Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:55 - ಕನ್ನಡ ಸಮಕಾಲಿಕ ಅನುವಾದ

55 ದೇವರು ಜನಾಂಗಗಳನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲರನ್ನು ವಾಸಿಸುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಜನಾಂಗಗಳನ್ನು ಅವರ ಮುಂದಿನಿಂದ ಓಡಿಸಿಬಿಟ್ಟು, ಅವರ ದೇಶವನ್ನು ಇಸ್ರಾಯೇಲ್ ಗೋತ್ರಗಳಿಗೆ ಸ್ವತ್ತಾಗಿರುವಂತೆ ಹಂಚಿಕೊಟ್ಟು, ಆ ಜನಾಂಗಗಳ ಬಿಡಾರಗಳಲ್ಲಿ ಅವರನ್ನು ನೆಲೆಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

55 ಓಡಿಸಿದನು ಅವರಿಗೆದುರಾಗಿದ್ದ ಜನಾಂಗಗಳನು I ಸೊತ್ತಾಗಿ ಹಂಚಿದನು ಇಸ್ರಯೇಲರಿಗಾ ನಾಡನು I ನೆಲೆಗೊಳಿಸಿದನಾ ಜನಾಂಗದ ಬಿಡಾರದಲಿ ಇವರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ಜನಾಂಗಗಳನ್ನು ಅವರ ಮುಂಗಡೆಯಿಂದ ಓಡಿಸಿಬಿಟ್ಟು ಅವರ ದೇಶವನ್ನು ಇಸ್ರಾಯೇಲ್ ಗೋತ್ರಗಳಿಗೆ ಸ್ವಾಸ್ತ್ಯವಾಗಿರುವಂತೆ ಹಂಚಿಕೊಟ್ಟು ಆ ಜನಾಂಗಗಳ ಬೀಡಾರಗಳಲ್ಲಿ ಅವರನ್ನು ನೆಲೆಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ಆ ನಾಡಿನ ಜನಾಂಗಗಳನ್ನು ಆತನು ಬಲವಂತವಾಗಿ ಹೊರಗಟ್ಟಿದನು. ಆತನು ಇಸ್ರೇಲಿನ ಪ್ರತಿಯೊಂದು ಕುಲಕ್ಕೂ ಆ ನಾಡಿನಲ್ಲಿ ಪಾಲುಕೊಟ್ಟನು; ಆ ನಾಡಿನ ಮನೆಗಳಲ್ಲಿ ಅವರನ್ನು ನೆಲೆಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:55
14 ತಿಳಿವುಗಳ ಹೋಲಿಕೆ  

ನೀವು ನಿಮ್ಮ ಕೈಯಿಂದ ಜನಾಂಗಗಳನ್ನು ಹೊರಡಿಸಿ, ನಮ್ಮ ಪಿತೃಗಳನ್ನು ನೆಲೆಗೊಳಿಸಿದಿರಿ; ನೀವು ವೈರಿಗಳನ್ನು ತೆಗೆದುಹಾಕಿ, ನಮ್ಮ ಪಿತೃಗಳಿಗೆ ಸಮೃದ್ಧಿಯನ್ನುಂಟು ಮಾಡಿದಿರಿ.


ಈಗ ಈ ದೇಶವನ್ನು ಒಂಬತ್ತು ಗೋತ್ರಗಳಿಗೂ ಮನಸ್ಸೆ ಕುಲದ ಅರ್ಧ ಗೋತ್ರಕ್ಕೆ ಸೊತ್ತಾಗಿ ಪಾಲು ಮಾಡಿಕೊಡು,” ಎಂದು ಹೇಳಿದರು.


ನಾನು ಯೊರ್ದನ್ ನದಿ ಮೊದಲುಗೊಂಡು ಪಶ್ಚಿಮಕ್ಕಿರುವ ಮೆಡಿಟೆರೆನಿಯನ್ ಸಮುದ್ರದವರೆಗೂ ರಾಷ್ಟ್ರಗಳನ್ನು ಸೋಲಿಸಿ, ಉಳಿದ ಸಕಲ ನಾಡನ್ನು ನಿಮ್ಮ ಗೋತ್ರಗಳಿಗೆ ಸೊತ್ತಾಗಿ ಕೊಟ್ಟಿದ್ದೇನೆ.


ಯಾಜಕನಾದ ಎಲಿಯಾಜರನೂ ನೂನನ ಮಗ ಯೆಹೋಶುವನೂ ಇಸ್ರಾಯೇಲರ ಗೋತ್ರಗಳ ಪಿತೃಗಳ ಹಿರಿಯರೂ ಶೀಲೋವಿನಲ್ಲಿ ದೇವದರ್ಶನ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಸಮ್ಮುಖದಲ್ಲಿ ಚೀಟುಹಾಕಿ ಹಂಚಿಕೊಟ್ಟ ಬಾಧ್ಯತೆಗಳು ಇವೇ. ಹೀಗೆ ಅವರು ದೇಶವನ್ನು ಹಂಚಿಕೊಳ್ಳುವ ಕೆಲಸವನ್ನು ಪೂರೈಸಿದರು.


ನೀವು ದೇಶವನ್ನು ನಿಮ್ಮ ಗೋತ್ರಗಳ ಪ್ರಕಾರ ಚೀಟುಹಾಕಿ, ಸ್ವಾಧೀನಮಾಡಿ ಹಂಚಿಕೊಳ್ಳಬೇಕು. ಹೆಚ್ಚಾದವರಿಗೆ ಸೊತ್ತನ್ನು ಹೆಚ್ಚಿಸಿ, ಕಡಿಮೆಯಾದವರಿಗೆ ಸೊತ್ತನ್ನು ಕಡಿಮೆ ಮಾಡಬೇಕು. ಒಬ್ಬೊಬ್ಬನಿಗೆ ಚೀಟು ಎಲ್ಲಿ ಬೀಳುವುದೋ, ಅದೇ ಅವನಿಗಾಗಬೇಕು. ನಿಮ್ಮ ಪಿತೃಗಳ ಗೋತ್ರದ ಪ್ರಕಾರ ನೀವು ಸ್ವಾಧೀನಮಾಡಿಕೊಳ್ಳಬೇಕು.


ಈ ರೀತಿಯಾಗಿ ಯೆಹೋವ ದೇವರು ಅವರ ಪಿತೃಗಳಿಗೆ ಕೊಡುವೆನೆಂದು ಆಣೆಯಿಟ್ಟ ದೇಶವನ್ನೆಲ್ಲಾ ಇಸ್ರಾಯೇಲಿಗೆ ಕೊಟ್ಟರು. ಇಸ್ರಾಯೇಲರು ಅದನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸವಾಗಿದ್ದರು.


ನಮ್ಮ ಪಿತೃಗಳು ತಮ್ಮ ಖಡ್ಗದಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರಿಗೆ ಜಯ ತರಲಿಲ್ಲ; ಆದರೆ ನಿಮ್ಮ ಬಲಗೈಯೂ ನಿಮ್ಮ ತೋಳೂ ನಿಮ್ಮ ಮುಖದ ಪ್ರಕಾಶವೇ ಅವರಿಗೆ ಜಯವನ್ನು ತಂದಿತು. ಏಕೆಂದರೆ ಅವರನ್ನು ನೀವು ಪ್ರೀತಿಸಿದಿರಿ.


ಅವರೇ ಅವುಗಳಿಗೋಸ್ಕರ ಚೀಟು ಹಾಕಿದ್ದಾರೆ. ಅವರ ಕೈಯೇ ಅದನ್ನು ಗೆರೆ ಎಳೆದು, ಅವರಿಗೆ ಹಂಚಿಕೊಟ್ಟಿದೆ. ಅವು ಅದನ್ನು ನಿರಂತರಕ್ಕೂ ವಶಮಾಡಿಕೊಳ್ಳುವುವು. ಅವು ತಲತಲಾಂತರಕ್ಕೂ ಅದರಲ್ಲಿ ವಾಸವಾಗಿರುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು