ಕೀರ್ತನೆಗಳು 79:6 - ಕನ್ನಡ ಸಮಕಾಲಿಕ ಅನುವಾದ6 ನಿಮ್ಮನ್ನು ಸ್ವೀಕರಿಸದ ಜನಾಂಗಗಳ ಮೇಲೆಯೂ, ನಿಮ್ಮ ಹೆಸರನ್ನು ಕರೆಯದ ರಾಜ್ಯಗಳ ಮೇಲೆಯೂ ನಿಮ್ಮ ಕೋಪವನ್ನು ಸುರಿಸಿಬಿಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಿನ್ನನ್ನು ಅರಿಯದ ಮ್ಲೇಚ್ಛರ ಮೇಲೆಯೂ, ನಿನ್ನ ನಾಮವನ್ನು ಉಚ್ಚರಿಸದ ರಾಜ್ಯಗಳ ಮೇಲೆಯೂ, ನಿನ್ನ ರೌದ್ರವನ್ನು ಸುರಿದುಬಿಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸುರಿ ರೌದ್ರವನು ನಿನ್ನನರಿಯದಾ ಮ್ಲೇಚ್ಛರ ಮೇಲೆ I ನಿನ್ನ ಶ್ರೀನಾಮವನು ಉಚ್ಚರಿಸದಾ ರಾಜ್ಯಗಳ ಮೇಲೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಿನ್ನನ್ನು ಅರಿಯದ ಮ್ಲೇಚ್ಫರ ಮೇಲೆಯೂ ನಿನ್ನ ನಾಮವನ್ನು ಉಚ್ಚರಿಸದ ರಾಜ್ಯಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಿನ್ನನ್ನು ಅರಿಯದ ಜನಾಂಗಗಳ ಮೇಲೆಯೂ ನಿನ್ನ ಹೆಸರನ್ನು ಆರಾಧಿಸದ ಜನಾಂಗಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು. ಅಧ್ಯಾಯವನ್ನು ನೋಡಿ |
ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ: ನಾನು ಬೇಟೆ ಹಿಡಿಯಲಿಕ್ಕೆ ಏಳುವ ದಿವಸದವರೆಗೂ ನನಗೆ ಕಾದುಕೊಳ್ಳಿರಿ.” ಏಕೆಂದರೆ ಜನಾಂಗಗಳನ್ನು ಕೂಡಿಸುವುದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವುದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ನನ್ನ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವುದಕ್ಕೂ ತೀರ್ಮಾನಿಸಿಕೊಂಡಿದ್ದೇನೆ. ಏಕೆಂದರೆ ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸಲಾಗುವುದು.