Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 79:2 - ಕನ್ನಡ ಸಮಕಾಲಿಕ ಅನುವಾದ

2 ನಿಮ್ಮ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ನಿಮ್ಮ ಭಕ್ತರ ಮಾಂಸವನ್ನು ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರು ನಿನ್ನ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೆ ಆಹಾರಮಾಡಿದರು; ನಿನ್ನ ಭಕ್ತರ ದೇಹವನ್ನು ಕಾಡುಮೃಗಗಳಿಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅರ್ಪಿಸಿದರು ನಿನ್ನ ದಾಸರಾ ಶವಗಳನು ಗಗನ ಪಕ್ಷಿಗಳಿಗೆ I ಹಾಕಿದರು ನಿನ್ನ ಭಕ್ತರ ಮಾಂಸವನು ಕಾಡುಮೃಗಗಳಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವರು ನಿನ್ನ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೆ ಆಹಾರಮಾಡಿದರು; ನಿನ್ನ ಭಕ್ತರ ದೇಹಮಾಂಸವನ್ನು ಕಾಡುಮೃಗಗಳಿಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವರು ನಿನ್ನ ಸೇವಕರ ಸತ್ತದೇಹಗಳನ್ನು ಕ್ರೂರ ಪಕ್ಷಿಗಳಿಗೆ ಆಹಾರ ಮಾಡಿದರು. ಅವರು ನಿನ್ನ ಭಕ್ತರ ದೇಹಗಳನ್ನು ಕ್ರೂರ ಪ್ರಾಣಿಗಳಿಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 79:2
7 ತಿಳಿವುಗಳ ಹೋಲಿಕೆ  

ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುವು. ಯಾರೂ ಅವುಗಳನ್ನು ಬೆದರಿಸುವುದಿಲ್ಲ.


ಅವರ ಶತ್ರುಗಳ ಕೈಯಲ್ಲಿಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ ಒಪ್ಪಿಸುವೆನು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗುವುವು.


“ಅವರು ಮರಣಕರವಾದ ಬೇನೆಗಳಿಂದ ಸಾಯುವರು. ಅವರಿಗೋಸ್ಕರ ಗೋಳಾಟ ಆಗುವುದಿಲ್ಲ. ಅವರಿಗೆ ಸಮಾಧಿಯಾಗುವುದಿಲ್ಲ. ಭೂಮಿಯ ಮೇಲೆ ಅವರು ಗೊಬ್ಬರವಾಗುವರು. ಖಡ್ಗದಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುವು.”


ನಿಮ್ಮ ಹೆಣಗಳು ಆಕಾಶದ ಎಲ್ಲಾ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುದು. ಯಾರೂ ಅವುಗಳನ್ನು ಬೆದರಿಸಿ ಓಡಿಸುವುದಿಲ್ಲ.


“ ‘ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು. ಅವರ ಶತ್ರುಗಳ ಮುಂದೆಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಿಂದಲೂ ಅವರನ್ನು ಖಡ್ಗದಿಂದ ಬೀಳುವಂತೆ ಮಾಡುವೆನು. ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು.


“ನಾನು ಅವರಿಗೆ ವಿರೋಧವಾಗಿ ನಾಲ್ಕು ವಿಧವಾದ ವಿನಾಶಗಳನ್ನು ಎಂದರೆ, ಕೊಲ್ಲುವುದಕ್ಕೆ ಖಡ್ಗವನ್ನೂ, ಹರಿಯುವುದಕ್ಕೆ ನಾಯಿಗಳನ್ನು, ನುಂಗುವುದಕ್ಕೂ ನಾಶಮಾಡುವುದಕ್ಕೂ ಆಕಾಶದ ಪಕ್ಷಿಗಳನ್ನೂ, ಕಾಡುಮೃಗಗಳನ್ನೂ ನೇಮಿಸುತ್ತೇನೆ ಎಂಬುದು ಯೆಹೋವ ದೇವರಾದ ನನ್ನ ಮಾತು.


“ನಾನು ಮನುಷ್ಯರ ಮೇಲೆ ಇಕ್ಕಟ್ಟು ತರಿಸುವೆನು. ಅವರು ಕುರುಡರ ಹಾಗೆ ತಡಕುವರು. ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದಾರೆ. ಅವರ ರಕ್ತವು ಧೂಳಿನಂತೆಯೂ ಅವರ ಮಾಂಸವು ಗೊಬ್ಬರದಂತೆಯೂ ಸುರಿದಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು