Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:71 - ಕನ್ನಡ ಸಮಕಾಲಿಕ ಅನುವಾದ

71 ತಮ್ಮ ಪ್ರಜೆಯಾದ ಯಾಕೋಬ್ಯರನ್ನೂ ತಮ್ಮ ಬಾಧ್ಯತೆಯಾದ ಇಸ್ರಾಯೇಲರನ್ನೂ ಮೇಯಿಸುವ ಕುರುಬನನ್ನಾಗಿ ದಾವೀದನನ್ನು ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

71 ಕುರಿಮರಿಗಳನ್ನು ರಕ್ಷಿಸುವ ಕೆಲಸದಿಂದ ಬಿಡಿಸಿ, ಅವನನ್ನು ತನ್ನ ಪ್ರಜೆಗಳಾದ ಯಾಕೋಬ್ಯರನ್ನು ಅಂದರೆ ತನ್ನ ಸ್ವತ್ತಾಗಿರುವ ಇಸ್ರಾಯೇಲರನ್ನು ಸಾಕುವುದಕ್ಕೆ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

71 ಕುರಿಮೇಯಿಸುವಾ ಕಸಬಿನಿಂದವನನು ಬಿಡಿಸಿದನು I ಸ್ವಪ್ರಜೆ ಯಕೋಬ್ಯರನು, ಸ್ವಜನ ಇಸ್ರಯೇಲರನು I ಪರಿಪಾಲಿಸುವಂತೆ ನೇಮಕ ಮಾಡಿದನು ಆತನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

71 ಮರೀಕುರಿಗಳನ್ನು ರಕ್ಷಿಸುವ ಕೆಲಸದಿಂದ ಬಿಡಿಸಿ ಅವನನ್ನು ತನ್ನ ಪ್ರಜೆಗಳಾದ ಯಾಕೋಬ್ಯರನ್ನು ಅಂದರೆ ತನ್ನ ಸ್ವಾಸ್ತ್ಯವಾಗಿರುವ ಇಸ್ರಾಯೇಲ್ಯರನ್ನು ಸಾಕುವದಕ್ಕೆ ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

71 ಆತನು ದಾವೀದನಿಗೆ ಕುರಿಗಳನ್ನು ಪರಿಪಾಲನೆ ಮಾಡುವ ಕೆಲಸದಿಂದ ತೆಗೆದುಹಾಕಿ ತನ್ನ ಜನರಾದ ಯಾಕೋಬ್ಯರನ್ನೂ ತನ್ನ ಆಸ್ತಿಯಾದ ಇಸ್ರೇಲರನ್ನೂ ಪರಿಪಾಲಿಸುವ ಉದ್ಯೋಗವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:71
19 ತಿಳಿವುಗಳ ಹೋಲಿಕೆ  

ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ, ನೀನು ದಳಪತಿಯಾಗಿ ಇಸ್ರಾಯೇಲನ್ನು ಹೊರಗೆ ನಡೆಸುವವನಾಗಿಯೂ ಒಳಗೆ ತರುವವನಾಗಿಯೂ ಇದ್ದವನು. ಆದ್ದರಿಂದ ಯೆಹೋವ ದೇವರು ನಿನಗೆ, ‘ನೀನು ನನ್ನ ಜನರಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವೆ ಎಂದು ಹೇಳಿದರು,’ ” ಎಂದರು.


ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ, ನೀನು ದಳಪತಿಯಾಗಿ ಇಸ್ರಾಯೇಲನ್ನು ಹೊರಗೆ ನಡೆಸುವವನಾಗಿಯೂ, ಒಳಗೆ ತರುವವನಾಗಿಯೂ ಇದ್ದವನು. ಆದ್ದರಿಂದ ನಿನ್ನ ದೇವರಾದ ಯೆಹೋವ ದೇವರು ನಿನಗೆ, ‘ನೀನು ನನ್ನ ಜನರಾದ ಇಸ್ರಾಯೇಲರ ನಾಯಕನೂ, ಪಾಲಕನೂ ಆಗಿರುವೆ,’ ಎಂದು ವಾಗ್ದಾನ ಮಾಡಿದ್ದು ನಿಮ್ಮನ್ನು ಕುರಿತೇ,” ಎಂದು ಹೇಳಿ ವಂದಿಸಿದರು.


ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲಾತ್ಕಾರದಿಂದಲ್ಲ, ಆದರೆ ದೇವರ ಪ್ರಕಾರ ಇಷ್ಟಪೂರ್ವಕವಾಗಿಯೂ ನೀಚ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿಚಾರಣೆ ಮಾಡಿರಿ.


ಅವರು ತಮ್ಮ ಮಂದೆಯನ್ನು ಕುರುಬನಂತೆ ಮೇಯಿಸುವರು. ಕುರಿಮರಿಗಳನ್ನು ಕೂಡಿಸಿ, ಅವುಗಳನ್ನು ತಮ್ಮ ಎದೆಗಪ್ಪಿಕೊಳ್ಳುವರು, ಎಳೆಯ ಮರಿಗಳನ್ನು ಮೆಲ್ಲಗೆ ನಡಿಸುವರು.


ನಿಮ್ಮ ಜನರನ್ನು ರಕ್ಷಿಸಿರಿ; ನಿಮ್ಮ ವಾರಸುದಾರರನ್ನು ಆಶೀರ್ವದಿಸಿರಿ; ನೀವು ಅವರ ಕುರುಬ ಆಗಿದ್ದು; ಅವರನ್ನು ಯಾವಾಗಲೂ ಮುನ್ನಡೆಸಿರಿ.


ಅದಕ್ಕೆ ಯಾಕೋಬನು ಅವನಿಗೆ, “ಮಕ್ಕಳು ಎಳೆಯ ಪ್ರಾಯದವರಿದ್ದಾರೆ, ಇದಲ್ಲದೆ ಎಳೆಯ ದನಕುರಿಗಳು ನನ್ನ ಬಳಿಯಲ್ಲಿರುವುದು ನನ್ನ ಒಡೆಯನಿಗೆ ತಿಳಿದಿದೆ. ಒಂದು ದಿನ ಹೆಚ್ಚಾಗಿ ಅವುಗಳನ್ನು ನಡೆಸಿದರೆ, ಎಲ್ಲಾ ಮಂದೆಯು ಸತ್ತು ಹೋದಾವು.


“ಈಗ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, ‘ಸೇನಾಧೀಶ್ವರ ಯೆಹೋವ ದೇವರು ನಿನಗೆ ತಿಳಿಸುವುದೇನೆಂದರೆ: ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡು, ನನ್ನ ಜನರಾದ ಇಸ್ರಾಯೇಲರ ಮೇಲೆ ನಾಯಕನಾಗಿರುವಂತೆ ನೇಮಿಸಿದೆನು.


ಆಗ ಸಮುಯೇಲನು ಎಣ್ಣೆಕುಪ್ಪಿಯಿಂದ ಅವನ ತಲೆಯ ಮೇಲೆ ಸುರಿದು, ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವ ದೇವರು ನಿನ್ನನ್ನು ತಮ್ಮ ಆಸ್ತಿಯಾಗಿರುವ ಜನರ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾರೆ.


“ ‘ಯೆಹೂದ ಪ್ರಾಂತದಲ್ಲಿರುವ ಬೇತ್ಲೆಹೇಮೇ, ಯೆಹೂದದ ಅಧಿಪತಿಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಅಲ್ಪವಲ್ಲ. ಏಕೆಂದರೆ ನನ್ನ ಪ್ರಜೆಗಳಾದ ಇಸ್ರಾಯೇಲನ್ನು ಪರಿಪಾಲಿಸಲು ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಬರುವನು,’” ಎಂದು ಹೇಳಿದರು.


ಹಾಗೆ ನಾವು ಇಸ್ರಾಯೇಲಿನಲ್ಲಿ ಸಮಾಧಾನವುಳ್ಳವರೂ, ನಂಬಿಗಸ್ತರೂ ಆಗಿದ್ದೇವೆ. ಇಸ್ರಾಯೇಲಿನ ತಾಯಿಯಂತಿರುವ ನಮ್ಮ ಪಟ್ಟಣವನ್ನು ಹಾಳುಮಾಡಲು ಯೆಹೋವ ದೇವರ ಸೊತ್ತನ್ನು ಕಬಳಿಸುವುದಕ್ಕೆ ಏಕೆ ಪ್ರಯತ್ನಿಸುತ್ತಿದ್ದೀರಿ?” ಎಂದಳು.


ದಾವೀದನು ಜನರನ್ನು ಹೊಡೆಯುವ ದೂತನನ್ನು ನೋಡಿದಾಗ, ಅವನು ಯೆಹೋವ ದೇವರಿಗೆ, “ಇಗೋ, ನಾನೇ ಪಾಪಮಾಡಿದೆನು. ಕುರುಬನಂತಿರುವ ನಾನೇ ಕೆಟ್ಟದ್ದನ್ನು ಮಾಡಿದೆನು. ಆದರೆ ಕುರಿಗಳಂತಿರುವ ಇವರು ಮಾಡಿದ್ದೇನು? ನಿಮ್ಮ ಹಸ್ತವು ನನಗೆ ವಿರೋಧವಾಗಿಯೂ ನನ್ನ ಕುಟುಂಬದ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು