Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:40 - ಕನ್ನಡ ಸಮಕಾಲಿಕ ಅನುವಾದ

40 ಎಷ್ಟೋ ಸಾರಿ ಜನರು ಮರುಭೂಮಿಯಲ್ಲಿ ದೇವರಿಗೆ ಬೇಸರಮಾಡಿದರು. ಕಾಡಿನಲ್ಲಿ ದೇವರನ್ನು ದುಃಖಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಅರಣ್ಯದಲ್ಲಿ ಅವರು ಎಷ್ಟೋ ಸಾರಿ ಅವಿಧೇಯರಾಗಿ, ಅಲ್ಲಿ ಆತನನ್ನು ನೋಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಎಷ್ಟೋ ಸಾರಿ ಅವಿಧೇಯರಾಗಿ ನಡೆದುಕೊಂಡರು ಅರಣ್ಯದಲಿ I ಎಷ್ಟೋ ಸಾರಿ ಆತನ ಮನನೋಯಿಸಿದರು ಮರುಭೂಮಿಯಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಅರಣ್ಯದಲ್ಲಿ ಅವರು ಎಷ್ಟೋ ಸಾರಿ ಅವಿಧೇಯರಾಗಿ ಅಲ್ಲಿ ಆತನನ್ನು ನೋಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಅಯ್ಯೋ, ಅವರು ಅರಣ್ಯದಲ್ಲಿ ಆತನಿಗೆ ವಿರುದ್ಧವಾಗಿ ಅನೇಕ ಸಲ ದಂಗೆ ಎದ್ದರು. ಆತನನ್ನು ಬಹಳವಾಗಿ ನೋಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:40
12 ತಿಳಿವುಗಳ ಹೋಲಿಕೆ  

ದೇವರ ಪವಿತ್ರಾತ್ಮರನ್ನು ದುಃಖ ಪಡಿಸಬೇಡಿರಿ. ಆ ಆತ್ಮನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ಆದರೆ ಅವರು ತಿರುಗಿಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಆದ್ದರಿಂದ ಆತನು ಬೇರೆಯಾಗಿ ಅವರಿಗೆ ಶತ್ರುವಾದನು. ಆತನೇ ಅವರಿಗೆ ವಿರೋಧವಾಗಿ ಯುದ್ಧಮಾಡಿದನು.


ಅದಕ್ಕೆ ಯೆಶಾಯನು, “ದಾವೀದನ ವಂಶದವರೇ! ಈಗ ಕೇಳಿರಿ, ಮನುಷ್ಯರ ತಾಳ್ಮೆಯನ್ನು ಪರೀಕ್ಷಿಸುವುದು ಸಾಕಾಗುವುದಿಲ್ಲವೇ? ನೀವು ನನ್ನ ದೇವರ ತಾಳ್ಮೆಯನ್ನು ಪರೀಕ್ಷಿಸುವಿರಾ?


ಅವರು ದೇವರ ಮಾತುಗಳನ್ನು ಎದುರಿಸಿ, ಮಹೋನ್ನತರ ಯೋಜನೆಯ ಬಗ್ಗೆ ಹೀನೈಯಿಸಿದ್ದರಿಂದ ಅವರಿಗೆ ಹಾಗಾಯಿತು.


ಆದರೆ ಜನರು ಇನ್ನೂ ದೇವರಿಗೆ ವಿರೋಧವಾಗಿ ಪಾಪಮಾಡಿ, ಮರುಭೂಮಿಯಲ್ಲಿ ಮಹೋನ್ನತರಿಗೆ ವಿರೋಧವಾಗಿ ಕೋಪವನ್ನೆಬ್ಬಿಸಿದರು.


ಆಗ ಯೆಹೋವ ದೇವರು ಮೋಶೆಗೆ, “ಈ ಜನರು ಎಷ್ಟರವರೆಗೆ ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ಮಾಡಿದ ಸಕಲ ಸೂಚಕಕಾರ್ಯಗಳನ್ನು ಕಣ್ಣಾರೆ ನೋಡಿಯೂ ನನ್ನನ್ನು ಎಷ್ಟು ಮಾತ್ರಕ್ಕು ನಂಬದೆ ಇರುವರು?


ನೀವು ಮರುಭೂಮಿಯಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದ್ದನ್ನು ಜ್ಞಾಪಕಮಾಡಿಕೊಳ್ಳಿರಿ. ಮರೆಯಬೇಡಿರಿ. ನೀವು ಈಜಿಪ್ಟ್ ದೇಶದಿಂದ ಹೊರಟ ದಿವಸ ಮೊದಲ್ಗೊಂಡು ಈ ಸ್ಥಳಕ್ಕೆ ಬರುವವರೆಗೆ ಯೆಹೋವ ದೇವರಿಗೆ ವಿರೋಧವಾಗಿ ತಿರುಗಿಬೀಳುತ್ತಿದ್ದೀರಿ.


ಆಗ ಅವರು ತಮ್ಮ ಪಿತೃಗಳ ಹಾಗೆ ಹಟಮಾರಿ ಮತ್ತು ದಂಗೆಕೋರ ಸಂತತಿಯವರು ಆಗಿರುವುದಿಲ್ಲ, ಅವರ ಹೃದಯವು ದೇವರಿಗೆ ಸತ್ಯವಾಗಿರಲಿಲ್ಲ, ಅವರ ಆತ್ಮವು ದೇವರಲ್ಲಿ ನಂಬಿಗಸ್ತಿಕೆಯಿಂದಲೂ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು