Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:39 - ಕನ್ನಡ ಸಮಕಾಲಿಕ ಅನುವಾದ

39 ಜನರು ಬರೀ ಮಾಂಸ ಮಾತ್ರದವರೂ ತಿರುಗಿಕೊಳ್ಳದೆ ಹೋಗುವ ಗಾಳಿಯೂ ಆಗಿದ್ದಾರೆಂದು ದೇವರು ಜ್ಞಾಪಕಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅವರು ಮಾಂಸಮಾತ್ರದವರೂ, ಶ್ವಾಸವನ್ನು ತಿರುಗಿ ಪಡೆಯದವರಾಗಿದ್ದಾರೆ ಎಂಬುದನ್ನು ನೆನಪುಮಾಡಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ನೆನೆದುಕೊಂಡನಾತ ಅವರು ಕೇವಲ ನರರೆಂದು I ತಿಳಿದುಕೊಂಡನು ಮರಳಿಬಾರದ ಉಸಿರವರೆಂದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಅವರು ಮಾಂಸಮಾತ್ರರೂ ತಿರಿಗಿ ಬಾರದ ಶ್ವಾಸಮಾತ್ರರೂ ಆಗಿದ್ದಾರೆಂಬದನ್ನು ನೆನಪುಮಾಡಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಅವರು ಕೇವಲ ಮನುಷ್ಯರೆಂಬುದನ್ನು ಆತನು ಜ್ಞಾಪಿಸಿಕೊಂಡನು. ಜನರಾದರೋ ಬೀಸಿದ ನಂತರ ಹಿಂತಿರುಗಿ ಬಾರದ ಗಾಳಿಯಂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:39
7 ತಿಳಿವುಗಳ ಹೋಲಿಕೆ  

ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.


ಓ ದೇವರೇ, ನನ್ನ ಜೀವವು ಕೇವಲ ಉಸಿರೆಂದು ನೆನಪುಮಾಡಿಕೊಳ್ಳಿರಿ. ನನ್ನ ಕಣ್ಣು ತಿರುಗಿ ಸಂತೋಷವನ್ನು ಕಾಣುವುದಿಲ್ಲ.


ಆಗ ಯೆಹೋವ ದೇವರು, “ನನ್ನ ಆತ್ಮವು ಮನುಷ್ಯರಲ್ಲಿ ನಿತ್ಯವಾಗಿ ಇರುವುದಿಲ್ಲ. ಏಕೆಂದರೆ ಅವರು ಮರ್ತ್ಯರೇ. ಆದರೂ ಅವರ ಆಯುಷ್ಯವು ನೂರ ಇಪ್ಪತ್ತು ವರ್ಷಗಳಾಗಿರುವುದು,” ಎಂದರು.


ನಾನು ನನ್ನ ಜೀವನವನ್ನು ದ್ವೇಷಿಸುತ್ತೇನೆ; ನಿರಂತರ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟುಬಿಡಿರಿ; ನನ್ನ ಬಾಳಿನ ದಿನಗಳಿಗೆ ಅರ್ಥವಿಲ್ಲ.


ನೀವು ಕುಂಬಾರನ ಮಣ್ಣಿನಂತೆ ನನ್ನನ್ನು ರೂಪಿಸಿದ್ದೀರಿ ಎಂದು ಜ್ಞಾಪಕಮಾಡಿಕೊಳ್ಳಿರಿ. ಈಗ ನೀವೇ ನನ್ನನ್ನು ಮಣ್ಣಿಗೆ ಸೇರಿಸುವಿರೋ?


ಮಾಂಸದಿಂದ ಹುಟ್ಟಿದ್ದು ಮಾಂಸವೇ, ದೇವರಾತ್ಮದಿಂದ ಹುಟ್ಟಿದವರು ಆತ್ಮವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು