Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 83:7 - ಕನ್ನಡ ಸಮಕಾಲಿಕ ಅನುವಾದ

7 ಗೆಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, ಟೈರಿನವರು, ಫಿಲಿಷ್ಟಿಯರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇವರೆಲ್ಲಾ ಏಕಮನಸ್ಸಿನಿಂದ ಕೂಡಿ, ನಿನಗೆ ವಿರುದ್ಧವಾಗಿ ಒಳಸಂಚು ಮಾಡುತ್ತಾರಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇವರೆಲ್ಲಾ ಏಕಮನಸ್ಸಿನಿಂದ ಕೂಡಿ ನಿನಗೇ ವಿರೋಧವಾಗಿ ಒಳಸಂಚು ಮಾಡುತ್ತಾರಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 83:7
7 ತಿಳಿವುಗಳ ಹೋಲಿಕೆ  

ಅದರೊಂದಿಗೆ ಗೆಬಾಲ್ಯರ ಪ್ರಾಂತ್ಯ, ಹೆರ್ಮೋನ್ ಬೆಟ್ಟದ ಕೆಳಗೆ ಇರುವ ಬಾಲ್ಗಾದಿನಿಂದ ಹಮಾತಿನ ದಾರಿಯವರೆಗೂ ಇರುವ ಲೆಬನೋನಿನ ಪೂರ್ವ ಪ್ರದೇಶ.


ಗೆಬಾಲಿನ ಹಿರಿಯರೂ ಅದರ ಜ್ಞಾನಿಗಳೂ ನಿನ್ನ ಬಿರುಕುಗಳನ್ನು ಮುಚ್ಚುವವರಾಗಿ ನಿನ್ನಲ್ಲಿದ್ದಾರೆ. ಸಮುದ್ರದ ಸಕಲ ನಾವೆಗಳೂ ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು ನಿನಗೆ ಸರಕುಗಳನ್ನು ತಂದೊಪ್ಪಿಸುತ್ತಿದ್ದವು.


ಟೈರಿಗೆ ಹೇಳು, ಸಮುದ್ರದ ಪ್ರವೇಶದಲ್ಲಿ ವಾಸಿಸುವವಳೇ, ಬಹು ದ್ವೀಪಗಳ ಜನರ ನಡುವೆ ವ್ಯಾಪಾರವನ್ನು ನಡೆಸುವವಳೇ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, “ ‘ಟೈರ್ ನಗರಿಯೇ, “ನಾನು ಪೂರ್ಣ ಸೌಂದರ್ಯವತಿ,” ಎಂದು ನೀನು ಅಂದುಕೊಂಡಿದ್ದೀಯಲ್ಲಾ!


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಟೈರ್ ಪಟ್ಟಣದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಸಹೋದರರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೆ ಸೆರೆಯಾಳುಗಳ ಸಂಪೂರ್ಣ ಸಮುದಾಯಗಳನ್ನು ಎದೋಮಿಗೆ ಮಾರಿಬಿಟ್ಟರು.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಇಸ್ರಾಯೇಲರು ಈಜಿಪ್ಟಿನಿಂದ ಬರುವಾಗ ಅಮಾಲೇಕ್ಯರು ಅವರ ಮಾರ್ಗಕ್ಕೆ ಅಡ್ಡಗಟ್ಟಿ ತೊಂದರೆಪಡಿಸಿದರು, ಆದ್ದರಿಂದ ನಾನು ಅವರಿಗೆ ಮುಯ್ಯಿತೀರಿಸುವೆನು.


ಸಮುಯೇಲನ ವಾಕ್ಯವು ಇಸ್ರಾಯೇಲದಲ್ಲಿ ಹರಡಿತು. ಇಸ್ರಾಯೇಲರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು, ಎಬೆನೆಜೆರಿನ ಸಮೀಪದಲ್ಲಿ ದಂಡಿಳಿದರು. ಫಿಲಿಷ್ಟಿಯರು ಅಫೇಕಿನಲ್ಲಿ ದಂಡಿಳಿದರು.


ಸೌಲನ ದಿವಸಗಳಲ್ಲಿ ರೂಬೇನ್ ವಂಶದವರು ಹಗ್ರೀಯರ ಸಂಗಡ ಯುದ್ಧಮಾಡಿ, ಅವರ ಕೈಯಲ್ಲಿ ಸೋತುಹೋದರು. ರೂಬೇನ್ ವಂಶದವರು ಗಿಲ್ಯಾದಿನ ಸಮಸ್ತ ಪೂರ್ವ ದಿಕ್ಕಿನಾದ್ಯಂತ ಹಗ್ರೀಯರ ವಾಸಸ್ಥಾನಗಳನ್ನು ಆಕ್ರಮಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು