ಕೀರ್ತನೆಗಳು 79:9 - ಕನ್ನಡ ಸಮಕಾಲಿಕ ಅನುವಾದ9 ನಮ್ಮ ರಕ್ಷಕರಾಗಿರುವವರೇ, ನಮ್ಮ ದೇವರೇ, ನಿಮ್ಮ ಹೆಸರಿನ ಘನದ ನಿಮಿತ್ತ ನಮಗೆ ಸಹಾಯಮಾಡಿರಿ. ನಿಮ್ಮ ಹೆಸರಿಗೆ ತಕ್ಕಂತೆ ನಮ್ಮನ್ನು ಬಿಡಿಸಿರಿ. ನಮ್ಮ ಪಾಪಗಳನ್ನು ತೊಳೆದುಬಿಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಮ್ಮನ್ನು ರಕ್ಷಿಸುವ ದೇವರೇ, ನಿನ್ನ ನಾಮದ ಘನತೆಗೋಸ್ಕರ ಸಹಾಯಮಾಡು; ನಿನ್ನ ಹೆಸರಿಗೆ ತಕ್ಕಂತೆ ರಕ್ಷಿಸಿ ನಮ್ಮ ಪಾಪಗಳನ್ನು ಅಳಿಸಿಬಿಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ದೇವಾ, ಮುಕ್ತಿದಾತ, ನೆರವಾಗು ನಿನ್ನ ನಾಮಮಹಿಮೆಯ ನಿಮಿತ್ತ I ಪಾಪಗಳನು ಅಳಿಸಿ ನಮ್ಮನುದ್ಧರಿಸು ನಿನ್ನ ನಾಮದ ಪ್ರಯುಕ್ತ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಮ್ಮನ್ನು ರಕ್ಷಿಸುವ ದೇವರೇ, ನಿನ್ನ ನಾಮದ ಘನತೆಗೋಸ್ಕರ ಸಹಾಯಮಾಡು; ನಿನ್ನ ಹೆಸರಿಗೆ ತಕ್ಕಂತೆ ರಕ್ಷಿಸಿ ನಮ್ಮ ಪಾಪಗಳನ್ನು ಅಳಿಸಿಬಿಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಮ್ಮ ರಕ್ಷಕನಾದ ದೇವರೇ, ನಮಗೆ ಸಹಾಯಮಾಡು! ನಿನ್ನ ಹೆಸರಿನ ಘನತೆಗಾಗಿ ನಮಗೆ ಸಹಾಯಮಾಡು! ನಮ್ಮನ್ನು ರಕ್ಷಿಸಿ ನಿನ್ನ ಹೆಸರಿನ ಘನತೆಗೋಸ್ಕರ ನಮ್ಮ ಪಾಪಗಳನ್ನು ಅಳಿಸಿಬಿಡು. ಅಧ್ಯಾಯವನ್ನು ನೋಡಿ |
ಆಗ ಆಸನು ತನ್ನ ದೇವರಾದ ಯೆಹೋವ ದೇವರನ್ನು ಪ್ರಾರ್ಥಿಸಿ, “ಯೆಹೋವ ದೇವರೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯ ಕೊಡುವುದು ನಿಮಗೆ ಏನೂ ಅಲ್ಲ. ನಮ್ಮ ದೇವರಾದ ಯೆಹೋವ ದೇವರೇ, ನಮಗೆ ಸಹಾಯಮಾಡಿರಿ. ಏಕೆಂದರೆ ನಾವು ನಿಮ್ಮ ಮೇಲೆ ಆತುಕೊಂಡಿದ್ದೇವೆ. ನಿಮ್ಮ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ. ಯೆಹೋವ ದೇವರೇ, ನೀವೇ ನಮ್ಮ ದೇವರು. ಮನುಷ್ಯನು ನಿಮ್ಮೆದುರಿನಲ್ಲಿ ಬಲಗೊಳ್ಳದಿರಲಿ,” ಎಂದನು.