Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:50 - ಕನ್ನಡ ಸಮಕಾಲಿಕ ಅನುವಾದ

50 ತಮ್ಮ ಬೇಸರಕ್ಕೆ ದಾರಿಯನ್ನು ಮಾಡಿ, ಅವರನ್ನು ಪೂರ್ಣವಾಗಿ ದಂಡಿಸಿದರು. ಅವರ ಜೀವವನ್ನು ವ್ಯಾಧಿಗೆ ಒಪ್ಪಿಸಿಬಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ತನ್ನ ರೌದ್ರಕ್ಕೆ ಎಡೆಗೊಟ್ಟು ಅವರನ್ನು ಬದುಕಗೊಡಿಸದೆ, ಅವರ ಜೀವವನ್ನು ಮರಣವ್ಯಾಧಿಗೆ ಆಹುತಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ತೂಬೆತ್ತಿಬಿಟ್ಟನು ತನ್ನ ಕ್ರೋಧಕೆ I ತುತ್ತಾಗಿಸಿದನು ದೇಹಗಳನು ಜಾಡ್ಯಕೆ I ಅಡ್ಡಿತರಲಿಲ್ಲ ಆತನು ಅವರ ಮರಣಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ತನ್ನ ರೌದ್ರಕ್ಕೆ ಇಂಬುಗೊಟ್ಟು ಅವರನ್ನು ಬದುಕಗೊಡದೆ ಅವರ ಜೀವವನ್ನು ಮರಣವ್ಯಾಧಿಗೆ ಆಹುತಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಆತನು ತನ್ನ ಕೋಪವನ್ನು ತೋರಿಸಿದನು. ಅವರಲ್ಲಿ ಯಾರೂ ಬದುಕದಂತೆ ಆತನು ಮಾಡಿದನು. ಮರಣಕರವಾದ ರೋಗದಿಂದ ಅವರಿಗೆ ಸಾವನ್ನು ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:50
9 ತಿಳಿವುಗಳ ಹೋಲಿಕೆ  

ನನ್ನ ಕಣ್ಣುಗಳು ನಿನ್ನನ್ನು ಕನಿಕರಿಸುವುದೂ ಇಲ್ಲ. ನಾನು ನಿನ್ನನ್ನು ಬಿಡುವುದೂ ಇಲ್ಲ. ಆದರೆ ನಿನ್ನ ದುರ್ಮಾರ್ಗಗಳ ಪ್ರಕಾರ, ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ. ನಿನ್ನ ಅಸಹ್ಯ ಕಾರ್ಯಗಳು ನಿನ್ನ ಮಧ್ಯೆ ಇರುವುವು. ಆಗ ನಾನೇ ಯೆಹೋವ ದೇವರು ಎಂದು ನಿಮಗೆ ತಿಳಿಯುವುದು.’


ದೇವರು ತಮ್ಮ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೋಸ್ಕರ ಕ್ರಿಸ್ತ ಯೇಸುವನ್ನು ಕೊಟ್ಟ ಮೇಲೆ ನಮಗೆ ಉದಾರವಾಗಿ ಅವರೊಂದಿಗೆ ಎಲ್ಲವನ್ನು ಸಹ ಕೊಡದೆ ಇರುವರೇ?


ನಾವಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು,” ಎಂದು ಹೇಳಿದರು.


ಆದ್ದರಿಂದ ನಾನು ಸಹ ರೋಷದಿಂದಲೇ ಇರುವೆನು. ನಾನು ಅವರನ್ನು ಕನಿಕರಿಸುವುದೂ ಇಲ್ಲ, ನಾನು ಅವರನ್ನು ಉಳಿಸುವುದೂ ಇಲ್ಲ. ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರುಚಿದರೂ, ನಾನು ಅವರನ್ನು ಕೇಳಿಸಿಕೊಳ್ಳುವುದೂ ಇಲ್ಲ,” ಎಂದನು.


ನಾನು ಕಟಾಕ್ಷಿಸುವುದೂ ಇಲ್ಲ, ನಿನ್ನನ್ನು ಕನಿಕರಿಸುವುದೂ ಇಲ್ಲ. ನಿನ್ನ ನಡತೆಗಳಿಗೂ, ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕ ಹಾಗೆ ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ನಾನೇ ಹೊಡೆಯುತ್ತಿರುವ ಯೆಹೋವ ದೇವರೆಂದು ನಿಮಗೆ ತಿಳಿಯುವುದು.


ಆದಕಾರಣ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನಿಶ್ಚಯವಾಗಿ ನೀವು ನನ್ನ ಪರಿಶುದ್ಧ ಸ್ಥಳವನ್ನು ನಿಮ್ಮ ಎಲ್ಲಾ ಹೇಸಿಗೆಗಳಿಂದಲೂ, ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ, ನಾನೂ ಸಹ ನಿಮ್ಮನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವುದೂ ಇಲ್ಲ, ಕ್ಷಮಿಸುವುದೂ ಇಲ್ಲ.


ಆ ಗಾಳಿಯು ಕರುಣೆ ಇಲ್ಲದೆ ದುಷ್ಟರ ಮೇಲೆ ಬೀಸಲು, ಅವರು ಅದರ ಶಕ್ತಿಯಿಂದ ತಪ್ಪಿಸಿಕೊಳ್ಳಲು ಯತ್ನಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು