Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 81:1 - ಕನ್ನಡ ಸಮಕಾಲಿಕ ಅನುವಾದ

1 ನಮ್ಮ ಬಲವಾಗಿರುವ ದೇವರಿಗೆ ಗಟ್ಟಿಯಾದ ಧ್ವನಿಯಿಂದ ಹಾಡಿರಿ; ಯಾಕೋಬನ ದೇವರಿಗೆ ಜಯಧ್ವನಿ ಗೈಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಮಗೆ ಬಲಪ್ರದನಾಗಿರುವ ದೇವರಿಗೆ ಉತ್ಸಾಹಧ್ವನಿ ಮಾಡಿರಿ; ಯಾಕೋಬ್ಯರ ದೇವರಿಗೆ ಜಯಘೋಷಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹಾಡಿರಿ ಶುಭಗೀತೆಯನು ಬಲಪ್ರದನಾದ ದೇವನಿಗೆ I ಮಾಡಿರಿ ಜಯಜಯಕಾರವನು ಯಕೋಬ ಕುಲದೇವನಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಮಗೆ ಬಲಪ್ರದನಾಗಿರುವ ದೇವರಿಗೆ ಉತ್ಸಾಹ ಧ್ವನಿಮಾಡಿರಿ; ಯಾಕೋಬ್ಯರ ದೇವರಿಗೆ ಜಯಘೋಷಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಮಗೆ ಬಲಪ್ರದನಾಗಿರುವ ದೇವರಿಗೆ ಸಂತಸದಿಂದ ಹಾಡಿರಿ. ಇಸ್ರೇಲಿನ ದೇವರಿಗೆ ಆನಂದಘೋಷ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 81:1
16 ತಿಳಿವುಗಳ ಹೋಲಿಕೆ  

ಸಮಸ್ತ ದೇಶಗಳೇ, ದೇವರಿಗೆ ಉತ್ಸಾಹಧ್ವನಿ ಮಾಡಿರಿ.


ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಯಾಕೋಬನ ವಿಷಯ ಸಂತೋಷದಿಂದ ಹಾಡಿ, ಮೂಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ. ಸಾರಿರಿ. ಸ್ತುತಿಸಿರಿ. ‘ಯೆಹೋವ ದೇವರೇ, ನಿನ್ನ ಜನರನ್ನೂ, ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು,’ ಎಂದು ಹೇಳಿರಿ.


ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ; ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ.


ನಮ್ಮ ಕರ್ತ ಆಗಿರುವ ಯೆಹೋವ ದೇವರೇ, ನಿಮ್ಮ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ವೈಭವವುಳ್ಳದ್ದಾಗಿದೆ! ನೀವು ನಿಮ್ಮ ಮಹಿಮೆಯನ್ನು ಆಕಾಶಗಳಲ್ಲಿ ಸ್ಥಾಪಿಸಿದ್ದೀರಿ.


ನನಗೆ ಶಕ್ತಿನೀಡುವ ಕ್ರಿಸ್ತ ಯೇಸುವಿನ ಮೂಲಕ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ಯೆಹೋವ ದೇವರು ನನ್ನ ಬಲವೂ, ನನ್ನ ಗುರಾಣಿಯೂ ಆಗಿದ್ದಾರೆ; ನನ್ನ ಹೃದಯವು ಅವರಲ್ಲಿ ಭರವಸೆ ಇಟ್ಟದ್ದರಿಂದ ನಾನು ಸಹಾಯ ಹೊಂದಿದೆನು; ನನ್ನ ಹೃದಯವು ಬಹಳವಾಗಿ ಉತ್ಸಾಹಪಡುವುದು; ನನ್ನ ಕೀರ್ತನೆಯಿಂದ ಅವರನ್ನು ಕೊಂಡಾಡುವೆನು.


‘ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಆಗಿದ್ದೇನೆ,’ ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿತರಿಗೆ ದೇವರಾಗಿದ್ದಾರೆ ಹೊರತು ಸತ್ತವರಿಗಲ್ಲ,” ಎಂದು ಹೇಳಿದರು.


ಜನಾಂಗಗಳು ಸಂತೋಷಪಟ್ಟು ಉತ್ಸಾಹದಿಂದ ಹಾಡಲಿ. ಏಕೆಂದರೆ ನೀವು ಜನರನ್ನು ನೀತಿಯಿಂದ ನ್ಯಾಯತೀರಿಸಿ, ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀರಿ.


“ಇಗೋ, ದೇವರನ್ನು ತನ್ನ ಬಲವನ್ನಾಗಿ ಮಾಡಿಕೊಳ್ಳದೆ, ತನ್ನ ಅಧಿಕ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡು ಇತರರನ್ನು ನಾಶಮಾಡಿದ ಮನುಷ್ಯನು ಇವನೇ!”


‘ನಿನ್ನ ಸಹೋದರರ ಅಪರಾಧವನ್ನೂ ಅವರ ಪಾಪವನ್ನೂ ಮನ್ನಿಸು,’ ಎಂಬುದಾಗಿ ಯೋಸೇಫನಿಗೆ ಹೇಳಿರಿ, ಎಂದು ತಿಳಿಸಿದ್ದಾನೆ. ಹೀಗಿರುವುದರಿಂದ ನಿನ್ನ ತಂದೆಯ ದೇವರ ದಾಸರಾದ ನಾವು ಮಾಡಿದ ಅಪರಾಧವನ್ನು ದಯಮಾಡಿ ಕ್ಷಮಿಸು,” ಎಂದು ತಿಳಿಸಿದರು. ಈ ಸಂದೇಶ ಅವನಿಗೆ ಬಂದಾಗ, ಅವನು ಅತ್ತನು.


ಗೇರ್ಷೋಮನ ಪುತ್ರರ ಹೆಸರುಗಳು: ಲಿಬ್ನೀ, ಶಿಮ್ಮೀ.


ದೇವಾಧಿ ದೇವರಾದ ಯೆಹೋವ ದೇವರು ತಾವೇ ಮಾತನಾಡುತ್ತಿದ್ದಾರೆ, ಸೂರ್ಯೋದಯದಿಂದ ಅಸ್ತಮಾನದವರೆಗೂ ಇರುವ ಭೂಲೋಕದವರು ಕರೆಯುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು