Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:19 - ಕನ್ನಡ ಸಮಕಾಲಿಕ ಅನುವಾದ

19 ಹೌದು, ಅವರು ದೇವರಿಗೆ ವಿರೋಧವಾಗಿ ಮಾತನಾಡಿ, “ದೇವರು ಅರಣ್ಯದಲ್ಲಿ ಭೋಜನವನ್ನು ಸಿದ್ಧ ಮಾಡಬಲ್ಲನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರು ಆತನಿಗೆ ವಿರುದ್ಧವಾಗಿ ಹೇಳಿದ್ದೇನೆಂದರೆ, “ದೇವರು ಅರಣ್ಯದಲ್ಲಿ ಊಟಕ್ಕೆ ಬಡಿಸಬಲ್ಲನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಜರೆವ ಮಾತಿನಲಿ ಆಡಿಕೊಂಡರಿಂತು : I “ಅಡವಿಯಲ್ಲಿ ದೇವನೂಟ ಬಡಿಸುವನೆಂತು?” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವರು ಆತನಿಗೆ ವಿರೋಧವಾಗಿ ಅಂದದ್ದೇನಂದರೆ - ದೇವರು ಅರಣ್ಯದಲ್ಲಿ ಊಟಕ್ಕೆ ಬಡಿಸಬಲ್ಲನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅವರು ಆತನಿಗೆ ವಿರೋಧವಾಗಿ ಮಾತಾಡಿ, “ದೇವರು ನಮಗೆ ಅರಣ್ಯದಲ್ಲಿ ಆಹಾರವನ್ನು ಕೊಡಬಲ್ಲನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:19
12 ತಿಳಿವುಗಳ ಹೋಲಿಕೆ  

ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ, “ನಾವು ಮರುಭೂಮಿಯಲ್ಲಿ ಸಾಯುವ ಹಾಗೆ ನಮ್ಮನ್ನು ಈಜಿಪ್ಟ್ ದೇಶದಿಂದ ಏಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ. ನಾವು ಈ ನಿಸ್ಸಾರವಾದ ರೊಟ್ಟಿಯನ್ನು ತಿಂದು ನಮಗೆ ಬೇಸರವಾಗಿದೆ,” ಎಂದರು.


ಅವರೊಳಗಿದ್ದ ಮಿಶ್ರ ಗುಂಪಿನ ಜನರು ಮಾಂಸಕ್ಕಾಗಿ ದುರಾಶೆಪಟ್ಟರು. ಇಸ್ರಾಯೇಲರು ಸಹ ತಿರುಗಿ ಅಳುತ್ತಾ, “ನಮಗೆ ಮಾಂಸವನ್ನು ತಿನ್ನುವುದಕ್ಕೆ ಕೊಡುವವರು ಯಾರು?


ನೀವು ನನ್ನ ವೈರಿಗಳ ಮುಂದೆಯೇ ನನಗೊಂದು ಔತಣವನ್ನು ಸಿದ್ಧಮಾಡುತ್ತೀರಿ. ನೀವು ನನ್ನ ತಲೆಗೆ ತೈಲವನ್ನು ಅಭಿಷೇಕಿಸುತ್ತೀರಿ. ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.


ಇಸ್ರಾಯೇಲರು ಅವರಿಗೆ, “ನಾವು ಈಜಿಪ್ಟ್ ದೇಶದಲ್ಲಿ ಮಾಂಸದ ಪಾತ್ರೆಗಳ ಬಳಿಯಲ್ಲಿ ಕುಳಿತುಕೊಂಡು ಸಾಕಾಗುವಷ್ಟು ರೊಟ್ಟಿಯನ್ನು ತಿನ್ನುತ್ತಿದ್ದಾಗ, ಯೆಹೋವ ದೇವರ ಕೈಯಿಂದ ಸತ್ತು ಹೋಗಿದ್ದರೆ ಒಳ್ಳೆಯದಾಗಿತ್ತು. ಇಡೀ ಜನಾಂಗವೇ ಹಸಿವೆಯಿಂದ ಸತ್ತು ಹೋಗುವಂತೆ ನಮ್ಮನ್ನು ಈ ಮರುಭೂಮಿಗೆ ಬರಮಾಡಿದ್ದೀರಿ,” ಎಂದರು.


ಜನರು ಮೋಶೆಯ ಸಂಗಡ ವ್ಯಾಜ್ಯವಾಡಿ, “ನಮ್ಮ ಸಹೋದರರು ಯೆಹೋವ ದೇವರ ಮುಂದೆ ಸತ್ತು ಹೋದಾಗಲೇ, ನಾವು ಸಹ ಸತ್ತು ಹೋಗಿದ್ದರೆ ಚೆನ್ನಾಗಿತ್ತು.


ಈ ಸಮಸ್ತ ಜನರಿಗೆ ಕೊಡುವುದಕ್ಕೆ ಮಾಂಸವು ನನಗೆ ಎಲ್ಲಿಂದ ದೊರಕುವುದು? ‘ನಮಗೆ ತಿನ್ನಲು ಮಾಂಸವನ್ನು ಕೊಡು,’ ಎಂದು ನನ್ನ ಬಳಿಗೆ ಬಂದು ಅಳುತ್ತಿದ್ದಾರೆ.


ಯೋಬನು ತನ್ನ ಪಾಪಕ್ಕೆ ದೇವರಿಗೆ ಎದುರಾಗಿ ಪ್ರತಿಭಟನೆಯನ್ನು ಸಹ ಕೂಡಿಸುತ್ತಿದ್ದಾನೆ; ಅಪಹಾಸ್ಯದಿಂದ ನಮ್ಮ ಮಧ್ಯದಲ್ಲಿ ಚಪ್ಪಾಳೆ ತಟ್ಟುತ್ತಾನೆ; ದೇವರಿಗೆ ವಿರುದ್ಧ ಹೆಚ್ಚು ಮಾತುಗಳನ್ನಾಡುತ್ತಾನೆ,’ ಎಂದು ನನಗೆ ಹೇಳುತ್ತಿದ್ದಾರೆ.”


ಆ ಮೃಗವು ತನ್ನ ಬಾಯಿತೆರೆದು, ದೇವರಿಗೆ ವಿರುದ್ಧವಾಗಿ ದೂಷಿಸಿ, ಅವರ ನಾಮವನ್ನೂ ಅವರ ನಿವಾಸವನ್ನೂ ಮತ್ತು ಪರಲೋಕ ನಿವಾಸಿಗಳನ್ನೂ ದೂಷಿಸಿತು.


ಎಲೈ, ಮನುಷ್ಯನೇ, ದೇವರಿಗೆ ಎದುರಾಗಿ ಮಾತನಾಡಲು ನೀನು ಯಾರು? “ರೂಪಿಸಿರುವುದು ರೂಪಿಸಿದವನಿಗೆ, ‘ಏಕೆ ನನ್ನನ್ನು ಹೀಗೆ ರೂಪಿಸಿದೆ?’ ” ಎಂದು ಪ್ರಶ್ನಿಸಬಹುದೋ?


ಮನುಷ್ಯರ ಕೈಕೆಲಸವಾದ ಭೂಮಿಯ ಜನರ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ, ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.


ಆಗ ಅರಸನಿಗೆ ಹಸ್ತಕನಾದ ಅಧಿಕಾರಿಯು ದೇವರ ಮನುಷ್ಯನಿಗೆ ಉತ್ತರವಾಗಿ, “ಇಗೋ, ಯೆಹೋವ ದೇವರು ಆಕಾಶದಲ್ಲಿ ಕಿಟಕಿಗಳನ್ನು ಮಾಡಿದರೆ, ಈ ಕಾರ್ಯ ಸಂಭವಿಸುವುದೋ?” ಎಂದನು. ಅದಕ್ಕವನು, “ನೀನು ನಿನ್ನ ಕಣ್ಣುಗಳಿಂದ ಅದನ್ನು ನೋಡುವೆ, ಆದರೆ ಅದರಲ್ಲಿ ಯಾವುದನ್ನೂ ತಿನ್ನುವುದಿಲ್ಲ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು