Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 80:1 - ಕನ್ನಡ ಸಮಕಾಲಿಕ ಅನುವಾದ

1 ಮಂದೆಯಂತೆ ಯೋಸೇಫ್ಯರನ್ನು ನಡೆಸುವ ಇಸ್ರಾಯೇಲರ ಕುರುಬ ಆಗಿರುವ ದೇವರೇ, ಕಿವಿಗೊಡಿರಿ. ಕೆರೂಬಿಗಳ ಮಧ್ಯದಲ್ಲಿ ಆಸೀನವಾಗಿರುವ ದೇವರೇ ಪ್ರಕಾಶಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕಿವಿಗೊಟ್ಟು ಆಲಿಸೋ, ಇಸ್ರಯೇಲರ ಮೇಷಪಾಲನೇ I ಜೋಸೆಫನ ವಂಶಜರನು ಕುರಿಹಿಂಡಂತೆ ಕರೆತಂದವನೇ I ವಿರಾಜಿಸು, ಕೆರೂಬಿಯರ ಮಧ್ಯೆ ಆಸೀನನಾದವನೇ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲ್ಯರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲನ್ನು ಕಾಯುವ ಕುರುಬನೇ, ಯೋಸೇಫನ ಜನರನ್ನು ಕುರಿಮಂದೆಯಂತೆ ನಡೆಸುವಾತನೇ, ಕೆರೂಬಿ ದೂತರ ಮೇಲೆ ರಾಜನಂತೆ ಕುಳಿತಿರುವಾತನೇ, ಕಿವಿಗೊಡು. ನಾವು ನಿನ್ನನ್ನು ನೋಡುವಂತಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 80:1
37 ತಿಳಿವುಗಳ ಹೋಲಿಕೆ  

ಪಟ್ಟಣವನ್ನು ಬೆಳಗಿಸಲು ಸೂರ್ಯನಾಗಲಿ, ಚಂದ್ರನಾಗಲಿ ಅವಶ್ಯವಿಲ್ಲ. ಏಕೆಂದರೆ ದೇವರ ಮಹಿಮೆಯೇ ಅದಕ್ಕೆ ಬೆಳಕಾಗಿತ್ತು. ಕುರಿಮರಿಯಾದಾತನೇ ಅದರ ದೀಪವು.


ಮೋಶೆ ಆರೋನರ ಕೈಯಿಂದ ನಿಮ್ಮ ಜನರನ್ನು ಮಂದೆಯ ಹಾಗೆ ನಡೆಸಿದಿರಿ.


ಪರಿಪೂರ್ಣ ಸೌಂದರ್ಯದ ಚೀಯೋನಿನಿಂದ ದೇವರು ಪ್ರಕಾಶಿಸುತ್ತಿದ್ದಾರೆ.


ಯೆಹೋವ ದೇವರು ಆಳಿಕೆ ಮಾಡುತ್ತಾರೆ. ರಾಷ್ಟ್ರಗಳು ನಡುಗಲಿ. ಅವರು ಕೆರೂಬಿಗಳ ಮಧ್ಯದಲ್ಲಿ ಕೂತಿದ್ದಾರೆ. ಭೂಮಿಯು ಕದಲಲಿ.


ಏಕೆಂದರೆ, “ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ.” ಆದರೆ ಈಗ ನೀವು ತಿರುಗಿ ನಿಮ್ಮ ಆತ್ಮಗಳ ಕುರುಬ ಹಾಗೂ ಸಭಾಧ್ಯಕ್ಷರೂ ಆಗಿರುವ ಕ್ರಿಸ್ತ ಯೇಸುವಿನ ಬಳಿಗೆ ಬಂದಿದ್ದೀರಿ.


ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.


ಆ ಕೆರೂಬಿಗಳ ನಡುವೆ ವಾಸವಾಗಿರುವ ಸೇನಾಧೀಶ್ವರ ಯೆಹೋವ ದೇವರ ಹೆಸರಿನಿಂದ ಕರೆಯಲಾದ ದೇವರ ಮಂಜೂಷವನ್ನು ತೆಗೆದುಕೊಂಡು ಬರಲು ತನ್ನ ಸಂಗಡ ಇದ್ದ ಸಮಸ್ತ ಜನರನ್ನು ಕರೆದುಕೊಂಡು, ಯೆಹೂದದ ಬಾಲಾ ಎಂಬಲ್ಲಿಗೆ ಹೊರಟನು.


ಕೆರೂಬಿಗಳ ಮಧ್ಯದಲ್ಲಿರುವ ಸೇನಾಧೀಶ್ವರ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬರಲು ಶೀಲೋವಿಗೆ ಜನರನ್ನು ಕಳುಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ, ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು.


ಕುರಿ ಹಿಂಡಿಗೆ ಮಹಾಕುರುಬ ಆಗಿರುವ ನಮ್ಮ ಕರ್ತ ಯೇಸುವನ್ನು ನಿತ್ಯಒಡಂಬಡಿಕೆಯ ರಕ್ತದ ಮೂಲಕ ಸಮಾಧಾನದ ದೇವರು ಸತ್ತವರೊಳಗಿಂದ ಜೀವಂತವಾಗಿ ಬರಮಾಡಿದರು.


ಆಗ ಯೆಹೋವ ದೇವರ ಮಹಿಮೆಯು ಕೆರೂಬಿಗಳ ಮೇಲಿನಿಂದ ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಿಗೆ ಹೋಯಿತು. ಆಲಯವು ಮೇಘದಿಂದ ತುಂಬಿತ್ತು. ಆಗ ಯೆಹೋವ ದೇವರ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು.


ಆಗ ಆತನು ಪೂರ್ವಕಾಲದ ದಿವಸಗಳನ್ನೂ, ಮೋಶೆಯನ್ನೂ, ಅವನ ಜನರನ್ನೂ ಜ್ಞಾಪಕಮಾಡಿಕೊಂಡು “ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಸುರಕ್ಷಿತವಾಗಿ ಮೇಲಕ್ಕೆ ಬರಮಾಡಿದವನು ಎಲ್ಲಿ? ಅವರ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ?


ಏಳು, ಪ್ರಕಾಶಿಸು. ಏಕೆಂದರೆ ನಿನ್ನ ಮೇಲೆ ಬೆಳಕು ಬಂತು, ಯೆಹೋವ ದೇವರ ಮಹಿಮೆಯು ನಿನ್ನ ಮೇಲೆ ಉದಯವಾಯಿತು.


ಸರ್ವಶಕ್ತರಾದ ದೇವರೇ, ನೀವು ನಮ್ಮನ್ನು ಪುನಃ ಸ್ಥಾಪಿಸಿರಿ. ನಿಮ್ಮ ಮುಖ ನಮ್ಮ ಮೇಲೆ ಪ್ರಕಾಶಿಸುವಂತೆ ಮಾಡಿರಿ. ಆಗ ನಾವು ರಕ್ಷಣೆ ಹೊಂದುವೆವು.


ದೇವರೇ, ನಮ್ಮನ್ನು ಪುನಃ ಸ್ಥಾಪಿಸಿರಿ. ನಿಮ್ಮ ಮುಖ ನಮ್ಮ ಮೇಲೆ ಪ್ರಕಾಶಿಸುವಂತೆ ಮಾಡಿರಿ. ಆಗ ನಾವು ರಕ್ಷಣೆ ಹೊಂದುವೆವು.


ಪ್ರಧಾನ ಕುರುಬ ಆಗಿರುವವರು ಪ್ರತ್ಯಕ್ಷರಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.


“ನಾನೇ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ತಿಳಿದಿದ್ದೇನೆ. ನನ್ನ ಕುರಿಗಳು ನನ್ನನ್ನು ತಿಳಿದಿವೆ.


“ಈಗ, ನಮ್ಮ ದೇವರೇ, ಈ ನಿಮ್ಮ ಸೇವಕನ ಪ್ರಾರ್ಥನೆ ಮತ್ತು ವಿಜ್ಞಾಪನೆಗಳನ್ನು ಕೇಳಿರಿ. ಕರ್ತದೇವರೇ, ಹಾಳಾಗಿರುವ ನಿಮ್ಮ ಪರಿಶುದ್ಧ ಸ್ಥಳವನ್ನು ನಿಮ್ಮ ನಿಮಿತ್ತವಾಗಿ ಅನುಗ್ರಹದಿಂದ ನೋಡಿರಿ.


ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವಮಾರ್ಗವಾಗಿ ಬಂದಿತು ಮತ್ತು ಅವರ ಧ್ವನಿಯು ಹರಿಯುವ ನೀರಿನ ಘರ್ಜನೆಯಂತಿತ್ತು; ಭೂಮಿಯು ಅವರ ಮಹಿಮೆಯಿಂದ ಪ್ರಕಾಶಿಸುತ್ತಿತ್ತು.


ಆ ಜೀವಿಗಳ ಮಧ್ಯೆ ಅದ್ಭುತ ಕಾಂತಿಯೊಂದು ಉರಿಯುವ ಕೆಂಡಗಳೋ, ಪಂಜುಗಳೋ ಎಂಬಂತೆ ಕಾಣಿಸಿತು. ಅದು ಆ ಜೀವಿಗಳ ನಡುವೆ ಓಲಾಡುತ್ತಿತ್ತು. ಆ ಉರಿ ತೇಜೋಮಯವಾಗಿತ್ತು. ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು.


ಅವರು ತಮ್ಮ ಮಂದೆಯನ್ನು ಕುರುಬನಂತೆ ಮೇಯಿಸುವರು. ಕುರಿಮರಿಗಳನ್ನು ಕೂಡಿಸಿ, ಅವುಗಳನ್ನು ತಮ್ಮ ಎದೆಗಪ್ಪಿಕೊಳ್ಳುವರು, ಎಳೆಯ ಮರಿಗಳನ್ನು ಮೆಲ್ಲಗೆ ನಡಿಸುವರು.


ಯೆಹೋವ ದೇವರೇ, ನೀವು ಪ್ರತೀಕಾರ ಸಲ್ಲಿಸುವ ದೇವರಾಗಿದ್ದೀರಿ. ಮುಯ್ಯಿ ತೀರಿಸುವವರು ನೀವೇ; ದೇವರೇ, ನ್ಯಾಯ ತೀರಿಸುವಂತೆ ನಿಮ್ಮನ್ನು ಪ್ರಕಟಿಸಿಕೊಳ್ಳಿರಿ.


ಸರ್ವಶಕ್ತರಾದ ದೇವರೇ, ನೀವು ನಮ್ಮನ್ನು ಪುನಃ ಸ್ಥಾಪಿಸಿರಿ. ನಿಮ್ಮ ಮುಖ ನಮ್ಮ ಮೇಲೆ ಪ್ರಕಾಶಿಸುವಂತೆ ಮಾಡಿರಿ. ಆಗ ನಾವು ರಕ್ಷಣೆ ಹೊಂದುವೆವು.


ಆಗ ದೇವರು ಯೋಸೇಫನ ಗುಡಾರವನ್ನು ತಿರಸ್ಕರಿಸಿ, ಎಫ್ರಾಯೀಮನ ಗೋತ್ರವನ್ನು ಆಯ್ದುಕೊಳ್ಳದೆ,


ಆದರೆ ದೇವರು ಮಂದೆಯ ಹಾಗೆ ತಮ್ಮ ಜನರನ್ನು ಹೊರತಂದು, ಕುರಿಗಳನ್ನು ನಡೆಸುವಂತೆ ಮರುಭೂಮಿಯಲ್ಲಿ ಅವರನ್ನು ನಡೆಸಿದರು.


ದೇವರೇ, ನನ್ನನ್ನು ರಕ್ಷಿಸಿರಿ. ಏಕೆಂದರೆ, ಪ್ರವಾಹ ಕುತ್ತಿಗೆಯ ವರೆಗೆ ಬಂದಿದೆ.


ದೇವರೇ, ನನ್ನನ್ನು ಕೈಬಿಟ್ಟಿದ್ದೀರಾ? ನನ್ನನ್ನು ಚದರಿಸಿದ್ದೀರಾ? ನಮ್ಮ ಕಡೆಗೆ ಬೇಸರಗೊಂಡರೂ ನಮ್ಮನ್ನು ಪುನಃ ಸ್ಥಾಪಿಸಿರಿ.


ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡಿರಿ, ನನ್ನ ವಿಜ್ಞಾಪನೆಗೆ ನಿಮ್ಮನ್ನು ಮರೆಮಾಡಿಕೊಳ್ಳಬೇಡಿರಿ.


ನನ್ನ ಹೃದಯವು ಸೊಗಸಾದ ವಿಷಯದಿಂದ ಮಿಡಿಯುತ್ತಿದೆ. ಮಹಾರಾಜನನ್ನು ಕುರಿತು ನಾನು ರಚಿಸುವೆನು ಗೀತಾಂಜಲಿ. ನನ್ನ ನಾಲಿಗೆಯು ನಿಪುಣ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ.


ಯೆಹೋವ ದೇವರೇ, ನನ್ನ ಮಾತುಗಳಿಗೆ ಕಿವಿಗೊಡಿರಿ, ನನ್ನ ಪ್ರಲಾಪವನ್ನು ಲಕ್ಷ್ಯಕ್ಕೆ ತಂದುಕೊಳ್ಳಿರಿ.


ದೇವರೇ, ನಿಮ್ಮ ಕೈಕೃತಿಯಾಗಿರುವ ನನ್ನನ್ನು ಜಜ್ಜುವುದೂ ನಿಮಗೆ ಮೆಚ್ಚಿಕೆಯೋ? ನೀವು ನನ್ನನ್ನು ಅಲಕ್ಷ್ಯ ಮಾಡುವಿರೋ? ನೀವು ದುಷ್ಟರ ಯೋಜನೆಯನ್ನು ಮೆಚ್ಚುವಿರೋ?


ಇದಲ್ಲದೆ ಹಿಜ್ಕೀಯನು ಯೆಹೋವ ದೇವರ ಮುಂದೆ ಪ್ರಾರ್ಥನೆಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನೀವೊಬ್ಬರೇ ಭೂಮಿಯ ಸಮಸ್ತ ರಾಜ್ಯಗಳಿಗೆ ದೇವರಾಗಿದ್ದೀರಿ. ನೀವೇ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ.


“ಯೆಹೋವ ದೇವರು ಸೀನಾಯಿ ಬೆಟ್ಟದಿಂದ ಬಂದು, ಸೇಯೀರಿನಿಂದ ಅವರ ಮೇಲೆ ಉದಯಿಸಿದರು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದರು. ದೇವರು ದಕ್ಷಿಣದ ತಮ್ಮ ಪರ್ವತ ಶ್ರೇಣಿಯಿಂದ ಲಕ್ಷಾಂತರ ಪರಿಶುದ್ಧರ ಸಂಗಡ ಬಂದರು.


ದೇವಾಧಿ ದೇವರಾದ ಯೆಹೋವ ದೇವರು ತಾವೇ ಮಾತನಾಡುತ್ತಿದ್ದಾರೆ, ಸೂರ್ಯೋದಯದಿಂದ ಅಸ್ತಮಾನದವರೆಗೂ ಇರುವ ಭೂಲೋಕದವರು ಕರೆಯುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು