Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 81:15 - ಕನ್ನಡ ಸಮಕಾಲಿಕ ಅನುವಾದ

15 ಯೆಹೋವ ದೇವರನ್ನು ದ್ವೇಷಿಸುವವರು ತಮ್ಮನ್ನು ತಾವೇ ದೇವರಿಗೆ ಒಪ್ಪಿಸಿಕೊಡುವರು. ಆದರೂ ಅವರಿಗೆ ಶಿಕ್ಷೆ ತಪ್ಪುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನ ದ್ವೇಷಿಗಳು ಅವರ ಮುಂದೆ ಮುದುರಿಕೊಳ್ಳುವರು; ಅವರಾದರೋ ಸದಾಕಾಲವೂ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಮುದುರಿಕೊಳ್ಳುತ್ತಿದ್ದರಾ ಎದುರಾಳಿಗಳು ಅವರ ಮುಂದೆ I ಅಳಿಯದೆ ಉಳಿದುಕೊಳ್ಳುತ್ತಿತ್ತು ಅವರಿಗಾದ ದಂಡನೆ ಮುಗಿವಿಲ್ಲದೆ, II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೋವನ ದ್ವೇಷಿಗಳು ಅವರ ಮುಂದೆ ಮುದುರಿಕೊಳ್ಳುವರು; ಅವರಾದರೋ ಸದಾಕಾಲವೂ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೋವನ ಶತ್ರುಗಳು ಭಯದಿಂದ ನಡುಗುವರು. ಅವರು ಶಾಶ್ವತವಾಗಿ ದಂಡಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 81:15
13 ತಿಳಿವುಗಳ ಹೋಲಿಕೆ  

ಆದರೆ, ತಮ್ಮನ್ನು ಹಗೆಮಾಡುವವರಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ಅವರನ್ನು ತೆಗೆದುಹಾಕುತ್ತಾರೆ. ದೇವರು ತಮ್ಮನ್ನು ಹಗೆಮಾಡುವವರಿಗೆ ತಡಮಾಡದೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ ಎಂದು ತಿಳಿದುಕೊಳ್ಳಿರಿ.


ಅವರು ಕಿವಿ ಊದುವವರೂ ಚಾಡಿಹೇಳುವವರೂ ದೇವರನ್ನು ದ್ವೇಷಿಸುವವರೂ ಸೊಕ್ಕಿನವರೂ ಅಹಂಕಾರಿಗಳೂ ಬಡಾಯಿ ಕೊಚ್ಚುವವರೂ ಕೇಡನ್ನು ಕಲ್ಪಿಸುವವರೂ ತಂದೆತಾಯಿಗಳ ಮಾತನ್ನು ಕೇಳದವರೂ


ಮಾಂಸಭಾವದ ಮನಸ್ಸು ದೇವರಿಗೆ ಶತ್ರುವಾಗಿರುತ್ತದೆ. ಏಕೆಂದರೆ, ಅದು ದೇವರ ನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ.


ಯೆಹೂದವು ಎಂದೆಂದಿಗೂ ಜನಭರಿತವಾಗುವುದು. ಯೆರೂಸಲೇಮು ಸಹ ತಲತಲಾಂತರಕ್ಕೂ ನಿಲ್ಲುವುದು.


ನಿಮ್ಮ ಸೇವಕರ ಮಕ್ಕಳು ನಿಮ್ಮ ಸನ್ನಿಧಿಯಲ್ಲಿ ಬದುಕುವರು; ಅವರ ಸಂತತಿಯು ನಿಮ್ಮ ಮುಂದೆ ನೆಲೆಯಾಗಿರುವುದು.”


ನಿಮ್ಮ ಪ್ರೀತಿಯು ಜೀವಕ್ಕಿಂತ ಶ್ರೇಷ್ಠವಾದದ್ದು. ನನ್ನ ತುಟಿ ನಿಮ್ಮನ್ನು ಮಹಿಮೆಪಡಿಸುವುದು.


ನೀನು ಅವುಗಳಿಗೆ ಅಡ್ಡ ಬೀಳಬಾರದು ಮತ್ತು ಆರಾಧಿಸಲೂಬಾರದು. ಏಕೆಂದರೆ ನಿನ್ನ ದೇವರಾದ ನಾನು, ನನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತನಾದ ಯೆಹೋವ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆತಾಯಿಗಳ ಅಪರಾಧವನ್ನು ಮಕ್ಕಳ ಮೇಲೆಯೂ ಮೂರನೆಯ ನಾಲ್ಕನೆಯ ತಲೆಗಳವರೆಗೂ ಬರಮಾಡುವೆನು.


ಅವರು ಕಟ್ಟಿದ ಮನೆಗಳಲ್ಲಿ ಬೇರೆಯವರು ವಾಸಮಾಡುವುದಿಲ್ಲ. ಅವರು ನೆಟ್ಟ ತೋಟದ ಫಲವನ್ನು ಇನ್ನೊಬ್ಬರು ತಿನ್ನುವುದಿಲ್ಲ. ಏಕೆಂದರೆ, ಮರಗಳ ಹಾಗೆ ನನ್ನ ಜನರು ಬಹುಕಾಲ ಬಾಳುವರು. ನಾನು ಆಯ್ದುಕೊಂಡವರು ತಮ್ಮ ಕೈಕೆಲಸಗಳನ್ನು ಅನುಭವಿಸುವರು.


“ ‘ನೀವು ನನ್ನ ನಿಯಮಗಳ ಪ್ರಕಾರ ನಡೆದುಕೊಂಡು, ನನ್ನ ಆಜ್ಞೆಗಳನ್ನು ಕೈಗೊಂಡು ಅವುಗಳಂತೆ ನಡೆದರೆ,


ನೀವು ನಿಮ್ಮ ಶತ್ರುಗಳನ್ನು ಹಿಂದಟ್ಟುವಾಗ, ಅವರು ಖಡ್ಗದಿಂದ ನಿಮ್ಮ ಮುಂದೆ ಬೀಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು