Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:37 - ಕನ್ನಡ ಸಮಕಾಲಿಕ ಅನುವಾದ

37 ಅವರ ಹೃದಯವು ದೇವರ ಸಂಗಡ ಸ್ಥಿರವಾಗಿರಲಿಲ್ಲ. ಅವರು ದೇವರ ಒಡಂಬಡಿಕೆಯಲ್ಲಿ ನಂಬಿಗಸ್ತರಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅವರ ಹೃದಯವು ಆತನಲ್ಲಿ ನೆಲೆಗೊಳ್ಳಲಿಲ್ಲ; ಅವರು ಆತನ ನಿಬಂಧನೆಯನ್ನು ನಿಷ್ಠೆಯಿಂದ ಕೈಗೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ನೆಲೆಯಾಗಿರಲಿಲ್ಲ ಅವರ ಹೃದಯ ಆತನಲಿ I ಬದ್ಧರಾಗಿರಲಿಲ್ಲ ಆತನ ನಿಬಂಧನೆಗಳಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಅವರ ಹೃದಯವು ಆತನಲ್ಲಿ ನೆಲೆಗೊಳ್ಳಲಿಲ್ಲ; ಆತನ ನಿಬಂಧನೆಯನ್ನು ನಿಷ್ಠೆಯಿಂದ ಕೈಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಅವರ ಹೃದಯಗಳು ಆತನಲ್ಲಿ ನೆಲೆಗೊಂಡಿರಲಿಲ್ಲ. ಆತನ ಒಡಂಬಡಿಕೆಗೆ ಅವರು ನಂಬಿಗಸ್ತರಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:37
13 ತಿಳಿವುಗಳ ಹೋಲಿಕೆ  

ನಿನ್ನ ಹೃದಯವು ದೇವರ ದೃಷ್ಟಿಯಲ್ಲಿ ಸರಿಯಾಗಿಲ್ಲವಾದ್ದರಿಂದ ಈ ಸೇವೆಯಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ.


ಆಗ ಅವರು ತಮ್ಮ ಪಿತೃಗಳ ಹಾಗೆ ಹಟಮಾರಿ ಮತ್ತು ದಂಗೆಕೋರ ಸಂತತಿಯವರು ಆಗಿರುವುದಿಲ್ಲ, ಅವರ ಹೃದಯವು ದೇವರಿಗೆ ಸತ್ಯವಾಗಿರಲಿಲ್ಲ, ಅವರ ಆತ್ಮವು ದೇವರಲ್ಲಿ ನಂಬಿಗಸ್ತಿಕೆಯಿಂದಲೂ ಇರಲಿಲ್ಲ.


ಓ ದೇವರೇ, ಶುದ್ಧ ಹೃದಯವನ್ನು ನನ್ನಲ್ಲಿ ಸೃಷ್ಟಿಮಾಡಿರಿ, ಸ್ಥಿರವಾದ ಆತ್ಮವನ್ನು ನನ್ನಲ್ಲಿ ನವೀಕರಿಸಿರಿ.


ಅವರ ಹೃದಯವು ವಂಚಕವಾದದ್ದು. ಈಗ ಅವರು ಅಪರಾಧಗಳನ್ನು ಹೊರಬೇಕು. ಯೆಹೋವ ದೇವರು ಅವರ ಬಲಿಪೀಠಗಳನ್ನು ಕೆಡವಿ, ಅವರ ವಿಗ್ರಹಗಳನ್ನು ನಾಶಮಾಡುವರು.


ಅವರು ಮಹೋನ್ನತನಾದಾತನ ಕಡೆಗೆ ತಿರುಗಿಕೊಳ್ಳುವುದಿಲ್ಲ. ಅವರು ಮೋಸದ ಬಿಲ್ಲಿನ ಹಾಗೆ ಇದ್ದಾರೆ. ಅವರ ನಾಯಕರು ನಾಲಿಗೆಯ ಹುಚ್ಚು ಕೂಗಾಟದಿಂದ, ಖಡ್ಗದಿಂದ ಬೀಳುವರು. ಇದೇ ಈಜಿಪ್ಟ್ ದೇಶದಲ್ಲಿ ಅವರಿಗಿರುವ ನಿಂದೆಯಾಗಿದೆ.


ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ, ಅವರು ತಮ್ಮ ಹೃದಯದಿಂದ ನನ್ನನ್ನು ಕೂಗಲಿಲ್ಲ. ಧಾನ್ಯ ಮತ್ತು ದ್ರಾಕ್ಷಾರಸಗಳ ನಿಮಿತ್ತ ಅವರು ತಮ್ಮ ದೇವರುಗಳಿಗೆ ಮನವಿ ಮಾಡುವಾಗ ತಮ್ಮನ್ನು ತಾವು ಗಾಯಗೊಳಿಸಿಕೊಳ್ಳುತ್ತಾರೆ, ಆದರೆ ಅವರು ನನ್ನಿಂದ ದೂರವಿರುತ್ತಾರೆ.


ನಿಷ್ಕಳಂಕ ಹೃದಯದಿಂದ ನಾನು ನಿಮ್ಮ ತೀರ್ಪುಗಳನ್ನು ಪಾಲಿಸುವೆನು, ಅದರಿಂದ ನಾನು ನಾಚಿಕೆಗೆ ಗುರಿಯಾಗದಿರುವೆನು.


ನಾನು ಅವರ ಪಿತೃಗಳಿಗೆ ಪ್ರಮಾಣ ಮಾಡಿದಂಥ, ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ, ಅವರು ತಿಂದು ತೃಪ್ತರಾಗಿ ಕೊಬ್ಬಿದವರಾದಾಗ, ಅವರು ಅನ್ಯದೇವರುಗಳ ಕಡೆಗೆ ತಿರುಗಿಕೊಂಡು, ಅವುಗಳನ್ನು ಪೂಜಿಸಿ, ನನಗೆ ಕೋಪವನ್ನೆಬ್ಬಿಸಿ, ನನ್ನ ಒಡಂಬಡಿಕೆಯನ್ನು ಮೀರುವರು.


ಅದಕ್ಕೆ ಅವನು, “ಸರ್ವಶಕ್ತ ದೇವರಾದ ಯೆಹೋವ ದೇವರೇ, ಇಸ್ರಾಯೇಲರಿಗೋಸ್ಕರ ನಾನು ಬಹು ರೋಷವುಳ್ಳವನಾಗಿದ್ದೇನೆ. ಏಕೆಂದರೆ ಇಸ್ರಾಯೇಲರು ನಿಮ್ಮ ಒಡಂಬಡಿಕೆಯನ್ನು ಬಿಟ್ಟು, ನಿಮ್ಮ ಬಲಿಪೀಠಗಳನ್ನು ಕೆಡವಿ, ನಿಮ್ಮ ಪ್ರವಾದಿಗಳನ್ನು ಖಡ್ಗದಿಂದ ಕೊಂದುಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಲು ಹುಡುಕುತ್ತಿದ್ದಾರೆ,” ಎಂದನು.


ಈ ಒಡಂಬಡಿಕೆಯು ನಾನು ಇವರ ಪೂರ್ವಜರನ್ನು ಕೈಹಿಡಿದು ಈಜಿಪ್ಟ್ ದೇಶದಿಂದ ಕರೆದು ತಂದಾಗ, ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ, ಆ ನನ್ನ ಒಡಂಬಡಿಕೆಯನ್ನು ಅವರು ಮೀರಿ ನಡೆದರು,” ಎಂದು ಯೆಹೋವ ದೇವರು ಹೇಳುತ್ತಾರೆ.


“ ‘ನೀನು ನಾಚಿಕೆಯಿಲ್ಲದ ವೇಶ್ಯೆಯಂತೆ ವರ್ತಿಸಿದಾಗ ನಾನು ಕೋಪದಿಂದ ತುಂಬಿದೆನು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು