Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 80:17 - ಕನ್ನಡ ಸಮಕಾಲಿಕ ಅನುವಾದ

17 ನಿಮ್ಮ ಬಲಗಡೆಯಲ್ಲಿರುವಾತನ ಮೇಲೆ ನಿಮ್ಮ ಹಸ್ತವಿರಲಿ. ನಿಮಗಾಗಿ ಆ ನರಪುತ್ರನನ್ನು ಎಬ್ಬಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಿನ್ನ ಬಲಗೈ ಉದ್ಧರಿಸಿದ ಪುರುಷನೂ, ನೀನು ನಿನಗೋಸ್ಕರ ಸಾಕಿ ಬೆಳೆಸಿದ ನರಪುತ್ರನೂ ಆಗಿರುವವನನ್ನು, ನಿನ್ನ ಹಸ್ತದಿಂದ ಹಿಡಿದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಕೈ ಹಿಡಿದು ಕಾಪಾಡು ನಿನ್ನ ಬಲಗೈ ಉದ್ಧರಿಸಿದ ಪುರುಷನನು I ನಿನಗೆಂದೇ ನೀ ಸಾಕಿ ಬೆಳೆಸಿದಾ ವರಪುತ್ರನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಿನ್ನ ಬಲಗೈ ಉದ್ಧರಿಸಿದ ಪುರುಷನೂ ನೀನು ನಿನಗೋಸ್ಕರ ಸಾಕಿ ಬೆಳಸಿದ ನರಪುತ್ರನೂ ಆಗಿರುವವನನ್ನು ಹಸ್ತದಿಂದ ಹಿಡಿದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನೀನು ಆರಿಸಿಕೊಂಡಿರುವಾತನ ಕಡೆಗೆ ಕೈಚಾಚಿ ಸಹಾಯ ಮಾಡು. ನೀನು ಬೆಳೆಸಿದ ಜನರ ಕಡೆಗೆ ಕೈಚಾಚು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 80:17
8 ತಿಳಿವುಗಳ ಹೋಲಿಕೆ  

ಯೆಹೋವ ದೇವರು ನನ್ನ ಕರ್ತ ಆಗಿರುವವರಿಗೆ ಹೇಳಿದ್ದೇನೆಂದರೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರಿ.”


ನನ್ನ ಕೈ ಅವನನ್ನು ಪರಿಪಾಲಿಸುವುದು; ನನ್ನ ಭುಜವು ಅವನನ್ನು ಬಲಪಡಿಸುವುದು.


ನಿಮ್ಮ ಬಲಗೈ ನೆಟ್ಟ ಸಸಿಯನ್ನೂ ನೀವು ನಿಮಗೆ ಬೆಳಸಿಕೊಂಡ ಬಳ್ಳಿಯನ್ನೂ ಪರಾಮರಿಸಿರಿ.


ನಮ್ಮ ಉಲ್ಲಂಘನೆಗಳಿಗಾಗಿ ಆತನು ತಿವಿತಕ್ಕೆ ಒಳಗಾದನು. ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಿಹೋದನು. ನಮಗೆ ಸಮಾಧಾನವನ್ನು ತಂದ ದಂಡನೆಯು ಆತನ ಮೇಲಿತ್ತು. ಆತನ ಗಾಯಗಳಿಂದ ನಮಗೆ ಗುಣವಾಯಿತು.


ಸೌಂದರ್ಯವಾದ ಒಳ್ಳೆಯ ಹಣ್ಣುಳ್ಳ ಹಸುರಾದ ಓಲಿವ್ ಗಿಡವೆಂದು ಯೆಹೋವ ದೇವರು ನಿನಗೆ ಹೆಸರಿಟ್ಟರು. ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸುವನು. ಅದರ ಕೊಂಬೆಗಳು ಮುರಿದು ಹೋಗುವುವು.


‘ಇಸ್ರಾಯೇಲ್ ದೇಶಕ್ಕೆ ಹೇಳಬೇಕಾದದ್ದೇನೆಂದರೆ, ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮಗೆ ವಿರೋಧವಾಗಿದ್ದೇನೆ. ನನ್ನ ಖಡ್ಗವನ್ನು ಅದರ ಒರೆಯಿಂದ ಹೊರಗೆ ತೆಗೆದು, ನಿನ್ನೊಳಗಿರುವ ನೀತಿವಂತರನ್ನೂ, ದುಷ್ಟರನ್ನೂ ಕಡಿದುಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು