Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:59 - ಕನ್ನಡ ಸಮಕಾಲಿಕ ಅನುವಾದ

59 ದೇವರು ಇದನ್ನು ಕಂಡಾಗ, ಬೇಸರಗೊಂಡು ಇಸ್ರಾಯೇಲನ್ನು ಪರಿಪೂರ್ಣವಾಗಿ ತಿರಸ್ಕರಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

59 ದೇವರು ಇದನ್ನು ತಿಳಿದು ರೌದ್ರನಾಗಿ ಇಸ್ರಾಯೇಲರನ್ನು ಸಂಪೂರ್ಣವಾಗಿ ನಿರಾಕರಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

59 ರಣರೌದ್ರನಾದನು ಇದನರಿತ ದೇವನು I ತೊರೆದನು ಅಸಹ್ಯದಿಂದ ಇಸ್ರಯೇಲರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

59 ದೇವರು ಇದನ್ನು ತಿಳಿದು ರೌದ್ರನಾಗಿ ಇಸ್ರಾಯೇಲ್ಯರನ್ನು ಅಸಹ್ಯದಿಂದ ನಿರಾಕರಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

59 ದೇವರು ಇದನ್ನು ತಿಳಿದು ಬಹು ಕೋಪಗೊಂಡನು, ಆತನು ಇಸ್ರೇಲರನ್ನು ಸಂಪೂರ್ಣವಾಗಿ ತಿರಸ್ಕರಿಸಿದನು!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:59
9 ತಿಳಿವುಗಳ ಹೋಲಿಕೆ  

ಆಗ ಯೆಹೋವ ದೇವರು ತಮ್ಮ ಜನರ ಮೇಲೆ ಬಹು ಬೇಸರಗೊಂಡರು. ದೇವರು ತಮ್ಮ ವಾರಸುದಾರರಾದ ಇಸ್ರಾಯೇಲರ ಮೇಲೆ ಅಸಂತೋಷಗೊಂಡು,


ಇದಲ್ಲದೆ, ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು. ಮಂದೆಯು ನನ್ನನ್ನು ಅಸಹ್ಯಪಡಿಸಿತು, ಮತ್ತು ಅವುಗಳಿಂದ ನನಗೆ ಬೇಸರವಾಯಿತು.


ಕರ್ತದೇವರು ತನ್ನ ಬಲಿಪೀಠವನ್ನು ತಳ್ಳಿಬಿಟ್ಟಿದ್ದಾರೆ. ತನ್ನ ಪರಿಶುದ್ಧ ಸ್ಥಳವನ್ನು ಅಸಹ್ಯ ಪಡಿಸಿದ್ದಾನೆ. ಆತನು ಅವಳ ಅರಮನೆಗಳ ಗೋಡೆಗಳನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ. ಪರಿಶುದ್ಧ ಹಬ್ಬದ ದಿನದಲ್ಲಿ ಮಾಡಿದ ಹಾಗೆ, ಅವರು ಯೆಹೋವ ದೇವರು ಆಲಯದಲ್ಲಿ ಶಬ್ದ ಮಾಡಿದ್ದಾರೆ.


ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದಲ್ಲಿ ಇದ್ದಾರೆ; ಯೆಹೋವ ದೇವರು ತಮ್ಮ ಪರಲೋಕ ಸಿಂಹಾಸನದಲ್ಲಿ ಇದ್ದಾರೆ. ಅವರು ಭೂಮಿಯಲ್ಲಿ ಪ್ರತಿಯೊಬ್ಬರನ್ನು ಗಮನಿಸುತ್ತಾರೆ; ಅವರ ಕಣ್ಣುಗಳು ಮಾನವರೆಲ್ಲರನ್ನು ಪರಿಶೋಧಿಸುತ್ತವೆ.


ಯೆಹೋವ ದೇವರು ಅದನ್ನು ನೋಡಿ ಬೇಸರದಿಂದ ತಮ್ಮ ಪುತ್ರಪುತ್ರಿಯರನ್ನು ದಂಡಿಸಿದರು.


ಆದರೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ಧಿಕ್ಕರಿಸದೆ, ಅವರನ್ನು ಅಸಹ್ಯಪಡದೆ, ಅವರನ್ನು ಸಂಪೂರ್ಣವಾಗಿ ನಾಶಮಾಡದೆಯೂ, ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು. ಏಕೆಂದರೆ ಅವರ ದೇವರಾಗಿರುವ ಯೆಹೋವ ದೇವರು ನಾನೇ.


ನಾನು ನಿಮ್ಮೆದುರಿನಲ್ಲಿಯೇ ಹೊರಗೆ ಹಾಕಿದ ಜನಾಂಗಗಳಂತೆ ನೀವು ನಡೆಯಬಾರದು. ಏಕೆಂದರೆ ಅವರು ಇಂಥವುಗಳನ್ನೆಲ್ಲಾ ಮಾಡಿದ್ದಾರೆ. ಆದಕಾರಣ ನಾನು ಅವರನ್ನು ಕಂಡು ಅಸಹ್ಯಗೊಂಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು