Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 81:13 - ಕನ್ನಡ ಸಮಕಾಲಿಕ ಅನುವಾದ

13 “ಹಾ, ನನ್ನ ಜನರು ನನ್ನ ಮಾತನ್ನು ಕೇಳಿದರೆ ಒಳ್ಳೆದಾಗಿತ್ತು! ಇಸ್ರಾಯೇಲು ನನ್ನ ಮಾರ್ಗದಲ್ಲಿ ನಡೆದುಕೊಂಡರೆ ಮೇಲಾಗುತ್ತಿತ್ತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಮಾತನ್ನು ಕೇಳಿ, ನನ್ನ ಮಾರ್ಗದಲ್ಲಿ ನಡೆದರೆ ಎಷ್ಟೋ ಒಳ್ಳೆಯದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ಒಳಿತಾಗಿರುತ್ತಿತ್ತು ನನ್ನ ಜನರು ನನಗೆ ಕಿವಿಗೊಟ್ಟಿದ್ದರೆ I ಮೇಲಾಗಿರುತ್ತಿತ್ತು ಇಸ್ರಯೇಲರು ನನ್ನ ಹಾದಿ ಹಿಡಿದಿದ್ದರೆ, II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನನ್ನ ಪ್ರಜೆಗಳಾದ ಇಸ್ರಾಯೇಲ್ಯರು ನನ್ನ ಮಾತನ್ನು ಕೇಳಿ ನನ್ನ ಮಾರ್ಗದಲ್ಲಿ ನಡೆದರೆ ಎಷ್ಟೋ ಒಳ್ಳೇದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನನ್ನ ಜನರು ನನಗೆ ಕಿವಿಗೊಟ್ಟು ನನ್ನ ಚಿತ್ತಾನುಸಾರವಾಗಿ ಜೀವಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 81:13
8 ತಿಳಿವುಗಳ ಹೋಲಿಕೆ  

ನೀನು ನನ್ನ ಆಜ್ಞೆಗಳಿಗೆ ಕಿವಿಗೊಟ್ಟಿದ್ದರೆ ಚೆನ್ನಾಗಿತ್ತು! ಆಗ ನಿನ್ನ ಸಮಾಧಾನವು ನದಿಯಂತೆಯೂ, ನಿನ್ನ ನೀತಿಯು ಸಮುದ್ರದ ಅಲೆಗಳಂತೆಯೂ ಇರುತ್ತಿದ್ದವು,


ಅವರು ನನಗೆ ಭಯಪಟ್ಟು, ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಗೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೆಯದು. ಆಗ ಅವರಿಗೂ, ಅವರ ಮಕ್ಕಳಿಗೂ ಎಂದೆಂದಿಗೂ ಒಳ್ಳೆಯದಾಗುವುದು.”


“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಕೂಡಿಸುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು. ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.


ಅವರಿಗೆ ಜ್ಞಾನವಿದ್ದಿದ್ದರೆ ಈ ವಿಷಯಗಳನ್ನೆಲ್ಲಾ ಗ್ರಹಿಸುತ್ತಿದ್ದರು, ತಮ್ಮ ಕಡೆಕಾಲದಲ್ಲಿ ದುರವಸ್ಥೆ ಪ್ರಾಪ್ತವಾಗುವದೆಂದು ತಿಳಿದುಕೊಳ್ಳುತ್ತಿದ್ದರು.


ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ, ತಮ್ಮ ಸ್ವಂತ ಕುಯುಕ್ತಿಗಳಿಂದಲೇ ಹೊಟ್ಟೆ ತುಂಬಿಕೊಳ್ಳುವರು.


ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ಆದರೆ ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ, ಕಲ್ಪನೆಯ ಪ್ರಕಾರವೂ ನಡೆದುಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು