಪಾಪಮಾಡಿ, ಮರುಭೂಮಿಯಲ್ಲಿ ಮಹೋನ್ನತರಿಗೆ ವಿರೋಧವಾಗಿ ಕೋಪವನ್ನೆಬ್ಬಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೂ ಅವರು ನಿರ್ಜಲಪ್ರದೇಶದಲ್ಲಿ ಪರಾತ್ಪರನಾದ ದೇವರಿಗೆ ಪದೇಪದೇ ಅವಿಧೇಯರಾಗಿ, ಇನ್ನೂ ಹೆಚ್ಚು ಪಾಪಮಾಡುತ್ತಾ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆದರೂ ಪಾಪಮಾಡುತ್ತಲೆ ಬಂದರು ದೇವರಿಗೆದುರಾಗಿ I ಪ್ರತಿಭಟಿಸಿದರು ಅಡವಿಯಲಿ ಪರಾತ್ಪರನಿಗೆ ವಿರುದ್ಧವಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದರೂ ಅವರು ನಿರ್ಜಲಪ್ರದೇಶದಲ್ಲಿ ಪರಾತ್ಪರನಿಗೆ ಪದೇಪದೇ ಅವಿಧೇಯರಾಗಿ ಇನ್ನೂ ಹೆಚ್ಚು ಪಾಪಮಾಡುತ್ತಾ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೂ ಅವರು ಅರಣ್ಯದಲ್ಲಿ ಮಹೋನ್ನತನಾದ ಆತನ ವಿರೋಧವಾಗಿ ಪಾಪಮಾಡುತ್ತಾ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:17
9 ತಿಳಿವುಗಳ ಹೋಲಿಕೆ  

ಆದರೆ ಅವರು ತಿರುಗಿಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಆದ್ದರಿಂದ ಆತನು ಬೇರೆಯಾಗಿ ಅವರಿಗೆ ಶತ್ರುವಾದನು. ಆತನೇ ಅವರಿಗೆ ವಿರೋಧವಾಗಿ ಯುದ್ಧಮಾಡಿದನು.


ನೀವು ಹೋರೇಬಿನಲ್ಲಿಯೂ ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದಾಗ, ಅವರು ನಿಮ್ಮನ್ನು ನಿಮ್ಮ ಮೇಲೆ ಸಿಟ್ಟುಮಾಡಿಕೊಂಡು ನಾಶಮಾಡಬೇಕೆಂದಿದ್ದರು.


ಇದೆಲ್ಲಾ ಆದಾಗ್ಯೂ ಜನರು ಇನ್ನೂ ಪಾಪಮಾಡುತ್ತಿದ್ದರು. ದೇವರ ಅದ್ಭುತಗಳನ್ನು ಕಂಡರೂ ನಂಬಲಿಲ್ಲ.


ಏಕೆಂದರೆ ನಿಮ್ಮ ದ್ರೋಹವನ್ನೂ, ನಿಮ್ಮ ಹಟಮಾರಿತನವನ್ನೂ ನಾನು ಬಲ್ಲೆನು. ಈ ಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರುವಾಗಲೇ ಯೆಹೋವ ದೇವರಿಗೆ ದ್ರೋಹ ಮಾಡಿದವರಾದಿರಿ. ನಾನು ಸತ್ತಮೇಲೆ ಇನ್ನೇನಾಗುವುದು?


“ ‘ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ಕಣ್ಣಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ. ಅವರು ಈಜಿಪ್ಟಿನ ವಿಗ್ರಹಗಳನ್ನು ಬಿಡಲಿಲ್ಲ. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಈಜಿಪ್ಟ್ ದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು