Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 80:6 - ಕನ್ನಡ ಸಮಕಾಲಿಕ ಅನುವಾದ

6 ನಮ್ಮ ನೆರೆಯವರ ವಿವಾದಕ್ಕೆ ನಮ್ಮನ್ನು ಗುರಿಮಾಡಿದ್ದೀರಿ. ನಮ್ಮ ಶತ್ರುಗಳು ನಮ್ಮನ್ನು ಅಪಹಾಸ್ಯ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಮ್ಮನ್ನು ಸುತ್ತಣ ಜನಾಂಗಗಳ ದಿಕ್ಕಾರಕ್ಕೂ, ಶತ್ರುಗಳ ನಿಂದೆಗೂ ಗುರಿಯನ್ನಾಗಿ ಮಾಡಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೆರೆಯವರಿಗೆ ನಮ್ಮನು ಕಲಹ ಕಾರಣವಾಗಿಸಿದೆ I ಶತ್ರುಗಳ ಅಪಹಾಸ್ಯಕೆ ನಮ್ಮನು ಗುರಿಪಡಿಸಿದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸುತ್ತಣ ಜನಾಂಗಗಳಿಗೆ ನಮ್ಮನ್ನು ಕಚ್ಚಾಟದ ಹೇತುವನ್ನಾಗಿಯೂ ಶತ್ರುನಿಂದೆಗೆ ಗುರಿಯನ್ನಾಗಿಯೂ ಮಾಡಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸುತ್ತಲಿನ ಜನಾಂಗಗಳಿಗೆ ನಮ್ಮನ್ನು ಯುದ್ಧಕ್ಕೆ ಕಾರಣವನ್ನಾಗಿ ಮಾಡಿರುವೆ. ಶತ್ರುಗಳು ನಮ್ಮನ್ನು ನೋಡಿ ನಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 80:6
11 ತಿಳಿವುಗಳ ಹೋಲಿಕೆ  

ನಾವು ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.


ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಪೀಡಿಸಿದ್ದರಿಂದ, ಇದರ ವಿಷಯವಾಗಿ ಭೂನಿವಾಸಿಗಳು ಸಂತೋಷಿಸಿ, ಹರ್ಷಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.


ಆದ್ದರಿಂದ ಇಸ್ರಾಯೇಲ್ ಪರ್ವತಗಳೇ, ನೀವು ಸಾರ್ವಭೌಮ ಯೆಹೋವ ದೇವರ ವಾಕ್ಯವನ್ನು ಕೇಳಿರಿ, ಪರ್ವತಗಳಿಗೂ ಬೆಟ್ಟಗಳಿಗೂ ನದಿಗಳಿಗೂ ಕಣಿವೆಗಳಿಗೂ ಹಾಳಾದ ಒಣಭೂಮಿಗೂ ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೂ


ಏಕೆಂದರೆ ನಿನ್ನೊಳಗೆ ಇಸ್ರಾಯೇಲೂ ಹಾಸ್ಯಕ್ಕಾಗಿರಲಿಲ್ಲವೋ? ಅದು ಕಳ್ಳರೊಳಗೆ ಸಿಕ್ಕಿತೇನೋ, ಏಕೆಂದರೆ ನೀನು ಅದರ ವಿಷಯ ಯಾವಾಗ ಮಾತನಾಡಿದಂದಿನಿಂದ ತಲೆ ಅಲ್ಲಾಡಿಸಿದ್ದೀಯಲ್ಲಾ.


ನನ್ನ ತಾಯಿಯೇ, ನನಗೆ ಕಷ್ಟ! ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ, ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? ನಾನು ಬಡ್ಡಿಗೆ ಸಾಲ ಕೊಡಲಿಲ್ಲ. ಆದರೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ.


ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದೆ? ಯಾರಿಗೆ ವಿರೋಧವಾಗಿ ನಿನ್ನ ಧ್ವನಿಯನ್ನು ಎತ್ತಿದ್ದೀ? ನಿನ್ನ ಕಣ್ಣುಗಳು ಗರ್ವದಿಂದ ನೋಡಿದ್ದು ಯಾರನ್ನು? ಇಸ್ರಾಯೇಲಿನ ಪರಿಶುದ್ಧ ದೇವರಿಗೆ ವಿರೋಧವಾಗಿಯಲ್ಲವೇ?


“ ‘ಹಾಗಾದರೆ, ಈಗ ನೀನು ಅಸ್ಸೀರಿಯದ ಅರಸನಾದ ನನ್ನ ಯಜಮಾನನೊಂದಿಗೆ ಒಪ್ಪಂದ ಮಾಡಿಕೋ, ಆಗ ನಿನಗೆ ಎರಡು ಸಾವಿರ ಕುದುರೆಸವಾರರನ್ನು ಬಳಸಲು ಸಾಮರ್ಥ್ಯವಿದ್ದರೆ ನಾನು ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆ.


ಅಲ್ಲಿ ಅವರು ಸಂಭ್ರಮವಾಗಿರುವಾಗ, “ನಮ್ಮ ಮುಂದೆ ಮನೋರಂಜನೆಗಾಗಿ ಸಂಸೋನನನ್ನು ಕರೆದುಕೊಂಡು ಬನ್ನಿರಿ,” ಎಂದರು. ಅವರು ಸಂಸೋನನನ್ನು ಸೆರೆಮನೆಯಿಂದ ಕರೆತಂದಾಗ, ಅವನು ಅವರ ಮುಂದೆ ವಿನೋದ ಮಾಡಬೇಕಾಯಿತು. ಅವರು ಅವನನ್ನು ಸ್ತಂಭಗಳ ನಡುವೆ ನಿಲ್ಲಿಸಿದ್ದರು.


ಜನಸಮೂಹದೊಂದಿಗೆ ನಾನು ಉತ್ಸಾಹದಿಂದಲೂ ಸ್ತೋತ್ರದಿಂದಲೂ ಹಬ್ಬವನ್ನಾಚರಿಸಲು ದೇವರ ಆಲಯಕ್ಕೆ ಹೋಗಿದ್ದನ್ನು ನೆನಪಿಸಿಕೊಳ್ಳುತ್ತಾ ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು