Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 79:5 - ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರೇ ಎಷ್ಟರವರೆಗೆ ಕೋಪಗೊಂಡಿರುವಿರಿ? ಸತತವೂ ನೀವು ಕೋಪದಿಂದಿರುವಿರೋ? ಎಷ್ಟರವರೆಗೆ ನಿಮ್ಮ ರೋಷವು ಬೆಂಕಿಯಂತೆ ಉರಿಯುವುದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನೇ, ಇನ್ನೆಷ್ಟರವರೆಗೆ ಕೋಪವುಳ್ಳವನಾಗಿರುವಿ? ನಿನ್ನ ರೋಷಾಗ್ನಿಯು ಸದಾಕಾಲವೂ ಉರಿಯುತ್ತಲಿರಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿನ್ನ ಕೋಪತಾಪ ಹೇ ಪ್ರಭೂ, ಇನ್ನೆಷ್ಟರವರೆಗೆ? I ಉರಿಯುತ್ತಿರಬೇಕೆ ಸದಾ ನಿನ್ನ ರೋಷಾಗ್ನಿಯ ಧಗೆ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನೇ, ಇನ್ನೆಷ್ಟರವರೆಗೆ ಕೋಪವುಳ್ಳವನಾಗಿರುವಿ? ನಿನ್ನ ರೋಷಾಗ್ನಿಯು ಸದಾಕಾಲವೂ ಉರಿಯುತ್ತಲೇ ಇರಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೇವರೇ, ಇನ್ನೆಷ್ಟರವರೆಗೆ ನೀನು ನಮ್ಮ ಮೇಲೆ ಕೋಪದಿಂದಿರುವೆ? ನಿನ್ನ ಕೋಪಾಗ್ನಿಯು ಉರಿಯುತ್ತಲೇ ಇರಬೇಕೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 79:5
21 ತಿಳಿವುಗಳ ಹೋಲಿಕೆ  

ಯೆಹೋವ ದೇವರೇ, ಇನ್ನೂ ಎಷ್ಟರವರೆಗೆ? ಸದಾಕಾಲಕ್ಕೆ ನೀವು ಅಡಗಿಕೊಳ್ಳುವಿರಾ? ನಿಮ್ಮ ಬೇಸರವು ಬೆಂಕಿಯ ಹಾಗೆ ಉರಿಯುವುದು ಎಷ್ಟರವರೆಗೆ?


ಎಂದೆಂದಿಗೂ ನಮ್ಮ ಮೇಲೆ ಖಂಡಿಸುವಿರೋ? ತಲತಲಾಂತರಕ್ಕೂ ನಿಮ್ಮ ಬೇಸರ ಬೆಳೆಸುವಿರೋ?


ದೇವರೇ, ಸದಾಕಾಲಕ್ಕೆ ನಮ್ಮನ್ನು ತಳ್ಳಿಬಿಟ್ಟದ್ದೇಕೆ? ನಿಮ್ಮ ಮೇವಿನ ಕುರಿಮಂದೆಯ ವಿಷಯವಾಗಿ ಬೇಸರಗೊಳ್ಳುವುದು ಏಕೆ?


ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ: ನಾನು ಬೇಟೆ ಹಿಡಿಯಲಿಕ್ಕೆ ಏಳುವ ದಿವಸದವರೆಗೂ ನನಗೆ ಕಾದುಕೊಳ್ಳಿರಿ.” ಏಕೆಂದರೆ ಜನಾಂಗಗಳನ್ನು ಕೂಡಿಸುವುದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವುದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ನನ್ನ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವುದಕ್ಕೂ ತೀರ್ಮಾನಿಸಿಕೊಂಡಿದ್ದೇನೆ. ಏಕೆಂದರೆ ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸಲಾಗುವುದು.


ಅಂಥವನನ್ನು ಯೆಹೋವ ದೇವರು ಉಳಿಸುವುದಿಲ್ಲ, ಆಗಲೇ ಯೆಹೋವ ದೇವರ ಕೋಪವೂ, ರೋಷವೂ ಆ ಮನುಷ್ಯನನ್ನು ಸುಡುವುದು. ಈ ಗ್ರಂಥದಲ್ಲಿ ಬರೆದಿರುವ ಶಾಪವೆಲ್ಲಾ ಅವನ ಮೇಲೆ ಬರುವುದು. ಯೆಹೋವ ದೇವರು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವರು.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಿಶ್ಚಯವಾಗಿ ನನ್ನ ರೋಷದ ಬೆಂಕಿಯಿಂದ ಇತರ ಜನಾಂಗಗಳಲ್ಲಿ ಉಳಿದವರಿಗೂ ಎದೋಮಿನವರೆಲ್ಲರಿಗೂ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶವನ್ನು ತಮ್ಮ ಸೊತ್ತಾಗಿ ಮಾಡಿಕೊಂಡಿದ್ದಾರೆ. ಅವರು ಅದರ ಹುಲ್ಲುಗಾವಲನ್ನು ಸಹ ಸೂರೆಮಾಡಬೇಕೆಂದಿದ್ದಾರೆ.’


ಸರ್ವಶಕ್ತ ದೇವರಾಗಿರುವ ಯೆಹೋವ ದೇವರೇ, ಎಷ್ಟರವರೆಗೆ ನಿಮ್ಮ ಜನರ ಪ್ರಾರ್ಥನೆಗೆ ವಿರೋಧವಾಗಿ ಬೇಸರಗೊಳ್ಳುವಿರಿ?


ಅವರು ಮಹಾಶಬ್ದದಿಂದ, “ಒಡೆಯನೇ, ಪವಿತ್ರನೇ, ಸತ್ಯವಂತನೇ ನಮ್ಮ ರಕ್ತ ಸುರಿಸಿದ ಲೋಕನಿವಾಸಿಗಳಿಗೆ ತೀರ್ಪನ್ನೂ ಪ್ರತಿದಂಡನೆಯನ್ನೂ ಮಾಡಲು ಇನ್ನೆಷ್ಟು ಸಮಯ ಬೇಕು?” ಎಂದು ಕೂಗಿದರು.


ಯೆಹೋವ ದೇವರ ರೌದ್ರದಿನದಂದು ಅವರ ಬೆಳ್ಳಿಯಾದರೂ ಅವರ ಬಂಗಾರವಾದರೂ ಅವರನ್ನು ರಕ್ಷಿಸಲಾರವು.” ಅವರ ಅಸೂಯೆಯ ಬೆಂಕಿಯು ದೇಶವನ್ನೆಲ್ಲಾ ನುಂಗುವುದು. ಏಕೆಂದರೆ ದೇಶದ ನಿವಾಸಿಗಳನ್ನೆಲ್ಲಾ ಬೇಗ ನಿರ್ಮೂಲ ಮಾಡಿಬಿಡುವರು.


ಪಾಪಗಳನ್ನು ಮತ್ತು ಅಪರಾಧಗಳನ್ನು ಮನ್ನಿಸುವವನೂ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ಲಕ್ಷಿಸದವನೂ, ನಿನ್ನ ಹಾಗೆ ಇರುವ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವುದಿಲ್ಲ. ಏಕೆಂದರೆ ನೀವು ಕರುಣೆಯಲ್ಲಿ ಸಂತೋಷಪಡುತ್ತೀರಿ.


ಯೆಹೋವ ದೇವರೇ, ಅತ್ಯಧಿಕವಾಗಿ ಬೇಸರಗೊಳ್ಳಬೇಡ. ಎಂದೆಂದಿಗೂ ಪಾಪವನ್ನು ಜ್ಞಾಪಕ ಮಾಡಬೇಡ. ನೋಡಿರಿ, ನಾವು ಬೇಡುತ್ತೇವೆ, ದೃಷ್ಟಿ ಇಡಿರಿ. ನಾವೆಲ್ಲರೂ ನಿನ್ನ ಜನರೇ.


ಅವರು ಯಾವಾಗಲೂ ತಪ್ಪುಹುಡುಕುವವರಲ್ಲ; ದೇವರು ತಮ್ಮ ಕೋಪವನ್ನು ಎಂದೆಂದಿಗೂ ಕೂಡಿಟ್ಟುಕೊಳ್ಳುವವರು ಅಲ್ಲ;


ಏಕೆಂದರೆ ನನ್ನ ರೋಷ ಬೆಂಕಿಯಂತಿದೆ, ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ, ಅದರ ಫಲವನ್ನೂ ತಿಂದು ಬಿಟ್ಟು, ಬೆಟ್ಟಗಳ ಅಸ್ತಿವಾರವನ್ನು ದಹಿಸುವುದು.


ಅನ್ಯದೇವತೆಗಳಿಂದ ದೇವರಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ದೇವರಿಗೆ ಕೋಪವನ್ನು ಎಬ್ಬಿಸಿದರು.


ಯೆಹೋವ ದೇವರೇ, ನನ್ನ ಕಡೆಗೆ ಹಿಂದಿರುಗಿರಿ, ನನ್ನನ್ನು ಬಿಡುಗಡೆ ಮಾಡಿರಿ; ನಿಮ್ಮ ಒಡಂಬಡಿಕೆಯ ಪ್ರೀತಿಯ ನಿಮಿತ್ತ ನನ್ನನ್ನು ರಕ್ಷಿಸಿರಿ.


ರೋದನವೇ ನಮ್ಮ ಅನ್ನವಾಗುವಂತೆಯೂ ಅಶ್ರುಧಾರೆಯೇ ಪಾನವಾಗುವಂತೆಯೂ ಅನುಮತಿಸಿದ್ದೀರಿ.


ನನ್ನ ಆಯುಸ್ಸು ಎಷ್ಟು ಕಡಿಮೆ ಎಂದು ಜ್ಞಾಪಕಮಾಡಿಕೊಳ್ಳಿರಿ. ನಿರ್ಮಿಸಿದ ಎಲ್ಲಾ ಮನುಷ್ಯರೂ ವ್ಯರ್ಥವಾಗಿದ್ದಾರೆ.


ಯೆಹೋವ ದೇವರೇ, ನೀವು ನಮ್ಮ ಮೇಲೆ ಮಿತಿಮೀರಿ ಸಿಟ್ಟುಗೊಂಡಿರುವಿರೋ? ನಮ್ಮನ್ನು ಸಂಪೂರ್ಣವಾಗಿ ಕೈಬಿಟ್ಟಿರುವಿರೋ?


ಆಗ ಯೆಹೋವ ದೇವರ ದೂತನು ಉತ್ತರಕೊಟ್ಟು: “ಸರ್ವಶಕ್ತರಾದ ಯೆಹೋವ ದೇವರೇ, ನೀವು ಯೆರೂಸಲೇಮನ್ನೂ, ಯೆಹೂದದ ಪಟ್ಟಣಗಳನ್ನೂ ಎಷ್ಟರವರೆಗೆ ಕನಿಕರಿಸದೆ ಇರುವಿರಿ? ಅವುಗಳ ಮೇಲೆ ಈ ಎಪ್ಪತ್ತು ವರ್ಷಗಳು ಸಿಟ್ಟು ಮಾಡಿದ್ದೀರಲ್ಲವೋ?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು