ಕೀರ್ತನೆಗಳು 78:49 - ಕನ್ನಡ ಸಮಕಾಲಿಕ ಅನುವಾದ49 ದೇವರು ನಾಶದ ದೇವದೂತರನ್ನು ಕಳುಹಿಸುತ್ತಾ ತಮ್ಮ ಬೇಸರದಿಂದಲೂ ದುಃಖದಿಂದಲೂ ಇಕ್ಕಟ್ಟುಗಳನ್ನೂ ಅವರ ಮೇಲೆ ಸುರಿಯಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಆತನು ಅವರ ಮೇಲೆ ತನ್ನ ಕೋಪರೌದ್ರಗಳನ್ನು, ಉಗ್ರಹಿಂಸೆಗಳನ್ನು ಸಂಹಾರಕ ದೂತಗಣವನ್ನೋ ಎಂಬಂತೆ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಸುರಿಸಿದನು ಕೋಪರೌದ್ರಗಳನು, ಉಗ್ರಹಿಂಸೆಗಳನು I ಕಳಿಸಿದನವರ ಮೇಲೆ ಸಂಹಾರಕ ದೂತಗಣಗಳನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ಆತನು ಅವರ ಮೇಲೆ ತನ್ನ ಕೋಪ ರೌದ್ರಗಳನ್ನೂ ಉಗ್ರಹಿಂಸೆಗಳನ್ನೂ ಸಂಹಾರದೂತಗಣವನ್ನೋ ಎಂಬಂತೆ ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 ಆತನು ಈಜಿಪ್ಟ್ ಜನರಿಗೆ ತನ್ನ ಭಯಂಕರವಾದ ಕೋಪವನ್ನು ತೋರಿದನು. ಆತನು ತನ್ನ ಸಂಹಾರ ದೂತರನ್ನು ಅವರಿಗೆ ವಿರೋಧವಾಗಿ ಕಳುಹಿಸಿದನು. ಅಧ್ಯಾಯವನ್ನು ನೋಡಿ |
ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ: ನಾನು ಬೇಟೆ ಹಿಡಿಯಲಿಕ್ಕೆ ಏಳುವ ದಿವಸದವರೆಗೂ ನನಗೆ ಕಾದುಕೊಳ್ಳಿರಿ.” ಏಕೆಂದರೆ ಜನಾಂಗಗಳನ್ನು ಕೂಡಿಸುವುದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವುದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ನನ್ನ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವುದಕ್ಕೂ ತೀರ್ಮಾನಿಸಿಕೊಂಡಿದ್ದೇನೆ. ಏಕೆಂದರೆ ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸಲಾಗುವುದು.